AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ

ನಟಿ ಶುಭಾ ಪೂಂಜಾ ತಮ್ಮ ವಿಚ್ಛೇದನದ ವದಂತಿಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಅವರು ಮಾಧ್ಯಮ ಮತ್ತು ಅಭಿಮಾನಿಗಳಲ್ಲಿ ತಮ್ಮ ವೈಯಕ್ತಿಕ ಜೀವನಕ್ಕೆ ಗೌಪ್ಯತೆ ನೀಡುವಂತೆ ಮನವಿ ಮಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತಮ್ಮ ಕುಟುಂಬಕ್ಕೆ ಖಾಸಗಿತನ ಅತ್ಯಗತ್ಯ ಎಂದು ಹೇಳಿರುವ ಶುಭಾ, ಸೂಕ್ತ ಸಮಯದಲ್ಲಿ ತಾವೇ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ವಿಚ್ಛೇದನ ವದಂತಿ ಬಗ್ಗೆ ಪೋಸ್ಟ್ ಹಾಕಿದ ನಟಿ ಶುಭಾ ಪೂಂಜಾ
ಶುಭಾ ಪೂಂಜಾ
ರಾಜೇಶ್ ದುಗ್ಗುಮನೆ
|

Updated on:Jun 10, 2026 | 12:12 PM

Share

ಕನ್ನಡದ ನಟಿ ಶುಭಾ ಪೂಂಜಾ ಅವರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಲಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ಅವರೇ ಅಧಿಕೃತವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅವರ ವಿಚ್ಛೇದನದ ಸುದ್ದಿ ಸಖತ್ ಸದ್ದು ಮಾಡುತ್ತಿತ್ತು. ಈ ಎಲ್ಲಾ ಚರ್ಚೆಗಳ ನಡುವೆ ನಟಿ ಶುಭಾ ಪೂಂಜಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಮಾಧ್ಯಮ ಮಿತ್ರರಲ್ಲಿ ಮತ್ತು ಅಭಿಮಾನಿಗಳಲ್ಲಿ ಒಂದು ಪ್ರಮುಖ ಮನವಿ ಮಾಡಿದ್ದಾರೆ.

ಶುಭಾ ಪೂಂಜಾ ಅವರು 2022ರಲ್ಲಿ ಬಾಯ್‌ಫ್ರೆಂಡ್ ಸುಮಂತ್ ಬಿಲ್ಲವ್ ಅವರನ್ನು ಮದುವೆಯಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ದಂಪತಿಗಳು ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ದಟ್ಟವಾಗಿ ಹರಡಿದ್ದವು.ಇದೇ ಸಮಯದಲ್ಲಿ ಅವರು ಪತಿ ಜೊತೆಗಿನ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ವಿಚ್ಛೇದನ ಪಡೆಯುತ್ತಿರುವುದನ್ನು ನೇರವಾಗಿ ಹೌದು ಅಥವಾ ಅಲ್ಲ ಎಂದು ಹೇಳದ ಶುಭಾ ಪೂಂಜಾ, ಪ್ರಸ್ತುತ ಪರಿಸ್ಥಿತಿಯಲ್ಲಿ ಖಾಸಗಿತನ ಗೌರವಿಸುವಂತೆ ಕೋರಿದ್ದಾರೆ.

‘ನನ್ನ ಆತ್ಮೀಯ ಮಾಧ್ಯಮ ಮಿತ್ರರೇ, ನನ್ನ ಇಡೀ ಚಿತ್ರಜೀವನದ ಪಯಣದಲ್ಲಿ ನೀವು ನನಗೆ ಅಪಾರವಾದ ಬೆಂಬಲ, ಪ್ರೋತ್ಸಾಹ ಮತ್ತು ಪ್ರೀತಿಯನ್ನು ನೀಡಿದ್ದೀರಿ. ಅದಕ್ಕಾಗಿ ನಾನು ನಿಮಗೆ ಯಾವಾಗಲೂ ಆಭಾರಿಯಾಗಿರುತ್ತೇನೆ. ಇಂದು ನನ್ನದೊಂದು ಸಣ್ಣ ವಿನಂತಿ ಇದೆ. ದಯವಿಟ್ಟು ನನಗೆ, ಸುಮಂತ್‌ಗೆ ಹಾಗೂ ನಮ್ಮ ಕುಟುಂಬದವರಿಗೆ ನಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಕೊಂಚ ಪ್ರೈವೆಸಿ ನೀಡಿ ಎಂದು ನಾನು ನಿಮ್ಮಲ್ಲಿ ವಿನಮ್ರವಾಗಿ ಕೇಳಿಕೊಳ್ಳುತ್ತೇನೆ. ಈ ಕಠಿಣ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಗೌರವ ನಮಗೆ ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದ್ದಾರೆ.

‘ಸರಿಯಾದ ಸಮಯ ಬಂದಾಗ, ನಾನೇ ವೈಯಕ್ತಿಕವಾಗಿ ನಿಮ್ಮೆಲ್ಲರೊಂದಿಗೆ ಯಾವುದೇ ಅಪ್‌ಡೇಟ್ ಇದ್ದರೂ ಹಂಚಿಕೊಳ್ಳುತ್ತೇನೆ. ನಿಮ್ಮ ನಿರಂತರ ಪ್ರೀತಿ, ಬೆಂಬಲ ಮತ್ತು ದಯೆಗೆ ಮತ್ತೊಮ್ಮೆ ಧನ್ಯವಾದಗಳು’ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶುಭಾ ಪೂಂಜಾ ಸಂಸಾರದಲ್ಲಿ ಬಿರುಗಾಳಿ; ವಿಚ್ಛೇದನಕ್ಕೆ ಅರ್ಜಿ

ಈಗ ಶುಭಾ ಅವರು ಮಾಡಿರುವ ಈ ಪೋಸ್ಟ್, ಅವರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿರುವುದನ್ನು ಪರೋಕ್ಷವಾಗಿ ಖಚಿತಪಡಿಸಿದಂತಿದೆ. ಆದರೂ, ಸ್ವತಃ ನಟಿಯೇ ಮುಂದಿನ ದಿನಗಳಲ್ಲಿ ಸ್ಪಷ್ಟನೆ ನೀಡುವುದಾಗಿ ಹೇಳಿರುವುದರಿಂದ ಊಹಾಪೋಹಗಳಿಗೆ ಸದ್ಯ ವಿರಾಮ ಬಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:11 pm, Wed, 10 June 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More