Vasuki Vaibhav: ವಾಸುಕಿ ವೈಭವ್​ ಮದುವೆ; ಬಹುಕಾಲದ ಗೆಳತಿ ಜತೆ ದಾಂಪತ್ಯ ಜೀವನ ಶುರು; ಮನಗೆದ್ದ ಹುಡುಗಿ ಯಾರು?

Vasuki Vaibhav Wedding: ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬೃಂದಾ ವಿಕ್ರಮ್​ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಇಂದು (ನ.16) ಅವರಿಬ್ಬರ ಮದುವೆ ನೆರವೇರುತ್ತಿದೆ. ‘ಹೊಸ ಪಯಣ ಆರಂಭ ಆಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು’ ಎಂದಿದ್ದಾರೆ ವಾಸುಕಿ ವೈಭವ್​.

Vasuki Vaibhav: ವಾಸುಕಿ ವೈಭವ್​ ಮದುವೆ; ಬಹುಕಾಲದ ಗೆಳತಿ ಜತೆ ದಾಂಪತ್ಯ ಜೀವನ ಶುರು; ಮನಗೆದ್ದ ಹುಡುಗಿ ಯಾರು?
ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್
Follow us
ಮದನ್​ ಕುಮಾರ್​
|

Updated on:Nov 16, 2023 | 8:23 AM

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್​ (Vasuki Vaibhav) ಅವರು ಇಂದು (ನವೆಂಬರ್​ 16) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ (Brunda Vikram)​ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ. ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ಕಾರ್ಯಗಳು ನಡೆಯುತ್ತಿವೆ. ಹೆಚ್ಚು ಆಡಂಬರ ಇಲ್ಲದೇ, ಸಂಪ್ರದಾಯ ಬದ್ಧವಾಗಿ ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ ಅವರು ಮದುವೆ (Vasuki Vaibhav Marriage) ಆಗುತ್ತಿದ್ದಾರೆ. ಹೊಸ ಜೀವನ ಆರಂಭಿಸುತ್ತಿರುವ ಈ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬೃಂದಾ ವಿಕ್ರಮ್​ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಹೆಚ್ಚಾಗಿ ಅವರು ಮಾಧ್ಯಮಗಳ ಎದುರು ಕಾಣಿಸಿಕೊಂಡಿಲ್ಲ. ವಾಸುಕಿ ಮತ್ತು ಬೃಂದಾ ಅವರು ತಮ್ಮ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಈಗ ಅವರು ಬದುಕಿನ ಪ್ರಮುಖ ಘಟ್ಟಕ್ಕೆ ಬಂದಿದ್ದಾರೆ. ಚಿತ್ರರಂಗದಲ್ಲಿ ಬ್ಯುಸಿ ಆಗಿರುವ ವಾಸುಕಿ ವೈಭವ್​ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ.

ಇದನ್ನೂ ಓದಿ: ‘ಮಕ್ಕಳು ಬೇಕು ಎಂಬ ಕಾರಣಕ್ಕೆ ಸೈಫ್​ ಜೊತೆ ಮದುವೆಯಾದೆ’: ಕರೀನಾ ಕಪೂರ್​ ಖಾನ್​

‘ಹೊಸ ಪಯಣ ಆರಂಭ ಆಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು’ ಎಂದು ವಾಸುಕಿ ವೈಭವ್​ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ವಾಸುಕಿ ವೈಭವ್​ ಅವರು ಮದುವೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಕಳೆದ ವಾರವೇ ವಾಸುಕಿ ವೈಭವ್​ ಅವರ ಕುಟುಂಬದಲ್ಲಿ ಚಪ್ಪರ ಪೂಜೆ ಆರಂಭ ಆಗಿತ್ತು. ಮದುವೆ ಬಳಿಕ ತಾವು ಆರತಕ್ಷತೆ ಅಥವಾ ಯಾವುದೇ ದೊಡ್ಡ ಇವೆಂಟ್​ ಆಯೋಜಿಸುವುದಿಲ್ಲ ಎಂದು ಅವರು ಹೇಳಿರುವುದಾಗಿ ‘ಟೈಮ್ಸ್​ ಆಫ್​ ಇಂಡಿಯಾ’ ವರದಿ ಮಾಡಿದೆ.

ಇದನ್ನೂ ಓದಿ: ಮದುವೆ ಬಗ್ಗೆ ಪಾಲಕರಿಂದಲೇ ತಮನ್ನಾಗೆ ಒತ್ತಡ? ಶೀಘ್ರವೇ ಜರುಗಲಿದೆ ವಿವಾಹ

ಬೃಂದಾ ವಿಕ್ರಮ್​ ರೀತಿಯೇ ವಾಸುಕಿ ವೈಭವ್​ ಕೂಡ ರಂಗಭೂಮಿಯಲ್ಲಿ ಅನುಭವ ಗಳಿಸಿದ್ದಾರೆ. ನಂತರ ಚಿತ್ರರಂಗದಲ್ಲಿ ವಾಸುಕಿ ವೈಭವ್​ ಅವರಿಗೆ ಅವಕಾಶಗಳು ಸಿಕ್ಕವು. ‘ಬಿಗ್ ಬಾಸ್​ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಅವರ ಖ್ಯಾತಿ ಹೆಚ್ಚಾಯಿತು. ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ನಟನಾಗಿಯೂ ಅವರು ಬೇಡಿಕೆ ಹೆಚ್ಚಿಸಿಕೊಂಡರು. ಇತ್ತೀಚೆಗೆ ರಿಲೀಸ್​ ಆದ ‘ಟಗರು ಪಲ್ಯ’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಒಂದು ಮುಖ್ಯವಾದ ಪಾತ್ರಕ್ಕೂ ಅವರು ಬಣ್ಣ ಹಚ್ಚಿದ್ದಾರೆ. ಮದುವೆ ಸಲುವಾಗಿ ಅವರು ಸಣ್ಣ ಬ್ರೇಕ್​ ಪಡೆದುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:20 am, Thu, 16 November 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ