AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ದಿನಗಳ ಸಂಭ್ರಮದಲ್ಲಿ ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಸಿನಿಮಾ

ಸಿದ್ದು ಮೂಲಿಮನಿ, ರವೀಕ್ಷಾ ಶೆಟ್ಟಿ, ರಾಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಲಕ್ಷ್ಮೀ ಸಿದ್ದಯ್ಯ ಮುಂತಾದವರು ‘ಸೀಟ್ ಎಡ್ಜ್’ ಸಿನಿಮಾದಲ್ಲಿ ನಟಿಸಿದ್ದಾರೆ. ಘೋಸ್ಟ್ ಹಂಟಿಂಗ್ ಕುರಿತ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ವಿವಿಧ ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿದ್ದಕ್ಕೆ ಚಿತ್ರತಂಡ ಖುಷಿಯಾಗಿದೆ.

25 ದಿನಗಳ ಸಂಭ್ರಮದಲ್ಲಿ ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಸಿನಿಮಾ
Seat Edge Movie Still
ಮದನ್​ ಕುಮಾರ್​
|

Updated on: Feb 26, 2026 | 8:47 PM

Share

ಕನ್ನಡ ಚಿತ್ರರಂಗದಲ್ಲಿ ಪ್ರತಿ ವಾರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ನಡುವೆ 25 ದಿನಗಳನ್ನು ಪೂರೈಸುವುದು ಸುಲಭವಲ್ಲ. ಸಿದ್ದು ಮೂಲಿಮನಿ (Siddu Moolimani), ರವೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿದ ‘ಸೀಟ್ ಎಡ್ಜ್’ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ರಾಜ್ಯಾದ್ಯಂತ ಸುಮಾರು 10ಕ್ಕೂ ಹೆಚ್ಚಿನ ಕಡೆಗಳಲ್ಲಿ ನಾಲ್ಕನೇ ವಾರ ಪೂರೈಸಿ ಐದನೇ ವಾರದತ್ತ ಮುನ್ನಡೆಯುತ್ತಿದೆ ಎಂದು ‘ಸೀಟ್ ಎಡ್ಜ್’ (Seat Edge) ಚಿತ್ರತಂಡ ಹೇಳಿದೆ.

ಟೈಟಲ್, ಟೀಸರ್ ಮತ್ತು ಹಾಡುಗಳ ಮೂಲಕ ‘ಸೀಟ್ ಎಡ್ಜ್’ ಸಿನಿಮಾ ಕೌತುಕ ಮೂಡಿಸಿತ್ತು. ರಾಜ್ಯದಾದ್ಯಂತ 100ಕ್ಕೂ ಹೆಚ್ಚಿನ ಪರದೆಗಳಲ್ಲಿ ಏಕಕಾಲದಲ್ಲಿ ತೆರೆ ಕಂಡಿತ್ತು. ಹಲವು ಕಡೆಗಳಲ್ಲಿ ಹೌಸ್​ಫುಲ್ ಆಗಿದ್ದು ಚಿತ್ರತಂಡದ ಸಂಭ್ರಮಕ್ಕೆ ಕಾರಣ ಆಯಿತು. ‘ರಾಜ್ಯದ ಎಲ್ಲಾ ಭಾಗಗಳ ಪ್ರೇಕ್ಷಕರಿಗೂ ಸೀಟ್ ಎಡ್ಜ್ ಇಷ್ಟವಾಗುತ್ತಿದೆ. ಸಿನಿಮಾದಲ್ಲಿನ ಹಾರರ್, ಕಾಮಿಡಿಗೆ ನೋಡುಗರು ಎಂಜಾಯ್ ಮಾಡುತ್ತಿದ್ದಾರೆ. ಪ್ರೇಕ್ಷಕರು ಕೊಟ್ಟ ಬೆಂಬಲ ಮತ್ತು ಸಹಕಾರದಿಂದ ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರ್ಣಗೊಳಿಸಲು ಸಾಧ್ಯವಾಗಿದೆ’ ಎಂದು ಸಿದ್ದು ಮೂಲಿಮನಿ ಹೇಳಿದ್ದಾರೆ.

ನಾಯಕಿ ರವೀಕ್ಷಾ ಶೆಟ್ಟಿ ಅವರಿಗೂ ಜನರ ಪ್ರತಿಕ್ರಿಯೆ ಕಂಡು ಖುಷಿಯಾಗಿದೆ. ‘ಸಿನಿಮಾ ವೀಕ್ಷಿಸಿದ ಬಹುತೇಕರು ಇದು ಶೀರ್ಷಿಕೆಗೆ ತಕ್ಕಂತೆಯೇ ಸೀಟ್ ಎಡ್ಜ್​ನಲ್ಲಿ ಕುಳಿತು ನೋಡುವ ಅನುಭವ ನೀಡಿದೆ ಎಂದಿದ್ದಾರೆ. ಸಿನಿಮಾದ ಕಥೆ, ಹಾಡು, ಡ್ಯಾನ್ಸ್, ಕಾಮಿಡಿ, ಹಾರರ್, ಥ್ರಿಲ್ಲರ್ ಅಂಶಗಳನ್ನು ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ. ಇಂಥದ್ದೊಂದು ಸಿನಿಮಾದ ಪಾತ್ರವಾಗಿರುವುದಕ್ಕೆ ನಾನು ಖುಷಿಯಾಗಿದ್ದೇನೆ’ ಎಂದು ರವೀಕ್ಷಾ ಶೆಟ್ಟಿ ಹೇಳಿದ್ದಾರೆ.

ಈ ಸಿನಿಮಾಗೆ ಗಿರಿಧರ ಟಿ. ವಸಂತಪುರ ಅವರು ಬಂಡವಾಳ ಹೂಡಿದ್ದಾರೆ. ಚೇತನ್ ಶೆಟ್ಟಿ ಅವರು ನಿರ್ದೇಶನ ಮಾಡಿದ್​ದಾರೆ. ‘ಥಿಯೇಟರಿನಲ್ಲಿ ನಮ್ಮ ನಿರೀಕ್ಷೆಗೂ ಮೀರಿದ ಸ್ಪಂದನೆ ಪ್ರೇಕ್ಷಕರಿಂದ ಸಿಕ್ಕಿದೆ. ಜನರಿಗೆ ಇಷ್ಟವಾಗುವಂತಹ ಸಿನಿಮಾ ಮಾಡಿದ್ದೇವೆ ಎಂಬ ಖುಷಿ ನಮಗಿದೆ. ಇದು ನಮಗೆ ಮರೆಯಲಾಗದ ಅನುಭವ ಹಾಗೂ ನೆನಪುಗಳನ್ನು ಕೊಟ್ಟಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ

ಇದೇ ಚಿತ್ರತಂಡ ಇನ್ನೊಂದು ಸಿನಿಮಾ ನಿರ್ಮಾಣಕ್ಕೆ ಸಜ್ಜಾಗುತ್ತಿದೆ. ‘ಮನಸ್ಸಿಗೆ ಮುಟ್ಟುವಂಥ ಸಿನಿಮಾಗಳನ್ನು ಮಾಡಿದರೆ, ಖಂಡಿತ ಪ್ರೇಕ್ಷಕರು ನೋಡುತ್ತಾರೆ ಎಂಬ ಭರವಸೆ ನಮಗೆ ಈ ಚಿತ್ರದಲ್ಲಿ ಸಿಕ್ಕಿದೆ. ಮುಂದೆ ಇದೇ ತಂಡದ ಜೊತೆಗೆ ಮತ್ತೊಂದು ಹೊಸ ಸಿನಿಮಾದ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಘೋಷಣೆ ಮಾಡಲಿದ್ದೇವೆ’ ಎಂದು ನಿರ್ಮಾಪಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ