ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ

| Updated By: ರಾಜೇಶ್ ದುಗ್ಗುಮನೆ

Updated on: Sep 11, 2022 | 7:02 AM

‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಸೈಮಾ-2022 ಅವಾರ್ಡ್: ಪುನೀತ್​ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ; ಪೂರ್ತಿ ವಿವರ ಇಲ್ಲಿದೆ
ಸೈಮಾ
Follow us on

ಸೈಮಾ-2022 (SIIMA) ಪ್ರಶಸ್ತಿ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲಾಗಿದೆ. 2021ರಲ್ಲಿ ತೆರೆಗೆ ಬಂದ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳನ್ನು ನಾನಾ ವಿಭಾಗಗಳಲ್ಲಿ ನಾಮಿನೇಷನ್ ಮಾಡಲಾಗಿತ್ತು. ಆ ಪೈಕಿ ಹಲವು ಸಿನಿಮಾಗಳು ಪ್ರಶಸ್ತಿ ಬಾಚಿಕೊಂಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಸೌತ್ ಇಂಡಿಯನ್ ಇಂಟರ್​ನ್ಯಾಷನಲ್​ ಮೂವಿ ಅವಾರ್ಡ್ಸ್​’ ಇದು ಸೈಮಾದ ವಿಸ್ತಾರ ರೂಪ. ಇದು ಆರಂಭಗೊಂಡಿದ್ದು 2012ರಲ್ಲಿ. ಹೀಗಾಗಿ, ಸೈಮಾ ಈ ಬಾರಿ 10 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ. ಈ ಕಾರಣಕ್ಕೂ ಸೈಮಾ ಕಾರ್ಯಕ್ರಮ ವಿಶೇಷವಾಗಿದೆ. ಪ್ರತಿ ಭಾಷೆಯಲ್ಲಿ ಸುಮಾರು 19 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.

2021ರಲ್ಲಿ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್​’ ಸಿನಿಮಾ ತೆರೆಗೆ ಬಂತು. ಸುಧಾಕರ್ ರಾಜ್ ಅವರು ಈ ಚಿತ್ರದ ಸಿನಿಮಾಟೋಗ್ರಫಿಗೆ ‘ಬೆಸ್ಟ್ ಸಿನಿಮಾಟೋಗ್ರಫಿ’ (ಕನ್ನಡ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ನಿನ್ನ ಸನಿಹಕೆ’ ಸಿನಿಮಾದ ‘ನೀ ಪರಿಚಯ..’ ಹಾಡಿಗೆ ವಾಸುಕಿ ವೈಭವ್ ‘ಅತ್ಯುತ್ತಮ ಗೀತ ರಚನಕಾರ’ (ಕನ್ನಡ) ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಅತ್ಯುತ್ತಮ ನಟ (ಕನ್ನಡ): ಪುನೀತ್ ರಾಜ್​ಕುಮಾರ್ (ಯುವರತ್ನ)

ಅತ್ಯುತ್ತಮ ನಟಿ (ಕನ್ನಡ): ಆಶಿಕಾ ರಂಗನಾಥ್ (ಮದಗಜ)

ಅತ್ಯುತ್ತಮ ನಟಿ ಕ್ರಿಟಿಕ್ಸ್​ (ಕನ್ನಡ): ಅಮೃತಾ ಅಯ್ಯಂಗಾರ್ (ಬಡವ ರಾಸ್ಕಲ್)

ಅತ್ಯುತ್ತಮ ಹಾಸ್ಯ ನಟ- ಚಿಕ್ಕಣ್ಣ (ಪೊಗರು)

ಅತ್ಯುತ್ತಮ ನಿರ್ದೇಶನ- ತರುಣ್ ಸುಧೀರ್ (ರಾಬರ್ಟ್​)

ಅತ್ಯುತ್ತಮ ಪೋಷಕ ನಟಿ: ಆರೋಹಿ ನಾರಾಯಣ್ (ದೃಶ್ಯ 2)

ಅತ್ಯುತ್ತಮ ಪೋಷಕ ನಟ: ಪ್ರಮೋದ್​ (ರತ್ನನ್​ ಪ್ರಪಂಚ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಕನ್ನಡ)- ಚೈತ್ರಾ ಆಚಾರ್ (‘ಗರುಡ ಗಮನ ವೃಷಭ ವಾಹನ’ ಚಿತ್ರದ ‘ಸೋಜುಗಾದ ಸೂಜುಮಲ್ಲಿಗೆ ಹಾಡು’)

ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ- ‘ರಾಬರ್ಟ್​’

 

Published On - 10:03 pm, Sat, 10 September 22