AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವತಾರ ಪುರುಷ 2’ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಸುನಿ; ಮಾರ್ಚ್​ 22ಕ್ಕೆ ಸಿನಿಮಾ ರಿಲೀಸ್

ಸಿಂಪಲ್ ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ 2022ರ ಮೇ 6ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಹಾಸ್ಯದ ಜೊತೆ ಸಸ್ಪೆನ್ಸ್ ಕೂಡ ಇತ್ತು. ಸುನಿ ಮಾಟ ಮಂತ್ರದ ಕಥೆಯನ್ನು ಹೇಳಿದ್ದರು. ಒಂದು ದೊಡ್ಡ ಟ್ವಿಸ್ಟ್​ನಿಂದಿಗೆ ಮೊದಲ ಭಾಗ ಕೊನೆಗೊಂಡಿತ್ತು. ಈಗ ಎರಡನೇ ಭಾಗದ ರಿಲೀಸ್ ಬಗ್ಗೆ ಮಾಹಿತಿ ನೀಡಲಾಗಿದೆ.

‘ಅವತಾರ ಪುರುಷ 2’ ರಿಲೀಸ್ ಡೇಟ್ ಅನೌನ್ಸ್ ಮಾಡಿದ ಸುನಿ; ಮಾರ್ಚ್​ 22ಕ್ಕೆ ಸಿನಿಮಾ ರಿಲೀಸ್
ಅವತಾರ ಪುರುಷ
TV9 Web
| Edited By: |

Updated on: Mar 02, 2024 | 7:01 AM

Share

ನಿರ್ದೇಶಕ ಸಿಂಪಲ್ ಸುನಿ (Simple Suni) ಅವರು ‘ಒಂದು ಸರಳ ಪ್ರೇಮಕಥೆ’ ಸಿನಿಮಾದಿಂದ ಗೆಲುವಿನ ನಗೆ ಬೀರಿದ್ದಾರೆ. ಈ ಸಿನಿಮಾ ವಿಮರ್ಶಕರಿಂದ ಹಾಗೂ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಈ ಬೆನ್ನಲ್ಲೇ ಅವರ ನಿರ್ದೇಶನದ ಮತ್ತೊಂದು ಸಿನಿಮಾ ರಿಲೀಸ್​ಗೆ ರೆಡಿ ಆಗಿದೆ. ‘ಅವತಾರ ಪುರುಷ’ ಚಿತ್ರದ ಮುಂದುವರಿದ ಭಾಗ ‘ಅವತಾರ ಪುರುಷ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ಶರಣ್ ಹಾಗೂ ಆಶಿಕಾ ರಂಗನಾಥ್ ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ 2022ರ ಮೇ 6ರಂದು ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಹಾಸ್ಯದ ಜೊತೆ ಸಸ್ಪೆನ್ಸ್ ಕೂಡ ಇತ್ತು. ಸುನಿ ಮಾಟ ಮಂತ್ರದ ಕಥೆಯನ್ನು ಹೇಳಿದ್ದರು. ಅವರ ಚಿತ್ರಗಳಲ್ಲಿ ಲವ್​ಸ್ಟೋರಿಗಳೇ ಹೆಚ್ಚು ಹೈಲೈಟ್ ಆಗುತ್ತವೆ. ಆದರೆ, ಈ ಚಿತ್ರದಲ್ಲಿ ಅವರು ಹೊಸ ಪ್ರಯೋಗ ಮಾಡಿದ್ದರು. ಒಂದು ದೊಡ್ಡ ಟ್ವಿಸ್ಟ್​ನಿಂದಿಗೆ ಮೊದಲ ಭಾಗ ಕೊನೆಗೊಂಡಿತ್ತು. ಈಗ ಎರಡನೇ ಭಾಗದ ರಿಲೀಸ್ ಬಗ್ಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ‘ಪಾರ್ಟ್​ 2 ನೋಡಬೇಕು, ಆಗ ಪೂರ್ತಿ ಗೊತ್ತಾಗತ್ತೆ’: ‘ಅವತಾರ ಪುರುಷ’ ನೋಡಿದ ಫ್ಯಾನ್ಸ್​ ರಿಯಾಕ್ಷನ್​

ಮಾರ್ಚ್ 22ರಂದು ‘ಅವತಾರ ಪುರುಷ 2’ ಸಿನಿಮಾ ರಿಲೀಸ್ ಆಗಲಿದೆ. ‘ತ್ರಿಷಂಕು ಪಯಣ’ ಎನ್ನುವ ವಾಕ್ಯ ಪೋಸ್ಟರ್​ನಲ್ಲಿ ಹೈಲೈಟ್ ಆಗಿದೆ. ಈ ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಮೊದಲ ಭಾಗದ ಕಥೆ ಏನು?

ಕಥಾ ನಾಯಕ ಅನಿಲ್ (ಶರಣ್​) ಓರ್ವ ಜ್ಯೂನಿಯರ್​ ಆರ್ಟಿಸ್ಟ್.  ಯಾವ ಪಾತ್ರ ಸಿಕ್ಕರೂ ಮಾಡುತ್ತಾನೆ. ಸ್ಟಾರ್ ಹೀರೋ ಆಗಬೇಕು ಎಂಬುದು ಆತನ ಕನಸು. ಆದರೆ, ಅವನಿಗೆ ಸಿಗುವುದು ಮಾತ್ರ ಸಣ್ಣ ಪಾತ್ರಗಳು. ಆತನಿಗೆ ಒಂದು ಆಡಿಷನ್ ಬರುತ್ತದೆ. ನಿಜ ಜೀವನದಲ್ಲಿ ಒಂದು ತಾಯಿಗೆ ಮಗನಾಗಿ ನಟಿಸಬೇಕು. ಈ ಆಡಿಷನ್​ ಮಾಡೋದು ಸಿರಿ (ಆಶಿಕಾ ರಂಗನಾಥ್​). ನಂತರ ಚಿತ್ರದ ಕಥೆ ಸಿರಿಯ ಅಜ್ಜನ ಮನೆಯಲ್ಲೇ ಸಾಗುತ್ತದೆ. ಮತ್ತೊಂದು ಟ್ರ್ಯಾಕ್​ನಲ್ಲಿ ಸಾಗುವ ತಂತ್ರ ಮಂತ್ರಗಳ ಕಥೆಗೂ ಸಿರಿಯ ಅಜ್ಜನ ಮನೆಯ ಮೇಲೆ ಕಣ್ಣು. ಅಷ್ಟಕ್ಕೂ ಅನಿಲ್​ ಈ ಮನೆಗೆ ಬಂದಿದ್ದು ಕಾಕತಾಳಿಯವೋ ಅಥವಾ ಇದರ ಹಿಂದೆ ಉದ್ದೇಶ ಇತ್ತೋ? ಅವನ ನಿಜವಾದ ಮುಖ ಯಾವುದು? ಈ ಎಲ್ಲ ಪ್ರಶ್ನೆಗಳಿಗೆ ಸಿನಿಮಾದಲ್ಲಿ ಉತ್ತರ ಸಿಕ್ಕಿತ್ತು. ಇದರ ಮುಂದಿನ ಭಾಗವಾಗಿ ‘ಅವತಾರ ಪುರುಷ 2’ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್