AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Janaki Obituary: ಎಸ್ ಜಾನಕಿ ನಿಧನ: 20 ಭಾಷೆ, 48 ಸಾವಿರ ಹಾಡು, ಗಾಯಕಿ ನಡೆದುಬಂದ ಹಾದಿ

S Janaki Passes Away: ಖ್ಯಾತ ಹಿರಿಯ ಗಾಯಕಿ ಎಸ್. ಜಾನಕಿ (88) ಅವರು ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದ ಗಾನಕೋಗಿಲೆಯ ಜೀವನ ಪಯಣ ಹಾಗೂ ಸಾಧನೆಯ ವಿಶೇಷ ವರದಿ ಇಲ್ಲಿದೆ.

S Janaki Obituary: ಎಸ್ ಜಾನಕಿ ನಿಧನ: 20 ಭಾಷೆ, 48 ಸಾವಿರ ಹಾಡು, ಗಾಯಕಿ ನಡೆದುಬಂದ ಹಾದಿ
ಜಾನಕಿ ನಿಧನ
ರಾಜೇಶ್ ದುಗ್ಗುಮನೆ
|

Updated on:Jul 13, 2026 | 12:10 PM

Share

ಭಾರತೀಯ ಚಿತ್ರರಂಗದ ಅದ್ಭುತ ಧ್ವನಿ, ಸಹಸ್ರಾರು ಎವರ್​​ಗ್ರೀನ್ ಗೀತೆಗಳ ಗಾಯಕಿ ಎಸ್. ಜಾನಕಿ ಅವರು ಇಂದು (ಜುಲೈ 11) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರ ನಿಧನದಿಂದಾಗಿ ಸಂಗೀತ ಲೋಕದ ಸುವರ್ಣ ಯುಗವೊಂದು ಮುಕ್ತಾಯಗೊಂಡಂತಾಗಿದೆ. ಅವರು ನಡೆದುಬಂದ ಹಾದಿ ಬಗ್ಗೆ ಇಲ್ಲಿದೆ ಮಾಹಿತಿ.

ಗುಂಟೂರಿನಿಂದ ಚೆನ್ನೈವರೆಗೆ: ಬಾಲ್ಯ ಮತ್ತು ಸಂಗೀತ ಪಯಣ

ಜಾನಕಿ ಅವರು 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ಲಪಟ್ಲ ಗ್ರಾಮದಲ್ಲಿ ಜನಿಸಿದ್ದರು. ಬಾಲ್ಯದಿಂದಲೇ ಸಂಗೀತದ ಕಡೆಗೆ ಅಪಾರ ಆಕರ್ಷಣೆ ಹೊಂದಿದ್ದ ಇವರು, ಶಾಸ್ತ್ರೀಯ ಸಂಗೀತಗಾರರಾದ ಪೈಡಿಸ್ವಾಮಿ ಅವರಿಂದ ಸಂಗೀತದ ಆರಂಭಿಕ ಪಾಠಗಳನ್ನು ಕಲಿತರು. ಸಂಗೀತ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಬೇಕೆಂಬ ಕನಸಿನೊಂದಿಗೆ ಜಾನಕಿ ಅವರು ತಮ್ಮ 20ನೇ ವಯಸ್ಸಿನಲ್ಲೇ ಅಂದಿನ ಮದ್ರಾಸ್ (ಈಗಿನ ಚೆನ್ನೈ) ನಗರಕ್ಕೆ ಹೆಜ್ಜೆ ಇಟ್ಟರು. ಅಲ್ಲಿಂದ ಆರಂಭವಾದ ಅವರ ಗಾಯನ ಪಯಣ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ದಾಖಲೆ ಬರೆಯಿತು.

ಇದನ್ನೂ ಓದಿ:  ಹಾಡು ನಿಲ್ಲಿಸಿದ ‘ಗಾನಕೋಗಿಲೆ’; ಖ್ಯಾತ ಗಾಯಕಿ ಎಸ್. ಜಾನಕಿ ನಿಧನ

20ಕ್ಕೂ ಹೆಚ್ಚು ಭಾಷೆಗಳು, 48 ಸಾವಿರ ಗೀತೆಗಳು

ಎಸ್. ಜಾನಕಿ ಅವರ ಕಂಠಸಿರಿಗೆ ಯಾವುದೇ ಭಾಷೆಯ ಗಡಿ ಇರಲಿಲ್ಲ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಸಂಸ್ಕೃತ, ಒಡಿಶಾ, ತುಳು, ಉರ್ದು, ಪಂಜಾಬಿ, ಬಂಗಾಳಿ ಹಾಗೂ ಕೊಂಕಣಿ ಸೇರಿದಂತೆ 20ಕ್ಕೂ ಹೆಚ್ಚು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ಬರೋಬ್ಬರಿ 48 ಸಾವಿರಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗುವ ಮೂಲಕ ಇಡೀ ದೇಶದ ಮನೆಮನ ಗೆದ್ದಿದ್ದರು. ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅವರ ಸ್ಪಷ್ಟ ಉಚ್ಚಾರಣೆ ಮತ್ತು ಧ್ವನಿ ಬದಲಾವಣೆಯ ಚಾತುರ್ಯ ಕನ್ನಡಿಗರು ಅವರನ್ನು ತಮ್ಮದೇ ರಾಜ್ಯದ ಗಾಯಕಿ ಎನ್ನುವಂತೆ ಅಪ್ಪಿಕೊಳ್ಳುವಂತೆ ಮಾಡಿತ್ತು. ಪೂಜಿಸಲೆಂದೇ ಹೂಗಳ ತಂದೆ, ಗಗನವು ಎಲ್ಲೋ, ಒಮ್ಮೆ ನಿನ್ನನ್ನು, ನಂಬಿದೆ ನಿನ್ನ, ಬರೆದೆ ನೀನು, ನಗುಸಿಲು ನೀನು ಇದು ಕನ್ನಡದಲ್ಲಿ ಹಾಡಿದ ಜನಪ್ರಿಯ ಹಾಡುಗಳು.

ಪ್ರಶಸ್ತಿ ಪುರಸ್ಕಾರಗಳ ಮಹಾಪೂರ:

  1. ಎಸ್. ಜಾನಕಿ ಅವರ ಅಪ್ರತಿಮ ಸಾಧನೆಗೆ ಸಾಲು ಸಾಲು ಗೌರವಗಳು ಹುಡುಕಿಕೊಂಡು ಬಂದಿದ್ದವು:
  2. ರಾಷ್ಟ್ರೀಯ ಪ್ರಶಸ್ತಿಗಳು: ಗಾಯನಕ್ಕಾಗಿ 4 ಬಾರಿ ಅತ್ಯುನ್ನತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದರು.
  3. ರಾಜ್ಯ ಪ್ರಶಸ್ತಿಗಳು: ದೇಶದ ವಿವಿಧ ರಾಜ್ಯ ಸರ್ಕಾರಗಳಿಂದ ಬರೋಬ್ಬರಿ 33 ಚಲನಚಿತ್ರ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
  4. ಪದ್ಮಭೂಷಣ: 2013ರಲ್ಲಿ ಅವರಿಗೆ ದೇಶದ ಪ್ರತಿಷ್ಠಿತ ‘ಪದ್ಮಭೂಷಣ’ ಪ್ರಶಸ್ತಿ ಒಲಿದುಬಂದಿತ್ತು.
  5. ರಾಜ್ಯದ ಗೌರವ: ಕರ್ನಾಟಕ ಸರ್ಕಾರದಿಂದ ಗೌರವಾನ್ವಿತ ‘ರಾಜ್ಯೋತ್ಸವ ಪ್ರಶಸ್ತಿ’ ಹಾಗೂ ತಮಿಳುನಾಡು ಸರ್ಕಾರದಿಂದ ‘ಕಲೈಮಾಮಣಿ ಪ್ರಶಸ್ತಿ’ ಮುಡಿಗೇರಿಸಿಕೊಂಡಿದ್ದರು.
  6. ಗೌರವ ಡಾಕ್ಟರೇಟ್: ಮೈಸೂರು ವಿಶ್ವವಿದ್ಯಾಲಯವು ಅವರ ಸಂಗೀತ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿತ್ತು.
  7. ತಮ್ಮ ಮಧುರ ಧ್ವನಿಯ ಮೂಲಕ ಭಾರತೀಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಜಾನಕಿ ಅಮ್ಮ ಇನ್ನು ನೆನಪು ಮಾತ್ರ. ಅವರ ಸಾವು ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:58 pm, Sat, 11 July 26

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ