ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ 10 ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಹಲವರಿಂದ ಭಾರಿ ಹಣ ಸಂಗ್ರಹಿಸಿ, ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ್ದಾರೆ ಎನ್ನಲಾಗಿದೆ. ವಂಚನೆಗೊಳಗಾದವರು ವಕೀಲ ಸುಬ್ಬರಾವ್ ಅವರ ಮೂಲಕ ಸಂಪರ್ಕಿಸಿದಾಗ, ಮಂಗ್ಲಿ ಮತ್ತು ಸಹೋದರ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಾಗಿದೆ.

ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ
Mangli

Updated on: Apr 11, 2026 | 1:12 PM

ಗಾಯಕಿ ಮಂಗ್ಲಿ (Mangli) ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದಿದ್ದಾರೆ. ಅವರು ಕನ್ನಡದಲ್ಲೂ ಹಾಡು ಹೇಳಿದ್ದಾರೆ. ಅವರು ತಮ್ಮ ಕಂಚಿನ ಕಂಠದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಮಂಗ್ಲಿ, ಅವರ ಸಹೋದರ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಂಗ್ಲಿ ಮೈಕ್ರೋ ಫೈನಾನ್ಸ್ ಮಾಡುತ್ತಿದ್ದರು ಎನ್ನಲಾಗಿದೆ. ಮಂಗ್ಲಿ, ಅವರ ಸಹೋದರ ಇದರಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರು ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ. ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ಮಂಗ್ಲಿ ಕಡೆಯಿಂದ ಸುಮಾರು 10 ಕೋಟಿ ರೂಪಾಯಿ ಮೋಸ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಅನೇಕರು ಆರೋಪಿಸಿದ್ದಾರೆ. ಸಂತ್ರಸ್ತರು ವಕೀಲ ಸುಬ್ಬರಾವ್ ಅವರ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us