ಜೈಲಿನಲ್ಲಿರುವ ದರ್ಶನ್​ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪುಸ್ತಕದ ಮೊರೆ ಹೋಗಿದ್ದಾರೆ. ಇದರ ನಡುವೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಧರ್ಮದರ್ಶಿಗಳು ದರ್ಶನ್​ಗೆ ಪುಸ್ತಕವೊಂದನ್ನು ಕಳಿಸಿದ್ದಾರೆ.

ಜೈಲಿನಲ್ಲಿರುವ ದರ್ಶನ್​ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ
Follow us
ಮಂಜುನಾಥ ಸಿ.
|

Updated on: Jul 31, 2024 | 7:34 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಪರಪ್ಪನ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಜೈಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಹೆಣಗಾಡುತ್ತಿದ್ದಾರೆ. ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅವರಿಗೆ ಕಷ್ಟವಾಗುತ್ತಿದೆ. ಇಂಥಹಾ ಕಠಿಣ ಸನ್ನಿವೇಶದಲ್ಲಿ ಅವರು ವ್ಯಾಯಾಮ, ಯೋಗ ಹಾಗೂ ಪುಸ್ತಕಗಳ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಜೈಲಿನ ಗ್ರಂಥಾಲಯದಿಂದ ಕೆಲವು ಪುಸ್ತಕಗಳನ್ನು ತರಿಸಿಕೊಂಡು ಓದುತ್ತಿದ್ದಾರೆ ಎನ್ನಲಾಗಿದೆ. ದರ್ಶನ್​ರ ಮಿತ್ರರು ಕೆಲವು ಪುಸ್ತಕಗಳನ್ನು ದರ್ಶನ್​ಗೆ ನೀಡಿದ್ದಾರಂತೆ. ಇದರ ನಡುವೆ ಇದೀಗ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದಲೂ ದರ್ಶನ್​ಗೆ ಪುಸ್ತಕ ಕಳಿಸಿಕೊಡಲಾಗಿದೆ.

ದರ್ಶನ್​ಗೆ ಸಿದ್ಧಾರೂಢರ ಪುಸ್ತಕವನ್ನು ಕೊರಿಯರ್ ಮಾಡಲಾಗಿದೆ. ಮಠದ ಧರ್ಮದರ್ಶಿಗಳು ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಪರಪ್ಪನ ಅಗ್ರಹಾರ ಜೈಲಿಗೆ ಕೊರಿಯರ್ ಮಾಡಿದ್ದಾರೆ. 2011 ರಲ್ಲಿ ನಟ ದರ್ಶನ್ ಐತಿಹಾಸಿಕ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದರು. ಆಗ ಸಿದ್ಧಾರೂಢರ ಬಗ್ಗೆ ಕೇಳಿ ತಿಳಿದುಕೊಂಡಿದ್ದರು. ಅದೇ ಕಾರಣಕ್ಕೆ ಈಗ ದರ್ಶನ್​ಗೆ ಸಿದ್ಧಾರೂಢರ ಚರಿತ್ರೆ ಪುಸ್ತಕವನ್ನು ಕಳಿಸಿಕೊಡಲಾಗಿದೆ.

ದರ್ಶನ್​ಗೆ ಪುಸ್ತಕ ಕಳಿಸಿದ ಬಗ್ಗೆ ಮಾತನಾಡಿರುವ ಧರ್ಮದರ್ಶಿ ಡಾ ಗೋವಿಂದ್, ‘ಜೈಲಿನಲ್ಲಿರೋ ದರ್ಶನ್ ಗೆ ಸಿದ್ದರೂಢರ ಚರಿತಾಮೃತ ಪುಸ್ತಕ ಕಳಿಸಿದ್ದೇವೆ.ದರ್ಶನ್ ಜೈಲಿನಲ್ಲಿ ಮಾನಸಿಕವಾಗಿ ದರ್ಶನ ಕುಗ್ಗಿದ್ದಾರೆ ಅನ್ನೋದನ್ನ ಮಾಧ್ಯಮಗಳ ಮೂಲಕ ಗಮನಿಸಿದೆ, ಹೀಗಾಗಿ ಅವರಿಗೆ ಪುಸ್ತಕ ಕೋರಿಯರ್ ‌ಮಾಡಿದ್ದೇನೆ‌. ಪುಸ್ತಕ ಓದಿದ ಬಳಿಕ ದರ್ಶನ ಮಾನಸಿಕವಾಗಿ ಬಲಗೊಳ್ಳುತ್ತಾರೆ. ಸುಮಾರು 200 ರಿಂದ 250 ಪುಟಗಳ ಪುಸ್ತಕ ಅದು. ಸಿದ್ದಾರೂಢರು ನಡೆದುಬಂದ ದಾರಿಯನ್ನು ಪುಸ್ತಕ ಒಳಗೊಂಡಿದೆ. ಪುಸ್ತಕ ಓದಿ ಖಂಡಿತ ದರ್ಶನ ಬದಲಾವಣೆ ಆಗುತ್ತಾರೆ ಎಂಬ ನಿರೀಕ್ಷೆ ಇದೆ’ ಎಂದಿದ್ದಾರೆ. ‘ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಎಲ್ಲವೂ ಮುಗಿದು ದರ್ಶನ್ ಹೊರಬರುತ್ತಾರೆ ಎಂಬ ನಿರೀಕ್ಷೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ:‘ದರ್ಶನ್​ಗೂ ಇತರೆ ವಿಚಾರಣಾಧೀನ ಖೈದಿಗಳಿಗೂ ವ್ಯತ್ಯಾಸವಿಲ್ಲ’; ಮನೆ ಊಟ ಕೇಳಿದ ನಟನಿಗೆ ಕೋರ್ಟ್ ಚಾಟಿ

ದರ್ಶನ್ ಮಾನಸಿಕ ಆರೋಗ್ಯ ಉಳಿಸಿಕೊಳ್ಳಲು ಜೈಲಿನಲ್ಲಿ ವ್ಯಾಯಾಮ, ಧ್ಯಾನದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಾಧುಕೋಕಿಲ ಅವರು ದರ್ಶನ್ ಅನ್ನು ಭೇಟಿಯಾಗಿ ಬಂದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ದರ್ಶನ್ ಪುಸ್ತಕಗಳನ್ನು ಓದುತ್ತಾ ಆರಾಮವಾಗಿದ್ದಾರೆ. ಹರಿಕೃಷ್ಣ ಅವರು ಕೆಲವು ಪುಸ್ತಕಗಳನ್ನು ಕೊಟ್ಟಿದ್ದಾರೆ ಅದನ್ನು ಓದಿಕೊಂಡು ಅವರು ಆರಾಮವಾಗಿದ್ದಾರೆ ಎಂದಿದ್ದರು. ಜೈಲಿನ ಗ್ರಂಥಾಲಯಗಳಿಂದಲೂ ಕೆಲವು ಪುಸ್ತಕಗಳನ್ನು ದರ್ಶನ್ ತರಿಸಿಕೊಂಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧಿತರಾಗಿರುವ ದರ್ಶನ್ ಕಳೆದ ಕೆಲ ವಾರಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆಗಸ್ಟ್ 4 ಕ್ಕೆ ದರ್ಶನ್​ರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದ್ದು, ಅಂದು ವಿಚಾರಣೆ ನಡೆಯಲಿದೆ. ಅಂದು ಪುನಃ 14 ದಿನಗಳ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ