‘ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್’; ‘ಬ್ರಹ್ಮಗಂಟು’ ನಟಿ ಶೋಭಿತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಲೆಟರ್ ಪತ್ತೆ

ಶೋಭಿತಾಗೆ ಕನ್ನಡ ಚಿತ್ರರಂಗದ ಜೊತೆ ನಂಟು ಇತ್ತು. ‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಸಿನಿಮಾಗಳಲ್ಲಿ ಶೋಭಿತಾ ನಟಿಸಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದ್ದಾರೆ. ಈಗ ಡೆತ್​ನೋಟ್ ಸಿಕ್ಕಿದೆ.

‘ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್’; ‘ಬ್ರಹ್ಮಗಂಟು’ ನಟಿ ಶೋಭಿತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಲೆಟರ್ ಪತ್ತೆ
ಶೋಭಿತಾ
Follow us
ರಾಜೇಶ್ ದುಗ್ಗುಮನೆ
|

Updated on:Dec 02, 2024 | 2:27 PM

ಕನ್ನಡದ ನಟಿ ಶೋಭಿತಾ ಶಿವಣ್ಣ ಅವರು ಇತ್ತೀಚೆಗೆ ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಮದುವೆ ಆಗಿ ಇನ್ನೂ ಎರಡು ವರ್ಷ ತುಂಬಿತ್ತಷ್ಟೇ. ಆಗಲೇ ಜೀವನ ಕೊನೆ ಮಾಡಿಕೊಳ್ಳುವ ನಿರ್ಧಾರಕ್ಕೆ ಅವರು ಬಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್​ನ ಗಚ್ಚಿಬೌಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಪೊಲೀಸರಿಗೆ ಆತ್ಮಹತ್ಯೆ ಪತ್ರ ಸಿಕ್ಕಿದೆ. ಇದರಲ್ಲಿ ಒಂದು ವಿಚಾರ ಹೈಲೈಟ್ ಆಗಿದೆ.

ಶೋಭಿತಾಗೆ ಕನ್ನಡ ಚಿತ್ರರಂಗದ ಜೊತೆ ನಂಟು ಇತ್ತು. ‘ಎರಡೊಂದ್ಲಾ ಮೂರು’, ‘ಒಂದು ಕತೆ ಹೇಳ್ಲಾ’ ಸಿನಿಮಾಗಳಲ್ಲಿ ಶೋಭಿತಾ ನಟಿಸಿದ್ದರು. ‘ಬ್ರಹ್ಮಗಂಟು’ ಧಾರಾವಾಹಿ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದ್ದಾರೆ.

ಪೊಲೀಸರಿಗೆ ಶೋಭಿತಾ ಸೂಸೈಡ್​ ಲೇಟರ್ ಸಿಕ್ಕಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಬರೆಯಲಾಗಿದೆ. ‘ಜೀವನದಲ್ಲಿ ಎಲ್ಲವೂ ಪೆರ್ಫೆಕ್ಟ್ ಆಗಿದೆ’ ಎಂದು ಬರೆಯಲಾಗಿದೆ. ಇದರ ಅರ್ಥಕ್ಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೆರೆ ಹೊರೆಯವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ‘ಶೋಭಿತಾ ಸಾವಿಗೆ ಖಿನ್ನತೆ ಕಾರಣವೇ? ಪತಿಯೊಂದಿಗೆ ಭಿನ್ನಾಭಿಪ್ರಾಯ ಇತ್ತೇ’ ಎಂಬ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ.

ಶೋಭಿತಾ ಮದುವೆ ಬಳಿಕ ಧಾರಾವಾಹಿ ಹಾಗೂ ಸಿನಿಮಾಗಳಿಂದ ದೂರ ಉಳಿದಿದ್ದರು. ಈ ವಿಚಾರವಾಗಿ ಪೊಲೀಸರು ಪತಿ ಸುಧೀರ್ ರೆಡ್ಡಿಯನ್ನು ಪ್ರಶ್ನೆ ಮಾಡುತ್ತಿದ್ದಾರೆ.  ಸುಧೀರ್​​ ರೆಡ್ಡಿ ಮೂರು ದಿನಗಳ ಹಿಂದೆ ಗೋವಾಕ್ಕೆ ತೆರಳಿದ್ದರು. ಆತ್ಮಹತ್ಯೆಗೂ ಮುನ್ನ ಶೋಭಿತಾ ತಮ್ಮ ಸಹೋದರಿಯೊಂದಿಗೆ ಮಾತುಕತೆ ಮಾಡಿದ್ದರು. ‘ನನಗೆ ತುಂಬಾ ಖುಷಿಯಾಗಿದೆ. 2 ವಾರದ ನಂತರ ಊರಿಗೆ ಬರುತ್ತೇನೆ’ ಎಂದು ಸಹೋದರಿ ಬಳಿ ಹೇಳಿಕೊಂಡಿದ್ದರು. ಆದರೆ, ಈಗ ಅವರ ಶವವಾಗಿ ಊರಿಗೆ ಬರುತ್ತಿರುವುದು ಬೇಸರದ ಸಂಗತಿ.

ಇದನ್ನೂ ಓದಿ: ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಇನ್ನಿಲ್ಲ; ಹೈದರಾಬಾದ್​ನಲ್ಲಿ ನಿಧನ

ಸದ್ಯ ಹೈದರಾಬಾದ್​ನಲ್ಲಿ ಶೋಭಿತಾ ಮೃತದೇಹ ಇದೆ. ಈಗಾಗಲೇ ಮರಣೋತ್ತರ ಪರೀಕ್ಷೆ ಕೂಡ ಆಗಿದೆ. ಆ ಬಳಿಕ ಬೆಂಗಳೂರಿಗೆ ಮೃತದೇಹ ಸ್ಥಾಳಾಂತರಗೊಳ್ಳುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:12 pm, Mon, 2 December 24

ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ
ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ
ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಉಲ್ಟಾ ಹೊಡೆದ ಶೋಭಾ ಶೆಟ್ಟಿ
ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಉಲ್ಟಾ ಹೊಡೆದ ಶೋಭಾ ಶೆಟ್ಟಿ
ಅಯ್ಯಪ್ಪಸ್ವಾಮಿ ದೇವಾಲಯದ 18 ಮೆಟ್ಟಿಲುಗಳ ಮಹತ್ವ ತಿಳಿಯಿರಿ
ಅಯ್ಯಪ್ಪಸ್ವಾಮಿ ದೇವಾಲಯದ 18 ಮೆಟ್ಟಿಲುಗಳ ಮಹತ್ವ ತಿಳಿಯಿರಿ