‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ

ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಶ್ರೆಯಾಂಕಾ ಪಾಟೀಲ್ ಕನ್ನಡದ ‘ಗೌರಿ’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ಸಿನಿಮಾದ ಹಾಡು ಬಿಡುಗಡೆ ಮಾಡಿದ್ದಾರೆ. ವೇದಿಕೆಯಲ್ಲಿ ಹಾಡಿಗೆ ಡ್ಯಾನ್ಸ್ ಸಹ ಮಾಡಿದ್ದಾರೆ.

‘ಗೌರಿ’ ಸಿನಿಮಾಕ್ಕೆ ಶ್ರೇಯಾಂಕಾ ಪಾಟೀಲ್ ಬೆಂಬಲ, ಹಾಡು ಬಿಡುಗಡೆ
Follow us
ಮಂಜುನಾಥ ಸಿ.
|

Updated on: May 25, 2024 | 4:14 PM

ಆರ್​ಸಿಬಿ ಕಪ್ (RCB) ಬರವನ್ನು ನೀಗಿಸಿದ ಶ್ರೇಯ ಮಹಿಳಾ ಕ್ರಿಕೆಟ್ ತಂಡಕ್ಕೆ ಸಲ್ಲುತ್ತದೆ. ಕಳೆದ ವಿಮೆನ್ ಐಪಿಎಲ್ ನಲ್ಲಿ ಆರ್​ಸಿಬಿ ಮಹಿಳಾ ತಂಡ ಕಪ್ ಗೆದ್ದಿದೆ. ತಂಡ ಕಪ್ ಗೆಲ್ಲುವಲ್ಲಿ ಕನ್ನಡತಿ ಶ್ರೆಯಾಂಕಾ ಪಾಟೀಲ್ ನೀಡಿದ ಕೊಡುಗೆ ದೊಡ್ಡದು. ಭಾರತ ಕ್ರಿಕೆಟ್ ತಂಡಕ್ಕೂ ಆಡುವ ಶ್ರೆಯಾಂಕಾ, ಕಪ್ ಗೆದ್ದ ನಂತರ ದೊಡ್ಡ ಸೆಲೆಬ್ರಿಟಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಸೇರಿದಂತೆ ಒಟ್ಟಾರೆ ಸಾಮಾಜಿಕವಾಗಿ ಬಹಳ ಸಕ್ರಿಯವಾಗಿರುವ ಶ್ರೆಯಾಂಕಾ ಪಾಟೀಲ್, ಇತ್ತೀಚೆಗೆ ಕನ್ನಡದ ಟಿವಿ ರಿಯಾಲಿಟಿ ಶೋ ಒಂದಕ್ಕೆ ಬಂದಿದ್ದರು. ಇದೀಗ ಕನ್ನಡ ಸಿನಿಮಾದ ಹಾಡಿನ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಇಂದ್ರಜಿತ್ ಲಂಕೇಶ್ ನಿರ್ದೇಶಿಸಿ ಅವರ ಪುತ್ರ ಸಮರ್ಜಿತ್ ಲಂಕೇಶ್ ನಟಿಸುತ್ತಿರುವ ಗೌರಿ ಸಿನಿಮಾದ. ಈಗಾಗಲೇ ಹಾಡಿನ ಮೂಲಕ ಭಾರಿ ಸದ್ದು ಮಾಡುತ್ತಿದೆ. ಇದೀಗ ಮತ್ತೊಂದು ರೋಮ್ಯಾಂಟಿಕ್ ಹಾಡಿನ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಸಮರ್ಜಿತ್ ಲಂಕೇಶ್ ಮತ್ತು ಸಾನ್ಯಾ ಅಯ್ಯರ್ ನಟನೆಯ ‘ಗೌರಿ’ ಸಿನಿಮಾದ ರೊಮ್ಯಾಂಟಿಕ್ ಹಾಡಿನ ಟೀಸರ್ ಮೈಸೂರಿನಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಟೀಸರ್ ಬಿಡುಗಡೆ ಮಾಡಿರುವುದು ಕರ್ನಾಟಕದ ಹೆಮ್ಮೆಯ ಕ್ರಿಕೆಟ್ ಆಟಗಾರ್ತಿ ಶ್ರೆಯಾಂಕಾ ಪಾಟೀಲ್.

ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಚಿತ್ರದ ಹಾಡನ್ನು ರಿಲೀಸ್ ಮಾಡಲಾಯಿತು. ಖ್ಯಾತ ಕ್ರಿಕೆಟರ್ ಶ್ರೇಯಾಂಕ ಪಾಟೀಲ್ ಸಮಾರಂಭದಲ್ಲಿ ಭಾಗಿಯಾಗಿ ಗೌರಿ ಸಿನಿಮಾದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ್ದು ವಿಶೇಷ. ಮೊದಲ ಬಾರಿಗೆ ಸಿನಿಮಾ ಸಮಾರಂಭದಲ್ಲಿ ಭಾಗಿಯಾಗಿದ್ದ ಶ್ರೀಯಾಂಕಾ ಪಾಟೀಲ್, ಚಿತ್ರತಂಡಕ್ಕೆ ಶುಭ ಕೋರಿದರು. ‘ಐ ಲವ್ ಯು ಸಮಂತಾ…’ ಹಾಡಿನ ಟೀಸರ್ ರಿಲೀಸ್ ಆಗುತ್ತಿದಂತೆ ವಿದ್ಯಾರ್ಥಿಗಳು ಕೂಡ ಖುಷಿಯಿಂದ ಕುಣಿದು ಕುಪ್ಪಳಿಸಿದರು.

ಇದನ್ನೂ ಓದಿ:Shreyanka Patil: WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಶ್ರೇಯಾಂಕಾ ಪಾಟೀಲ್

ಕಾರ್ಯಕ್ರಮದಲ್ಲಿ ಒತ್ತಾಯದ ಮೇರೆಗೆ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಜೊತೆ ಶ್ರೀಯಾಂಕ ಪಾಟೀಲ್ ಸಖತ್ ಡ್ಯಾನ್ಸ್ ಮಾಡಿದರು. ‘ಗೌರಿ’ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಇಬ್ಬರ ಡ್ಯಾನ್ಸ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಒಳ್ಳೆಯ ಕ್ರಿಕೆಟ್ ಆಟಗಾರ್ತಿ ಆಗಿರುವ ಶ್ರೆಯಾಂಕಾ ಪಾಟೀಲ್ ಒಳ್ಳೆಯ ಡ್ಯಾನ್ಸರ್ ಸಹ. ಅವರು ತಮ್ಮ ಕೆಲವು ಡ್ಯಾನ್ಸ್ ವಿಡಿಯೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಮಾರಂಭದಲ್ಲಿ ಶ್ರೀಯಾಂಕಾ ಪಾಟೀಲ್, ಸಮರ್ಜಿತ್ ಜೊತೆ ಕ್ರಿಕೆಟ್ ಸಹ ಆಡಿದರು. ಸಮರ್ಜಿತ್ ಬೌಲಿಂಗ್ ಗೆ ಬ್ಯಾಟ್ ಬೀಸಿದರು ಶ್ರೆಯಾಂಕಾ ಪಾಟೀಲ್. ಬಾಲ್ ಹಿಡಿದ ವಿದ್ಯಾರ್ಥಿಗಳಿಗೆ ಆಟೋಗ್ರಾಫ್ ಸಹ ನೀಡಿದರು ಆರ್ ಸಿ ಬಿ ಆಲ್ರೌಂಡರ್.

‘ಗೌರಿ’ ಸಿನಿಮಾದ ‘ಟೈಮ್ ಬರುತ್ತೆ…’ ಎನ್ನುವ ಹಾಡಿನ ಮೂಲಕ ಅಭಿಮಾನಿಗಳನ್ನುಮೋಡಿ ಮಾಡಿದೆ. ಇದೀಗ ‘ಐ ಲವ್ ಯು ಸಮಂತಾ…’ ಎನ್ನುವ ರೋಮ್ಯಾಂಟಿಕ್ ಹಾಡಿನ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಅಂದಹಾಗೆ ಈ ಹಾಡಿನ ಸಾಹಿತ್ಯವನ್ನು ಖ್ಯಾತ ಸಾಹಿತಿ ಕವಿರಾಜ್ ಬರೆದಿದ್ದು ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಾವೇದ್ ಅಲಿ ಹಾಡಿದ್ದಾರೆ. ಸಿನಿಮಾದಲ್ಲಿ ಸಮರ್ಜಿತ್​ ಜೊತೆ ಮಾಜಿ ಬಿಗ್​ಬಾಸ್ ಸ್ಪರ್ಧಿ, ಸಾನ್ಯಾ ಐಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ