AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್ ಸುನಿಯ ಹೊಸ ಸಿನಿಮಾ ‘ಮೋಡ ಕವಿದ ವಾತಾವರಣ’ ಶಿಷ್ಯನೇ ಹೀರೋ

Simple Suni movies: ಸಿಂಪಲ್ ಸುನಿ ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ಮಾಸ್ ಎಲಿಮೆಂಟ್​ಗಳ ಗಿಮಿಕ್ಕುಗಳಿಲ್ಲದೆ ನಿಜವಾಗಿಯೂ ಕತೆ, ಚಿತ್ರಕತೆ, ಸನ್ನಿವೇಶ, ಸಂಭಾಷಣೆಗಳ ಆಧಾರದ ಮೇಲೆ ಸಿನಿಮಾ ಮಾಡಿ ಪ್ರೇಕ್ಷಕರ ಮುಂದಿಡುತ್ತಾರೆ. ‘ಒಂದು ಸರಳ ಪ್ರೇಮಕತೆ’ ಮೂಲಕ ಹಿಟ್ ನೀಡಿರುವ ಸುನಿ, ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಸಿಂಪಲ್ ಸುನಿಯ ಹೊಸ ಸಿನಿಮಾ ‘ಮೋಡ ಕವಿದ ವಾತಾವರಣ’ ಶಿಷ್ಯನೇ ಹೀರೋ
Simple Suni
ಮಂಜುನಾಥ ಸಿ.
|

Updated on: Jul 13, 2025 | 9:59 PM

Share

ಮಾಸ್, ಎಲಿವೇಷನ್ ಸೀನ್, ಭಾರಿ ಸೆಟ್, ಐಟಂ ಹಾಡು ಇನ್ನಿತರೆ ಗಿಮಿಕ್ಕುಗಳ ಮೂಲಕ ಯಶಸ್ಸು ಗಳಿಸಲು ಪ್ರಯತ್ನಿಸುತ್ತಿರುವ ನಿರ್ದೇಶಕರ ಗುಂಪಿನ ನಡುವೆ ಕತೆ, ಚಿತ್ರಕತೆ, ಸಂಭಾಷಣೆ, ಸನ್ನಿವೇಶಗಳ ಮೂಲಕ ಸಿನಿಮಾ ಕಟ್ಟಿ ಪ್ರದರ್ಶಿಸುತ್ತಿರುವ ಸುನಿ ಭಿನ್ನವಾಗಿ ಕಾಣುತ್ತಾರೆ. ಸರಳವಾದ ಲವ್ ಸ್ಟೋರಿಗಳನ್ನು ಕಟ್ಟುವುದರಲ್ಲಿ ಎತ್ತಿದ ಕೈಯ್ಯಾಗಿರುವ ಸಿಂಪಲ್ ಸುನಿ, ‘ಒಂದು ಸರಳ ಪ್ರೇಮಕತೆ’ ಸಿನಿಮಾ ಹಿಟ್ ಆದ ಬಳಿಕ ಇದೀಗ ಮತ್ತೊಂದು ಲವ್ ಸ್ಟೋರಿ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಸುನಿ ಅವರು ‘ಮೋಡ ಕವಿದ ವಾತಾವರಣ’ ಹೆಸರಿನ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಶೀಲಮ್‌ ಎಂಬ ಯುವ ಪ್ರತಿಭೆ ನಾಯಕನಾಗಿ ಈ ಸಿನಿಮಾ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ನಿರ್ದೇಶಕ ಸುನಿ ಅವರೊಂದಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ, ಸಣ್ಣ ಪುಟ್ಟ ಪಾತ್ರಗಳಲ್ಲೂ ಕಾಣಿಸಿಕೊಂಡಿರುವ ಶೀಲಮ್‌ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಆರಂಭವಾಗಿದೆ.

ಚಿತ್ರೀಕರಣ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ನಿರ್ದೇಶಕ ಸಿಂಪಲ್‌ ಸುನಿ, ‘ಒಂದು ಸರಳ ಪ್ರೇಮಕಥೆ ನನ್ನ ಲೈಫ್‌ನಲ್ಲಿ ಬೇರೆ ರೀತಿ ಸಿನಿಮಾ. ನನ್ನ ಲೈಫ್‌ಗೆ ಬೂಸ್ಟ್‌ ಕೊಡ್ತು. ಇದಾದ ಬಳಿಕ ಕೈಗೆತ್ತಿಕೊಂಡಿರುವ ಸಿನಿಮಾವೇ ‘ಮೋಡ ಕವಿದ ವಾತಾವರಣʼ. ಈ ಚಿತ್ರದ ಮೂಲಕ ಹೊಸ ಹೀರೋ ಲಾಂಚ್‌ ಆಗುತ್ತಿದ್ದಾರೆ. ಹೀರೋ ನಮ್ಮ ಮನೆ ಮಗ. ಶಿಲಮ್‌ ನನ್ನ ಸಹೋದರ ರೀತಿ’ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಸಿಂಪಲ್ ಸುನಿ ಹೊಸ ಸಿನಿಮಾ, ಕುವೆಂಪು ಕೃತಿಯಿಂದ ಸ್ಪೂರ್ತಿ

ನಟ ಶೀಲಮ್‌, ಗುರುಪೂರ್ಣಿಮಾ ದಿನ ಸುನಿ ಸರ್‌ ತಮ್ಮ ಶಿಷ್ಯನನ್ನು ಲಾಂಚ್‌ ಮಾಡಿದ್ದಾರೆ. ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿರುವುದು ನನ್ನ ಅದೃಷ್ಟ. ಈ ಚಿತ್ರದಲ್ಲಿ ಕೆಲಸ ಮಾಡಿರುವ ಟೆಕ್ನಿಷಿಯನ್‌ ದೊಡ್ಡ ಹೀರೋಗಳ ಜೊತೆ ಕೆಲಸ ಮಾಡಿದ್ದಾರೆ. ಒಂದೊಳ್ಳೆ ಟೀಂ ಜೊತೆ ಲಾಂಚ್‌ ಆಗುತ್ತಿರುವುದು ಖುಷಿ ಇದೆ ಎಂದರು.

ನಟಿ ಸಾತ್ವಿಕಾ ಮಾತನಾಡಿ, ಇದು ನನ್ನ ಡ್ರೀಮ್‌ ಪ್ರಾಜೆಕ್ಟ್.‌ ಸುನಿ ಸರ್‌ ಜೊತೆ ಕೆಲಸ ಮಾಡಬೇಕೆಂದು ಕೇಳಿಕೊಂಡಿದ್ದೆ. ಅವರ ಬಳಿ ಕಲಿಯುವುದು ತುಂಬಾನೇ ಇದೆ. ಈ ಜರ್ನಿಯಲ್ಲಿ ಬಹಳಷ್ಟು ಕಲಿತಿದ್ದೇನೆ. ಶೀಲಮ್‌ ಒಳ್ಳೆಯ ನಟ. ಅವರು ಸಿನಿಮಾಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ’ ಎಂದರು.

‘ಮೋಡ ಕವಿದ ವಾತಾವರಣʼ ಸಿನಿಮಾದ ಶೂಟಿಂಗ್‌ ಕಂಪ್ಲೀಟ್‌ ಆಗಿದೆ. ರೀ-ರೆಕಾರ್ಡಿಂಗ್‌ ಕೆಲಸಗಳೆಲ್ಲ ಬಹುತೇಕ ಮುಗಿದಿದ್ದು, ಸಿನಿಮಾ ಬಿಡುಗಡೆಗೆ ಬಹುತೇಕ ತಯಾರಾಗಿದೆ. ಸೈಂಟಿಫಿಕ್‌ ಫಿಕ್ಷನ್‌ ಪ್ರೇಮಕಥಾ ಹಂದರವನ್ನು ಹೊಂದಿರುವ ಸಿನಿಮಾ ‘ಮೋಡ ಕವಿದ ವಾತಾವರಣʼ. ‘ಒಂದು ಸರಳ ಪ್ರೇಮಕಥೆ’ ಸಿನಿಮಾ ನಿರ್ಮಾಣ ಮಾಡಿದ್ದ ರಾಮ್‌ ಮೂವೀಸ್ ಅವರೆ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಮೋಡ ಕವಿದ ವಾತಾವರಣ ಸಿನಿಮಾಗೆ ಸಂತೋಷ್ ರೈ ಪಾತಾಜೆ ಕ್ಯಾಮೆರಾ ಹಿಡಿದಿದ್ದು, ಜೂಡಾ ಸ್ಯಾಂಡಿ ಹಾಗೂ ಜೇಡ್ ಸಂಗೀತ ನಿರ್ದೇಶನ ಹಾಗೂ ಆದಿತ್ಯ ಕಶ್ಯಪ್ ಸಂಕಲನ‌ ಸಿನಿಮಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು