AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ನಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಶೋಷಿತೆ’, ತೆಲುಗಿನ ‘ಶ್ರೀಮತಿ’ ಸಿನಿಮಾ

ಕನ್ನಡದ ‘ಶೋಷಿತೆ’ ಸಿನಿಮಾ ತೆಲುಗಿನಲ್ಲಿ ‘ಶ್ರೀಮತಿ’ ಎಂದು ಡಬ್ ಆಗಿದೆ. ಯೂಟ್ಯೂಬ್​ನಲ್ಲಿ ವೀಕ್ಷಣೆಗೆ ಲಭ್ಯವಿರುವ ಈ ಸಿನಿಮಾ 24 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಬೇರೆ ಭಾಷೆಗಳಿಗೂ ಡಬ್ ಮಾಡಲು ಚಿತ್ರತಂಡ ತಯಾರಿ ನಡೆದಿದೆ. ಜಾನ್ವಿ ರಾಯಲ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಶಿರಿಷಾ ಆಳ್ಳ ನಿರ್ಮಾಣದ ಈ ಚಿತ್ರಕ್ಕೆ ಶಶಿಧರ್ ನಿರ್ದೇಶನ ಮಾಡಿದ್ದಾರೆ.

ಯೂಟ್ಯೂಬ್​ನಲ್ಲಿ ಸದ್ದು ಮಾಡುತ್ತಿದೆ ಕನ್ನಡದ ‘ಶೋಷಿತೆ’, ತೆಲುಗಿನ ‘ಶ್ರೀಮತಿ’ ಸಿನಿಮಾ
Janvi Rayala
ಮದನ್​ ಕುಮಾರ್​
|

Updated on: Jan 15, 2025 | 6:58 PM

Share

ಕೆಲವು ಸಿನಿಮಾಗಳು ಚಿತ್ರಮಂದಿರದಲ್ಲಿ ಸಕ್ಸಸ್ ಕಾಣದೇ ಇರಬಹುದು. ಆದರೆ ಬೇರೆ ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆ ಆದಾಗ ಜನಮೆಚ್ಚುಗೆ ಪಡೆಯುತ್ತವೆ. ಅದಕ್ಕೆ ಬೆಸ್ಟ್ ಉದಾಹರಣೆ ಎಂದರೆ ಕನ್ನಡದ ‘ಶೋಷಿತೆ’ ಸಿನಿಮಾ. ಕಳೆದ ವರ್ಷ ತೆರೆಕಂಡ ಈ ಸಿನಿಮಾಗೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿತ್ತು. ನೋಡಿದ ಪ್ರೇಕ್ಷಕರು ಕೂಡ ಹೊಗಳಿದ್ದರು. ಆದರೆ ಉತ್ತಮ ಕಲೆಕ್ಷನ್ ಮಾಡಲು ಸಾಧ್ಯವಾಗಿರಲಿಲ್ಲ. ವಿಶೇಷ ಏನೆಂದರೆ, ಈ ಸಿನಿಮಾ ಈಗ ಯೂಟ್ಯೂಬ್​ನಲ್ಲಿ ಸದ್ದು ಮಾಡುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗಿಗೂ ಡಬ್ ಆಗಿ ಮಿಲಿಯನ್​ಗಟ್ಟಲೆ ವೀಕ್ಷಣೆ ಕಾಣುತ್ತಿದೆ.

ಟೆಕ್ಕಿ ಶಶಿಧರ್ ಅವರು ‘ಶೋಷಿತೆ’ ಸಿನಿಮಾಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಹಾಗೂ ಸಂಕಲನ ಮಾಡಿದ್ದಾರೆ. ‘ಎ ನೇಚರ್ ವ್ಯೂ ಔಟ್‌ಡೋರ್ ಕಾರ್ನಿವಲ್ ಪ್ರೊಡಕ್ಷನ್’ ಮೂಲಕ ಶಿರಿಷಾ ಆಳ್ಳ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾವನ್ನು ಒಟಿಟಿಗೆ ನೀಡಬೇಕು ಎಂದು ನಿರ್ದೇಶಕರು 8 ತಿಂಗಳಿಗೂ ಹೆಚ್ಚು ಕಾಲ ಪ್ರಯತ್ನಿಸಿದ್ದರು. ಅಮೆಜಾನ್ ಪ್ರೈಂ ವಿಡಿಯೋ, ನೆಟ್‌ಫ್ಲಿಕ್ಸ್ ಮುಂತಾದ ಒಟಿಟಿ ಸಂಸ್ಥೆಗಳನ್ನು ಸಂಪರ್ಕಿಸಿದ್ದರು. ಆದರೆ ಸೂಕ್ತ ಸ್ಪಂದನೆ ಸಿಗಲಿಲ್ಲ. ಆಗ ಚಿತ್ರತಂಡಕ್ಕೆ ಕಾಣಿಸಿದ್ದೇ ಯೂಟ್ಯೂಬ್ ದಾರಿ.

ಕನ್ನಡ ಸಿನಿಮಾ ಎಂಬ ಕಾರಣಕ್ಕೆ ಟಾಪ್ ಒಟಿಟಿ ಸಂಸ್ಥೆಗಳು ‘ಶೋಷಿತೆ’ ಚಿತ್ರವನ್ನು ಖರೀದಿ ಮಾಡಲಿಲ್ಲವಂತೆ. ಕಥಾವಸ್ತು ಉತ್ತಮವಾಗಿ ಇರುವುದರಿಂದ ಖಂಡಿತವಾಗಿ ಪ್ರೇಕ್ಷಕರು ನೋಡುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕೆ ಇತ್ತು. ಹಾಗಾಗಿ ‘ಶ್ರೀಮತಿ’ ಎಂಬ ಶೀರ್ಷಿಕೆಯಲ್ಲಿ ತೆಲುಗು ಭಾಷೆಗೆ ಈ ಸಿನಿಮಾವನ್ನು ಡಬ್ ಮಾಡಿ ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಯಿತು. ಕೆಲವೇ ದಿನಗಳಲ್ಲಿ ಈ ಸಿನಿಮಾ 2.4 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಕಂಡಿರುವುದು ವಿಶೇಷ.

ಇದನ್ನೂ ಓದಿ: ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ

ಯೂಟ್ಯೂಬ್​ನಲ್ಲಿ ‘ಶ್ರೀಮತಿ’ ಸಿನಿಮಾವನ್ನು ನೋಡಿ ಮೆಚ್ಚಿಕೊಂಡ ಅನೇಕರು ಟಿಕೆಟ್ ದರವನ್ನು ಚಿತ್ರತಂಡಕ್ಕೆ ಪಾವತಿ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಕನ್ನಡದ ‘ಶೋಷಿತೆ’ ಕೂಡ ರಿಲೀಸ್ ಆಗಿದ್ದು, ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಯಾವುದೇ ಸ್ಟಾರ್​ ಕಲಾವಿದರು ಇಲ್ಲದೇ ಇದ್ದರೂ ಕೂಡ ಜನರು ಈ ಸಿನಿಮಾಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗೆ ಡಬ್ ಮಾಡುವ ಆಲೋಚನೆ ಕೂಡ ಚಿತ್ರತಂಡಕ್ಕೆ ಇದೆ. ಮಧ್ಯಮ ವರ್ಗದ ಗೃಹಿಣಿಯೊಬ್ಬಳ ಹೋರಾಟದ ಕಥೆ ಈ ಸಿನಿಮಾದಲ್ಲಿ ಇದೆ. ನಟಿ, ನಿರೂಪಕಿ ಡಾ. ಜಾನ್ವಿ ರಾಯಲ ಅವರು ‘ಶೋಷಿತೆ’ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರೂಪ ರಾಯಪ್ಪ, ವೆಂಕ್ಷ, ದರ್ಶನ್, ಪ್ರಶಾಂತ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಅವಧಿ ಒಂದು ಗಂಟೆ ನಲವತ್ತೆರಡು ನಿಮಿಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ