ತೆರೆಮೇಲೆ ಬರಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್; ವಿಜಯ್ ಸೇತುಪತಿ ಕಾಲ್​ಶೀಟ್ ಕೇಳಿದ ತಂಡ

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್ ಟ್ರೆಂಡ್ ಹೆಚ್ಚಾಗಿದೆ. ಈಗ ಸಿದ್ದರಾಮಯ್ಯ ಅವರ ಬಗ್ಗೆ ಬಯೋಪಿಕ್ ಸಿದ್ಧಗೊಳ್ಳುವ ವಿಚಾರ ಅಧಿಕೃತವಾಗಿದೆ.

ತೆರೆಮೇಲೆ ಬರಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್; ವಿಜಯ್ ಸೇತುಪತಿ ಕಾಲ್​ಶೀಟ್ ಕೇಳಿದ ತಂಡ
ಸಿದ್ದರಾಮಯ್ಯ-ವಿಜಯ್ ಸೇತುಪತಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 29, 2022 | 1:52 PM

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಅವರು ತಮ್ಮದೇ ಚಾರ್ಮ್​ ಹೊಂದಿದ್ದಾರೆ. ರಾಜಕೀಯದಲ್ಲಿ ಅವರ ಹೆಸರು ಸದಾ ಮುಂಚೂಣಿಯಲ್ಲಿರುತ್ತದೆ. ಸದ್ಯ ವಿರೋಧ ಪಕ್ಷದ ನಾಯಕನಾಗಿರುವ ಅವರು, ಈ ಮೊದಲು ಸಿಎಂ ಆಗಿ ರಾಜ್ಯವನ್ನು ಮುನ್ನಡೆಸಿದ್ದರು. ಅವರು ತಮ್ಮ ಚಿಂತನೆಗಳ ಮೂಲಕವೂ ಆಗಾಗ ಸುದ್ದಿ ಆಗುತ್ತಾರೆ. ಈಗ ಸಿದ್ದರಾಮಯ್ಯ ಬಯೋಪಿಕ್ (Siddaramaiah Boipic) ತೆರೆಮೇಲೆ ತರಲು ಸಿದ್ಧತೆ ನಡೆದಿದೆ. ಗಾಂಧಿ ನಗರದ ಅಂಗಳದಲ್ಲಿ ಹರಿದು ಬಂದ ಈ ಸುದ್ದಿ ಕೇಳಿ ಸಿದ್ದರಾಮಯ್ಯ ಅಭಿಮಾನಿಗಳು ಖುಷಿಯಾಗಿದ್ದಾರೆ.

ಇತ್ತೀಚೆಗೆ ಚಿತ್ರರಂಗದಲ್ಲಿ ಬಯೋಪಿಕ್ ಟ್ರೆಂಡ್ ಹೆಚ್ಚಾಗಿದೆ. ಇದನ್ನು ಮಾಡಿ ಅನೇಕರು ಯಶಸ್ಸು ಕಂಡಿದ್ದಾರೆ. ಚಿತ್ರರಂಗ, ರಾಜಕೀಯ, ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಕುರಿತು ಬಯೋಪಿಕ್​ಗಳು ಸಿದ್ಧಗೊಂಡಿವೆ. ಈಗ ಸಿದ್ದರಾಮಯ್ಯ ಅವರ ಬಗ್ಗೆ ಬಯೋಪಿಕ್ ಸಿದ್ಧಗೊಳ್ಳುವ ವಿಚಾರ ಅಧಿಕೃತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಹಯಾತ್ ಪೀರ್ ಸಾಬ್ ಅವರು ಎಂ.ಎಸ್​. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನು ತೆರೆಮೇಲೆ ತರಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಚಾರ ಸದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಟಿ; 2023ಕ್ಕೆ ರಿಲೀಸ್ ಆಗಲಿದೆ ಬಯೋಪಿಕ್

ಇದನ್ನೂ ಓದಿ
Image
ಶಿವಮೊಗ್ಗದಲ್ಲಿ ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ಹತ್ತಿಸಿದ ಕಾಂಗ್ರೆಸ್ ಕಾರ್ಯಕರ್ತರು!
Image
ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಟಿ; 2023ಕ್ಕೆ ರಿಲೀಸ್ ಆಗಲಿದೆ ಬಯೋಪಿಕ್
Image
Vijay Sethupathi: ‘ಶುಗರ್​ಲೆಸ್’​ ಚಿತ್ರಕ್ಕೆ ವಿಜಯ್​ ಸೇತುಪತಿ ಅಭಿನಂದನೆ; ಪರಭಾಷೆ ಮಂದಿಯ ಗಮನ ಸೆಳೆದ ಕನ್ನಡ ಸಿನಿಮಾ

ಸಿದ್ದರಾಮಯ್ಯ ಜತೆ ನಡೆದಿದೆ ಮಾತುಕತೆ

ಬಯೋಪಿಕ್ ಮಾಡುವಾಗ ಮಾಹಿತಿಗಳು ಸ್ಪಷ್ಟವಾಗಿರಬೇಕು. ಹೆಚ್ಚು ಮಸಾಲೆ ಸೇರಿಸುವ ಪ್ರಯತ್ನ ನಡೆದರೆ ವಿವಾದ ಸೃಷ್ಟಿ ಆಗುತ್ತದೆ. ಈ ಕಾರಣಕ್ಕೆ ನಿರ್ಮಾಪಕರು ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದು ಅವರಿಂದಲೇ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಮೊದಲ ಹಂತದ ಮಾತುಕತೆ ನಡೆದಿದೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ಜಮೀರ್ ಆಹ್ಮಮದ್ ನೇತೃತ್ವದಲ್ಲಿ ಈ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಸಿದ್ದರಾಮಯ್ಯನವರಿಗೆ ಹೆಲಿಕಾಪ್ಟರ್ ಹತ್ತಿಸಿದ ಕಾಂಗ್ರೆಸ್ ಕಾರ್ಯಕರ್ತರು!

50 ಕೋಟಿ ರೂ ಬಜೆಟ್?

ಈ ಚಿತ್ರಕ್ಕೆ 50 ಕೋಟಿ ರೂಪಾಯಿ ಸುರಿಯಲು ನಿರ್ಮಾಪಕರು ನಿರ್ಧರಿಸಿದ್ದಾರೆ. ವಿಶೇಷ ಎಂದರೆ ಈ ಚಿತ್ರಕ್ಕೆ ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಅವ ಕಾಲ್​ಶೀಟ್ ಕೇಳಲಾಗಿದೆ. ಅವರು ಒಪ್ಪಿದರೆ ಸಿನಿಮಾದ ತೂಕ ಮತ್ತಷ್ಟು ಹೆಚ್ಚಲಿದೆ. ಸತ್ಯರತ್ನಂ ಅವರ ನಿರ್ದೇಶನದಲ್ಲಿ ಸಿನಿಮಾ ಮೂಡಿಬರಲಿದೆ.

Published On - 1:46 pm, Tue, 29 November 22

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ