AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2023: ಸೈಮಾ ಪ್ರಶಸ್ತಿ ನಾಮಿನೇಷನ್ ಪಟ್ಟಿ ಬಿಡಗುಡೆ, ಕನ್ನಡದ ಯಾವ ಸಿನಿಮಾಗಳು ಸ್ಪರ್ಧೆಯಲ್ಲಿ?

SIIMA 2023: ದಕ್ಷಿಣ ಭಾರತದ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಪ್ರಶಸ್ತಿ ನೀಡುವ ಸೈಮಾ ಮತ್ತೆ ಬಂದಿದ್ದು, ಈ ಬಾರಿ ಪ್ರಶಸ್ತಿಗಾಗಿ ಸೆಣೆಸಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ...

SIIMA 2023: ಸೈಮಾ ಪ್ರಶಸ್ತಿ ನಾಮಿನೇಷನ್ ಪಟ್ಟಿ ಬಿಡಗುಡೆ, ಕನ್ನಡದ ಯಾವ ಸಿನಿಮಾಗಳು ಸ್ಪರ್ಧೆಯಲ್ಲಿ?
ಸೈಮಾ-2023
ಮಂಜುನಾಥ ಸಿ.
|

Updated on: Aug 01, 2023 | 11:15 PM

Share

ಸೈಮಾ (ಸೌಥ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್) 2023 (SIIMA 2023) ಮತ್ತೆ ಬಂದಿದೆ. ದಕ್ಷಿಣ ಭಾರತದ ಸಿನಿಮಾರಂಗಗಳು ಸೇರಿ ತಮ್ಮಲ್ಲೇ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿ ಅವನ್ನು ಗುರುತಿಸಿ ಪ್ರಶಸ್ತಿ ನೀಡುವ ಸೈಮಾಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ದಕ್ಷಿಣ ಭಾರತದ ಸಿನಿಮಾಗಳು ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿರುವ ಈ ಸಮಯದಲ್ಲಿ ಸೈಮಾ 2023 ಮೇಲೆ ವಿಶ್ವದ ಕಣ್ಣಿದೆ. ಇದೀಗ ಸೈಮಾ 2023ರ ಪ್ರಶಸ್ತಿ ರೇಸಿನಲ್ಲಿರುವ ಸಿನಿಮಾಗಳ ನಾಮಿನೇಷನ್ (Nomination) ಪಟ್ಟಿ ಇದೀಗ ಬಿಡುಗಡೆ ಆಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂನ ಯಾವ ಸಿನಿಮಾಗಳು ಪ್ರಶಸ್ತಿ ರೇಸ್​ನಲ್ಲಿವೆ? ಇಲ್ಲಿದೆ ಮಾಹಿತಿ.

ಕನ್ನಡದ ಅತ್ಯುತ್ತಮ ಪ್ರಶಸ್ತಿ ವಿಭಾಗದಲ್ಲಿ ಐದು ಸಿನಿಮಾಗಳು ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ. ‘ಕೆಜಿಎಫ್ 2’, ‘ಕಾಂತಾರ’, ‘ಲವ್ ಮಾಕ್ಟೆಲ್ 2’, ‘777 ಚಾರ್ಲಿ’, ‘ವಿಕ್ರಾಂತ್ ರೋಣ’ ಸಿನಿಮಾಗಳು ಅತ್ಯುತ್ತಮ ಕನ್ನಡ ಸಿನಿಮಾ ವಿಭಾಗದಲ್ಲಿ ಪರಸ್ಪರ ಸ್ಪರ್ಧಿಸುತ್ತಿವೆ. ಒಂದು ಸಿನಿಮಾ ಅತ್ಯುತ್ತಮ ಕನ್ನಡ ಸಿನಿಮಾ ಆಗಿ ಆಯ್ಕೆ ಆಗಲಿದೆ.

ಇನ್ನು ತೆಲುಗು ವಿಭಾಗದಲ್ಲಿ, ‘ಡಿಜೆ ಟಿಲ್ಲು 2’, ‘ಕಾರ್ತಿಕೇಯ 2’, ಬೆಂಗಳೂರಿನ ಹೆಮ್ಮೆಯ ಪುತ್ರ ಸಂದೀಪ್ ಉನ್ನಿಕೃಷ್ಣನ್ ಜೀವನ ಆಧರಿಸಿದ ‘ಮೇಜರ್’, ಆಸ್ಕರ್ ಗೆದ್ದ ‘ಆರ್​ಆರ್​ಆರ್’, ‘ಸೀತಾ ರಾಮಂ’ ಸಿನಿಮಾಗಳು ಪರಸ್ಪರ ಸ್ಪರ್ಧೆಯಲ್ಲಿದ್ದು, ‘ಆರ್​ಆರ್​ಆರ್’ ಹಾಗೂ ‘ಸೀತಾರಾಮಂ’ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ ನಡೆಯಲಿದೆ.

ಇದನ್ನೂ ಓದಿ:BIFFES: ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಗೆ ಸೆಣೆಸಲಿರುವ ಕನ್ನಡ ಸಿನಿಮಾಗಳು

ತಮಿಳು ಸಿನಿಮಾಗಳ ವಿಭಾಗದಲ್ಲಿ, ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್1’, ‘ರಾಕೆಟ್ರಿ; ದಿ ನಂಬಿ ಎಫೆಕ್ಟ್’, ‘ತಿರುಚಿತ್ರಬಲಂ’, ಕಮಲ್ ಹಾಸನ್ ನಟನೆಯ ಸೂಪರ್ ಹಿಟ್ ಸಿನಿಮಾ ‘ವಿಕ್ರಂ’, ‘ಲವ್ ಟುಡೆ’ ಸಿನಿಮಾಗಳು ಪ್ರಶಸ್ತಿಗಾಗಿ ಸೆಣೆಸಲಿವೆ.

ಮಲಯಾಳಂ ಸಿನಿಮಾ ವಿಭಾಗದಲ್ಲಿ ಮಮ್ಮುಟಿ ನಟನೆಯ ‘ಭೀಷ್ಮ ಪರ್ವಂ’, ಮೋಹನ್​ಲಾಲ್ ಪುತ್ರನ ‘ಹೃದಯಂ’, ‘ನಾನ್ ತಾನ್ ಕೇಸ್ ಕುಡು’, ಪೃಥ್ವಿರಾಜ್ ಸುಕುಮಾರನ್ ನಟನೆಯ ‘ಜನ ಗಣ ಮನ’, ‘ತಲ್ಲುಮಾಲ’ ಸಿನಿಮಾಗಳು ಸ್ಪರ್ಧೆಯಲ್ಲಿವೆ. ಸೈಮಾ 2023 ಪ್ರಶಸ್ತಿ ಪ್ರದಾನ ಸಮಾರಂಭವು 15 ಹಾಗೂ 16 ರಂದು ದುಬೈನಲ್ಲಿ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ