AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ‘ವಿಷ್ಣುಪ್ರಿಯ’ ಚಿತ್ರದ ರೊಮ್ಯಾಂಟಿಕ್ ಸಾಂಗ್​ ನೋಡಿ..

‘ವಿಷ್ಣುಪ್ರಿಯ’ ಸಿನಿಮಾದ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ದೃಶ್ಯಗಳ ಕಾರಣದಿಂದಲೂ ಗಮನ ಸೆಳೆಯುತ್ತಿದೆ. ಖ್ಯಾತ ಗೀತರಚನಕಾರ ವಿ. ನಾಗೇಂದ್ರ ಪ್ರಸಾದ್ ಅವರು ಈ ಹಾಡು ಬರೆದಿದ್ದಾರೆ. ‘ಎ2 ಮ್ಯೂಸಿಕ್​’ ಮೂಲಕ ಈ ಸಾಂಗ್​ ಬಿಡುಗಡೆ ಆಗಿದೆ. ಶ್ರೇಯಸ್ ಮಂಜು ಹಾಗೂ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ಈ ಸಿನಿಮಾಗೆ ವಿ.ಕೆ. ಪ್ರಕಾಶ್ ನಿರ್ದೇಶನ ಮಾಡಿದ್ದಾರೆ.

ಕಣ್ಸನ್ನೆ ಹುಡುಗಿಯ ಕನ್ನಡ ಹಾಡು; ‘ವಿಷ್ಣುಪ್ರಿಯ’ ಚಿತ್ರದ ರೊಮ್ಯಾಂಟಿಕ್ ಸಾಂಗ್​ ನೋಡಿ..
ಶ್ರೇಯಸ್​ ಮಂಜು, ಪ್ರಿಯಾ ಪ್ರಕಾಶ್​ ವಾರಿಯರ್​
Follow us
ಮದನ್​ ಕುಮಾರ್​
|

Updated on: Feb 08, 2024 | 5:58 PM

ಒಂದೇ ಒಂದು ವೈರಲ್​ ವಿಡಿಯೋದಿಂದ ಕಣ್ಸನ್ನೆ ಹುಡುಗಿ ಎಂದೇ ಫೇಮಸ್​ ಆದವರು ನಟಿ ಪ್ರಿಯಾ ಪ್ರಕಾಶ್​ ವಾರಿಯರ್​. ಆ ಬಳಿಕ ಅವರಿಗೆ ಸಿನಿಮಾ ಅವಕಾಶಗಳು ಹೆಚ್ಚಾದವು. ಕನ್ನಡದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾ ಪ್ರಕಾಶ್​ ವಾರಿಯರ್​ (Priya P. Varrier) ನಟನೆಯ ‘ವಿಷ್ಣುಪ್ರಿಯ’ ಸಿನಿಮಾ (Vishnu Priya) ಕೌತುಕ ಮೂಡಿಸಿದೆ. ಈ ಸಿನಿಮಾಗೆ ಶ್ರೇಯಸ್​ ಮಂಜು ಹೀರೋ. ತೊಂಬತ್ತರ ದಶಕದ ಸಮ್ಮೋಹಕ ಪ್ರೇಮಕಥಾನಕ ಹೊಂದಿರುವ ಚಿತ್ರದಿಂದ ಹೊಸ ಹಾಡು ಬಿಡುಗಡೆ ಆಗಿದೆ. ಈ ಹಿಂದೆ ‘ಪಡ್ಡೆಹುಲಿ’ ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು (Shreyas Manju) ಈಗ ವಿಷ್ಣುಪ್ರಿಯನಾಗಿ ಬರುತ್ತಿದ್ದಾರೆ.

ಈ ಸಿನಿಮಾದಲ್ಲಿ ಶ್ರೇಯಸ್​ ಮಂಜು ಅವರಿಗೆ ವಿಶಿಷ್ಟವಾದ ಪಾತ್ರವಿದೆ. ಈ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಅವರು ತಯಾರಾಗಿದ್ದಾರೆ. ‘ವಿಷ್ಣುಪ್ರಿಯ’ ಸಿನಿಮಾ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದ ತಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಫೀಲ್​ ಹೊಂದಿರುವ ಈ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಿದೆ. ಸಿನಿಪ್ರಿಯರಿಂದ ಮೆಚ್ಚುಗೆ ಗಳಿಸುತ್ತಿದೆ.

ಇದನ್ನೂ ಓದಿ: ನೀರಿನಲ್ಲಿ ಮುಳುಗಿ ಮೈ ಮರೆತ ನಟಿ ಪ್ರಿಯಾ ಪ್ರಕಾಶ್​ ವಾರಿಯರ್​

‘ಚಿಗುರು ಚಿಗುರೊ ಸಮಯ ಹಿತವಾದ ಒಂದು ಮೌನ.. ಒಲವು ಚಿಗುರೊ ಸಮಯ ಎದೆ ಬೇರಿನಲ್ಲಿ ಮೌನ…’ ಎಂಬ ಸಾಲಿನಿಂದ ಶುರುವಾಗುವ ಈ ಗೀತೆಯು ಸಂಗೀತ ಮತ್ತು ಸಾಹಿತ್ಯದ ಜೊತೆಗೆ ರೊಮ್ಯಾಂಟಿಕ್​ ಆದ ದೃಶ್ಯದ ಮೂಲಕವೂ ಗಮನ ಸೆಳೆಯುತ್ತಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಇದಕ್ಕೆ ಸಾಹಿತ್ಯ ಒದಗಿಸಿದ್ದಾರೆ. ಈ ಮೂಲಕ ವರ್ಷದ ಆರಂಭದಲ್ಲಿಯೇ ನವಿರು ಭಾವವೊಂದನ್ನು ನಾಗೇಂದ್ರ ಪ್ರಸಾದ್ ಕೇಳುಗರಿಗೆ ನೀಡಿದ್ದಾರೆ.

ಇದನ್ನೂ ಓದಿ: ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

ನಜೀನ್ ಅರ್ಷಾದ್ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಈ ಸಿನಿಮಾದ ಮೂಲಕ ಕೇರಳದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಕನ್ನಡದಲ್ಲಿಯೂ ಕಮಾಲ್ ಮಾಡಿದ್ದಾರೆ ಎನ್ನಬಹುದು. ಮತ್ತೆ ಮತ್ತೆ ಕೇಳಿಸಿಕೊಳ್ಳುವ ಗುಣ ಹೊಂದಿರುವ ಈ ಡ್ಯುಯೆಟ್​ ಗೀತೆಯ ಪ್ರಭೆಯಲ್ಲಿ ವಿಷ್ಣುಪ್ರಿಯನ ಕ್ರೇಜ್ ಮತ್ತಷ್ಟು ಹೆಚ್ಚುತ್ತಿದೆ. ಈ ವರ್ಷದ ಸುಮಧುರ ಹಾಡು ಎಂದು ಗುರುತಿಸಿಕೊಳ್ಳುವ ಎಲ್ಲ ಗುಣಗಳೂ ಈ ಹಾಡಿಗೆ ಇದೆ. ವಿ.ಕೆ. ಪ್ರಕಾಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

‘ವಿಷ್ಣುಪ್ರಿಯ’ ಸಿನಿಮಾದ ಹಾಡು:

90ರ ದಶಕದಲ್ಲಿ ನಡೆಯುವ ಕಥೆ ಈ ಸಿನಿಮಾದಲ್ಲಿ ಇರಲಿದೆ. ಶ್ರೇಯಸ್ ಮಂಜು ಮತ್ತು ಪ್ರಿಯಾ ವಾರಿಯರ್ ಅವರ ಕಾಂಬಿನೇಷನ್​ ಕೌತುಕ ಮೂಡಿಸಿದೆ. ಕೆ. ಮಂಜು ನಿರ್ಮಾಣದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಸುಚೇಂದ್ರ ಪ್ರಸಾದ್, ಅಚ್ಯುತ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಇದರಲ್ಲಿ ಪ್ರೇಮಕಥೆ ಅಷ್ಟೇ ಅಲ್ಲದೇ ತೊಂಬತ್ತರ ದಶಕದಲ್ಲಿ ನಡೆದ ನೈಜ ಕಥೆಯೂ ಹೌದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ