ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶನ; ಸಂಪೂರ್ಣ ವಿನ್ನರ್ ಪಟ್ಟಿ

SIIMA Awards 2025 Full Winner List: 2025ನೇ ಸಾಲಿನ ದಕ್ಷಿಣ ಭಾರತ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (SIIMA) ಕಾರ್ಯಕ್ರಮ ದುಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. 'ಮ್ಯಾಕ್ಸ್' ಚಿತ್ರಕ್ಕಾಗಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರೆ, 'ಯುಐ' ಚಿತ್ರದ ನಿರ್ದೇಶನಕ್ಕಾಗಿ ಉಪೇಂದ್ರ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. ಪ್ರಶಸ್ತಿ ಪಡೆದವರ ಸಂಪೂರ್ಣ ಪಟ್ಟಿ ಇಲ್ಲಿದೆ.

ಸೈಮಾ 2025: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶನ; ಸಂಪೂರ್ಣ ವಿನ್ನರ್ ಪಟ್ಟಿ
ಸೈಮಾ 2025 ಕನ್ನಡ

Updated on: Sep 06, 2025 | 7:52 AM

ದಕ್ಷಿಣ ಭಾರತ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA) ಕಾರ್ಯಕ್ರಮ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಕನ್ನಡ ಚಿತ್ರರಂಗದ ಬಹುತೇಕ ಸೆಲೆಬ್ರಿಟಿಗಳು ಈ ವೇಳೆ ಹಾಜರಿ ಹಾಕಿದ್ದರು. 2024ನೇ ಸಾಲಿನಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಅವಾರ್ಡ್ ಘೋಷಣೆ ಮಾಡಲಾಗಿದೆ. ‘ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ.

‘ಮ್ಯಾಕ್ಸ್’ ಸಿನಿಮಾ 2024ರ ಅಂತ್ಯದಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಸಿನಿಮಾ ಕೆಲಸಗಳ ಕಾರಣಕ್ಕೆ ಅವರು ದುಬೈಗೆ ಹೋಗಿಲ್ಲ.  ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರು ಅತ್ಯುತ್ತಮ ನಿರ್ದೇಶಕ ಅವಾರ್ಡ್ ಪಡೆದಿದ್ದಾರೆ. ‘02’ ನಟನೆಗೆ ಆಶಿಕಾ ರಂಗನಾಥ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಭೀಮ’ ಸಿನಿಮಾ ನಟನೆಗೆ ದುನಿಯಾ ವಿಜಯ್​ಗೆ ಅತ್ಯುತ್ತಮ ನಟ (ಕ್ರಿಟಿಕ್ಸ್) ಅವಾರ್ಡ್ ದೊರೆತಿದೆ. ‘ಕೃಷ್ಣಂ ಪ್ರಣಯ ಸಖಿ’ ಅತ್ಯುತ್ತಮ ಸಿನಿಮಾ ಅವಾರ್ಡ್ ಗೆದ್ದಿದೆ.

ಇದನ್ನೂ ಓದಿ
ಬಿಗ್ ಬಾಸ್​ಗೆ ನಿರ್ಮಾಣ ಆಗಿದೆ ಬೇರೆಯದೇ ಮನೆ; ಹೇಗಿದೆ ಈ ಬಾರಿಯ ಸೆಟ್?
ಹಳ್ಳಿ ಪವರ್​​’ನಲ್ಲಿ ಮಿಂಚುತ್ತಿರುವ ‘ಭೀಮ’ ಕಲಾವಿದೆ ಆ್ಯಶ್
‘ಕರ್ಣ’ ಧಾರಾವಾಹಿಗೆ ಶಾಕ್ ಕೊಟ್ಟ ಟಿಆರ್​ಪಿ ರೇಟಿಂಗ್; ಕುಸಿಯಿತು ಸ್ಥಾನ
ರಾಜ್ ಮುಟ್ಟಿದ್ದೆಲ್ಲ ಚಿನ್ನ; ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಜೋರು

ಉಳಿದ ವಿವರ

ಅತ್ಯುತ್ತಮ ಸಂಗೀತ ಸಂಯೋಜನೆ: ಬಿ. ಅಜನೀಶ್ ಲೋಕನಾಥ್ (ಮ್ಯಾಕ್ಸ್)

ಅತ್ಯುತ್ತಮ ಹಾಸ್ಯನಟ: ಜಾಕ್ ಸಿಂಗಂ (ಭೀಮ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿ: ಸಂದೀಪ್ ಸುಂಕದ್ (ಶಾಖಾಹಾರಿ)

ಅತ್ಯುತ್ತಮ ಚೊಚ್ಚಲ ನಟ- ಸಮರ್ಜಿತ್ ಲಂಕೇಶ್ (ಗೌರಿ)

ಭರವಸೆ ಮೂಡಿಸಿದ ಹೊಸ ಪ್ರತಿಭೆ- ಸನ್ಯಾ ಅಯ್ಯರ್ (ಗೌರಿ)

ಅತ್ಯುತ್ತಮ ಚೊಚ್ಚಲ ನಟಿ – ಅಂಕಿತಾ ಅಮರ್ (ಇಬ್ಬನಿ ತಬ್ಬಿದಾ ಇಳೆಯಲಿ)

ಅತ್ಯುತ್ತಮ ಸಾಂಗ್ ಡಿಸೈನ್- ಇಮ್ರಾನ್ ಎಸ್ ಸರ್ಧಾರಿಯಾ

ಅತ್ಯುತ್ತಮ ಛಾಯಾಗ್ರಹಣ: ಶ್ರೀವತ್ಸನ್ ಸೆಲ್ವರಾಜನ್ (ಇಬ್ಬನಿ ತಬ್ಬಿದ ಇಳೆಯಲಿ)

ಅತ್ಯುತ್ತಮ ಹಿನ್ನೆಲೆ ಗಾಯಕಿ – ಐಶ್ವರ್ಯ ರಂಗರಾಜನ್

ಕನ್ನಡದ ಅತ್ಯುತ್ತಮ ಗೀತರಚನೆಕಾರ – ವಿ. ನಾಗೇಂದ್ರ ಪ್ರಸಾದ್

ಅತ್ಯುತ್ತಮ ಗಾಯಕ – ಜಸ್ಕರನ್

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:38 am, Sat, 6 September 25