AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಿರ್ಮಾಪಕ ‘ಸಿಲ್ಕ್’ ಮಂಜು ನಿಧನ: ‘ಎ’ ಸಿನಿಮಾ ಪ್ರೊಡ್ಯೂಸರ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿಲ್ಕ್ ಮಂಜು (65) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹಿಟ್ ಸಿನಿಮಾ ‘ಎ’ ಸೇರಿದಂತೆ ಹಲವು ವಿಭಿನ್ನ ಚಿತ್ರಗಳನ್ನು ನಿರ್ಮಿಸಿದ್ದರು. ಕಿಡ್ನಿ ಕಸಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದು, ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಹಿರಿಯ ನಿರ್ಮಾಪಕ 'ಸಿಲ್ಕ್' ಮಂಜು ನಿಧನ: 'ಎ' ಸಿನಿಮಾ ಪ್ರೊಡ್ಯೂಸರ್ ಇನ್ನಿಲ್ಲ
ಎ ಸಿನಿಮಾ ಪೋಸ್ಟರ್-ಮಂಜು
ರಾಜೇಶ್ ದುಗ್ಗುಮನೆ
|

Updated on: Oct 27, 2026 | 7:00 AM

Share

ಮುಖ್ಯಾಂಶಗಳು

  • ಕಿಡ್ನಿ ಕಸಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ಹಿರಿಯ ನಿರ್ಮಾಪಕ
  • ಸ್ಯಾಂಡಲ್‌ವುಡ್‌ನಲ್ಲಿ ಹೊಸ ಇತಿಹಾಸ ಬರೆದಿದ್ದ ಉಪ್ಪಿಯ ‘ಎ’ ಸಿನಿಮಾ
  • ಸಿಲ್ಕ್ ಮಂಜು ನಿಧನಕ್ಕೆ ಕಂಬನಿ ಮಿಡಿದ ಕನ್ನಡ ಚಿತ್ರರಂಗ

ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಹಿರಿಯ ನಿರ್ಮಾಪಕ ಸಿಲ್ಕ್ ಮಂಜು ಅವರು ಸೋಮವಾರ (ಅಕ್ಟೋಬರ್ 26) ರಾತ್ರಿ 9 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಕನ್ನಡದಲ್ಲಿ ಹಲವು ಸದಭಿರುಚಿ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ.

ಮಂಜು ಅವರು ಕಳೆದ ಒಂದೂವರೆ ವರ್ಷದಿಂದ ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದರು. ನಿರಂತರವಾಗಿ ಡಯಾಲಿಸಿಸ್‌ಗೆ ಒಳಪಡುತ್ತಿದ್ದರು. ಇತ್ತೀಚಿಗಷ್ಟೇ ಅವರಿಗೆ ಕಿಡ್ನಿ ಟ್ರ್ಯಾನ್ಸ್‌ಪ್ಲಾಂಟೇಷನ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ, ಹೊಸ ಕಿಡ್ನಿ ದೇಹಕ್ಕೆ ಸರಿಯಾಗಿ ಹೊಂದಿಕೊಳ್ಳದ ಕಾರಣ ಅವರ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಕ್ಷೀಣಿಸಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

‘ಎ’ ಸಿನಿಮಾ ಬರೆದ ಇತಿಹಾಸ

ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ‘ರಿಯಲ್ ಸ್ಟಾರ್’ ಉಪೇಂದ್ರ ಅವರ ನಿರ್ದೇಶನ ಹಾಗೂ ಅಭಿನಯದ ಐಕಾನಿಕ್ ಸಿನಿಮಾ ‘ಎ’ ಅನ್ನು ನಿರ್ಮಿಸುವ ಮೂಲಕ ಸಿಲ್ಕ್ ಮಂಜು ಅವರು ದೊಡ್ಡ ಮಟ್ಟದ ಯಶಸ್ಸು ಕಂಡಿದ್ದರು. 1998ರಲ್ಲಿ ಬಿಡುಗಡೆಯಾದ ಈ ಸಿನಿಮಾ ಕನ್ನಡ ಚಿತ್ರರಂಗದ ಟ್ರೆಂಡ್ ಬ್ರೇಕಿಂಗ್ ಸಿನಿಮಾಗಳಲ್ಲಿ ಒಂದಾಗಿ ಹೊರಹೊಮ್ಮಿತು.

ಉಪೇಂದ್ರ ಅವರ ವಿಭಿನ್ನ ನಿರೂಪಣೆ, ತಾಂತ್ರಿಕ ಶ್ರೀಮಂತಿಕೆ ಮತ್ತು ಗುರುಕಿರಣ್ ಅವರ ಸೂಪರ್ ಹಿಟ್ ಸಂಗೀತದಿಂದಾಗಿ ‘ಎ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯಿತು. ಅಲ್ಲದೆ ಶತದಿನೋತ್ಸವ ಆಚರಿಸಿತು. ಅಷ್ಟೇ ಅಲ್ಲದೆ, ಪ್ರೇಕ್ಷಕರಷ್ಟೇ ಅಲ್ಲದೆ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿ, ತೆಲುಗಿಗೂ ಡಬ್ ಆಗಿ ಅಲ್ಲೂ ಭರ್ಜರಿ ಯಶಸ್ಸು ಗಳಿಸುವ ಮೂಲಕ ನಿರ್ಮಾಪಕ ಸಿಲ್ಕ್ ಮಂಜು ಅವರಿಗೆ ಅಪಾರ ಹೆಸರು ತಂದುಕೊಟ್ಟಿತು.

ಇದನ್ನೂ ಓದಿ: ‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಫುಲ್ ಖುಷ್

‘ಎ’ ಸಿನಿಮಾ ಮಾತ್ರವಲ್ಲದೆ, ಕನ್ನಡದಲ್ಲಿ ಹಲವು ವಿಭಿನ್ನ ಕಥಾಹಂದರ ಹೊಂದಿದ್ದ ‘ಪ್ರತ್ಯರ್ಥ’, ‘ಹಗಲು ವೇಷ’, ‘ಸೂರ್ಯಕಾಂತಿ’, ‘ಕ್ಷಮಿಸಿ, ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಸೈಕಿಕ್’ ಹಾಗೂ ‘ಟೆರರ್’ ಮುಂತಾದ ಪ್ರಮುಖ ಸಿನಿಮಾಗಳನ್ನು ಸಿಲ್ಕ್ ಮಂಜು ನಿರ್ಮಿಸಿದ್ದರು. ಸ್ಯಾಂಡಲ್‌ವುಡ್‌ನ ಪ್ರಮುಖ ನಿರ್ಮಾಪಕರಲ್ಲೊಬ್ಬರಾಗಿದ್ದ ಸಿಲ್ಕ್ ಮಂಜು ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ನಟ-ನಟಿಯರು, ತಾಂತ್ರಿಕ ವರ್ಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 215 ಕೋಟಿ ರೂ: ಸಿಎಂ ಘೋಷಣೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
ದೆಹಲಿಯ ಯಮುನಾ ನದಿಯಲ್ಲಿ ತೇಲಿದ ವಿಷಕಾರಿ ನೊರೆ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಹಾಸನದಲ್ಲೊಂದು ಅಪರೂಪದ ಘಟನೆ: ಎರಡು ಕಾಡಾನೆಗಳ ಜಗಳ ಬಿಡಿಸಿದ ಶ್ವಾನ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​: ಬೈಕ್​​ಗಳು ಜಖಂ
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಲಾಕ್
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಧನ್ವೀರ್ ಫೋಟೋಗೆ ಮಸಿ ಬಳಿದು ಝೈದ್ ಖಾನ್ ಅಭಿಮಾನಿಗಳ ಆಕ್ರೋಶ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ಅವಾಂಟ್ ಬಿಕೆಜಿ ಆಸ್ಪತ್ರೆಯಲ್ಲಿ AI ತಂತ್ರಜ್ಞಾನ ಪರಿಚಯ
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ರೈತನ ಮೆಣಸಿನಕಾಯಿ ಹೊಲಕ್ಕೆ ರಚಿತಾ ರಾಮ್‌, ರಶ್ಮಿಕಾ ಮಂದಣ್ಣ ಕಣ್ಗಾವಲು!
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಮಕ್ಕಳು ಅಂಗಳ ಅಗೆಯುವಾಗ ಕುಡಿಕೆಯಲ್ಲಿ ಪ್ರಾಚೀನ ನಾಣ್ಯಗಳು ಪತ್ತೆ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ
ಬಿಗ್ ಬಾಸ್ ಅಲ್ಲಿರೋ ಕುಮಾರಿ ವೇಸ್ಟ್; ನೇರವಾಗಿ ತೀರ್ಪು ನೀಡಿದ ಲಕ್ಷ್ಮಿ