AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೈಡ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಿದ ಶ್ರಿಯಾ ಶರಣ್, ಬೆಂಗಳೂರಿನ ಬಗ್ಗೆ ಮೆಚ್ಚುಗೆ

Shriya Saran: ಬೆಂಗಳೂರಿನಲ್ಲಿ ನಡೆದ ಇಂಡಿಯಾ ಪ್ರೈಡ್ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ಶ್ರಿಯಾ ಶರಣ್, ಪ್ರಶಸ್ತಿ ಪ್ರದಾನ ಮಾಡುವ ಜೊತೆಗೆ ಬೆಂಗಳೂರನ್ನು ಕೊಂಡಾಡಿದರು.

ಪ್ರೈಡ್ ಇಂಡಿಯಾ ಪ್ರಶಸ್ತಿ ಪ್ರದಾನ ಮಾಡಿದ ಶ್ರಿಯಾ ಶರಣ್, ಬೆಂಗಳೂರಿನ ಬಗ್ಗೆ ಮೆಚ್ಚುಗೆ
ಶ್ರಿಯಾ ಶರಣ್
ಮಂಜುನಾಥ ಸಿ.
|

Updated on: Aug 19, 2023 | 11:05 PM

Share

ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಯಶವಂತಪುರ ತಾಜ್‍ ಹೋಟೆಲ್​ನಲ್ಲಿ ಈ ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು. ನಟಿ ಶ್ರಿಯಾ ಶರಣ್ (Shriya Saran) ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ರಂಗು ತುಂಬಿದರು. ಜೊತೆಗೆ ಉದ್ಯಮ ರಂಗದ ದಿಗ್ಗಜರು, ಸಾಧಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಹಲವು ಸವಾಲುಗಳನ್ನು ಎದುರಿಸಿ ಉದ್ಯಮ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನ ಮಾಡುವ ಕಾರ್ಯಕ್ರಮ ಅದಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ನಟಿ ಶ್ರೀಯಾ ಶರಣ್ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಬೆಂಗಳೂರಿನಲ್ಲಿ ಇಂಡಿಯಾ ಪ್ರೈಡ್ ಅವಾರ್ಡ್ ಇವೆಂಟ್ ನಡೆಯುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಶ್ರೀಯಾ, ”ಈ ಪ್ರಶಸ್ತಿಗಳನ್ನು ನಾನು ಕೊಟ್ಟಿದ್ದು ನನ್ನ ಪೋಷಕರಿಗೂ ಹೆಮ್ಮೆ ಆಗಿರುತ್ತದೆ. ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ಕೊಡುವ ಈ ಕಾರ್ಯಕ್ರಮ ಅರ್ಥ ಪೂರ್ಣವಾಗಿದೆ. ಸಣ್ಣದು ದೊಡ್ಡದೆಂಬುದರ ಆಚೆಗೆ ಇಂಥಾ ಪ್ರಶಸ್ತಿಗಳು ತಮ್ಮ ವೈಯಕ್ತಿಕ ಘನತೆಯ ಕಾರಣಕ್ಕೆ ಬಹು ಮುಖ್ಯವಾಗುತ್ತವೆ. ಮುಂದೊಂದು ದಿನ ಪ್ರೈಡ್ ಇಂಡಿಯಾ ಅವಾರ್ಡ್ ಕಾರ್ಯಕ್ರಮ ಗ್ರೇಟ್ ಶೋ ಅನ್ನಿಸಿಕೊಳ್ಳಲಿದೆ ಎಂದಿದ್ದಾರೆ.

ವಿನಯ್ ಕುಮಾರ್ ನಾರಾಯಣಸ್ವಾಮಿ ಅವರ ಪರಿಕಲ್ಪನೆ ಈ ಪ್ರೈಡ್ ಇಂಡಿಯಾ ಅವಾರ್ಡ್. ಉದ್ಯಮ ವಲಯದಲ್ಲಿ ತಮ್ಮ ಸಾಹಸಗಳ ಮೂಲಕ ಗೆದ್ದವರು ಹಲವು ವಿಭಾಗದಲ್ಲಿದ್ದಾರೆ. ಅಂಥಹವರನ್ನು ಗುರುತಿಸಿ, ಪ್ರೋತ್ಸಾಹಿಸಿ, ಭಾರತೀಯ ಉದ್ಯಮ ರಂಗ ಹೊಸಾ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಪ್ರಶಸ್ತಿಯ ಮೂಲ ಉದ್ದೇಶ. ಇದೀಗ ಬೆಂಗಳೂರಿನಲ್ಲಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಮುನ್ನೂರಕ್ಕೂ ಹೆಚ್ಚು ಮಂದಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಭಾರತದ ಆರ್ಥಿಕ ಪಥವನ್ನು ಪ್ರಜ್ವಲಿಸುವಂತೆ ಮಾಡುವಲ್ಲಿ ತಮ್ಮದೇ ಸೇವೆ ಸಲ್ಲಿಸುತ್ತಿರುವ ಅನೇಕರನ್ನು ಈ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ. ಆ ಆಯ್ಕೆ ಪ್ರಕ್ರಿಯೆ ಕೂಡಾ ಅತ್ಯಂತ ಅಚ್ಚುಕಟ್ಟಾಗಿ ನಡೆಯುತ್ತದೆ.

ಇದನ್ನೂ ಓದಿ:ರೆಡ್​​​​ ಡ್ರೆಸ್​​​​ನಲ್ಲಿ ಹಾಟ್​​ ಆಗಿ ಕಾಣಿಸಿಕೊಂಡ ನಟಿ ಶ್ರಿಯಾ ಶರಣ್​​​​​​​​

ಯಶವಂತಪುರ ತಾಜ್ ನಲ್ಲಿ ನಡೆದಿರುವ ಪ್ರೈಡ್ ಇಂಡಿಯಾ ಅವಾರ್ಡ್ ವಿಶೇಷ ಆವೃತ್ತಿಯಲ್ಲಿ ಡಾ. ಸಿದ್ದೇಶ್ವರ್ ಮನೋಜ್, ಡಾ. ಮೀರ್ ಅನ್ವರ್, ಮೊಹಿಯುದ್ದೀನ್, ಸುಧಾಂಶು ಶ್ರೀವಾತ್ಸವ್, ಡಾ. ಭಾಸ್ಕರನ್ ರಾಜು ಅವರಂಥಾ ತೀರ್ಪುಗಾರರ ವಿಶೇಷ ಸಮಿತಿಯನ್ನು ಒಳಗೊಂಡಿತ್ತು. ಯಾವುದೇ ಉದ್ಯಮದಲ್ಲಿನ ಹೊಸತನ, ಪ್ರಯೋಗಶೀಲತೆ, ಸಾಹಸ ಪ್ರವೃತ್ತಿಯನ್ನು ಪರಿಗಣಿಸುತ್ತಲೇ, ಗಹನವಾದ ಚರ್ಚೆ, ಹಲವಾರು ಮಾನದಂಡಗಳ ಆಧಾರದಲ್ಲಿ ಈ ಸಮಿತಿ ಪ್ರೈಡ್ ಇಂಡಿಯಾ ಅವಾರ್ಡ್ ಗೆ ಅರ್ಹರನ್ನು ಆಯ್ಕೆ ಮಾಡಿದೆ. ಇದೇ ಸಂದರ್ಭದಲ್ಲಿ ಈ ಅವಾರ್ಡ್ ಈವೆಂಟಿನ ಸ್ಥಾಪಕರಾದ ವಿನಯ್ ಕುಮಾರ್ ನಾರಾಯಣಸ್ವಾಮಿ ಮನದುಂಬಿ ಮಾತಾಡಿದ್ದಾರೆ.

ಭಾರತೀಯ ಉದ್ಯಮ ರಂಗದಲ್ಲಿ ನಡೆಯುತ್ತಿರುವ ನಾವೀನ್ಯತೆ ಬೆರೆತ ಪ್ರಯತ್ನಗಳಾಗುತ್ತಿರುವುದು ಖುಷಿ ಕೊಡುತ್ತಿದೆ. ಪ್ರೈಡ್ ಇಂಡಿಯಾ ಅವಾರ್ಡ್ ಸಂಸ್ಥೆ ಸದಾ ಕಾಲವೂ ಉದ್ಯಮ ರಂಗದಲ್ಲಿನ ವೈಶಿಷ್ಟ್ಯ ಮತ್ತು ಅಮೋಘ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಈ ಕಾರ್ಯಕ್ರಮದಿಂದ ಅದಕ್ಕೆ ಮತ್ತಷ್ಟು ಅರ್ಥ ಸಿಕ್ಕಂತಾಗಿದೆ ಎಂದಿದ್ದಾರೆ. ಈ ಇವೆಂಟ್ ಉದ್ಯಮ ರಂಗದ ಎಲ್ಲ ಸಾಧಕರಿಗೂ ಸ್ಫೂರ್ತಿಯಾಗಿ, ಅದಾಗಲೇ ಮಹತ್ವದ್ದನ್ನು ಸಾಧಿಸಿದವರ ಸಮಾಗಮವಾಗಿ ಮುಖ್ಯವೆನಿಸುತ್ತದೆ. ಈ ಬಾರಿಯ ಸದರಿ ಅವಾರ್ಡ್ ಇವೆಂಟಿನಲ್ಲಿ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ತಾರೆ ಶ್ರೀಯಾ ಶರಣ್ ಪ್ರಧಾನ ಆಕರ್ಷಣೆಯಾಗಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು