AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ

ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ಸ್ ಮಾಡುತ್ತಿದ್ದಾರೆ ಎಂದು ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಶ್ರೀನಿವಾಸ್ ಗೌಡ ಹೇಳಿದ್ದಾರೆ. ದರ್ಶನ್ ಬಗ್ಗೆ ಮಾತನಾಡಿಲ್ಲವೆಂದು ಕೆಟ್ಟ ಕಮೆಂಟ್ಸ್​ಗಳನ್ನು ಮಾಡುತ್ತಿದ್ದಾರೆ ಎಂದು ಸೋನು ಗೌಡ ಹೇಳಿದ್ದಾರೆ.

Darshan Fans: ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ
ದರ್ಶನ್ ಅಭಿಮಾನಿಗಳಿಂದ ಸೋನು ಗೌಡಗೆ ಅಶ್ಲೀಲ ಸಂದೇಶ
ಮಂಜುನಾಥ ಸಿ.
|

Updated on: Jun 28, 2024 | 10:55 AM

Share

ರೇಣುಕಾ ಸ್ವಾಮಿ (Renuka Swamy), ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್​ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ, ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಗೌಡ ಮಾತನಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ ಕೆಟ್ಟ ಸಂದೇಶ ಬಂದಿದೆ ಎಂದು ಸೋನು ಗೌಡ ಹೇಳಿದ್ದರು. ಇದೀಗ ಹೊಸ ವಿಡಿಯೋ ಒಂದನ್ನು ಹರಿಬಿಟ್ಟಿರುವ ನಟಿ, ತಮಗೆ ದರ್ಶನ್ ಅಭಿಮಾನಿಗಳಿಂದ ಕೆಟ್ಟ ಸಂದೇಶಗಳು, ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಸಂದೇಶಗಳು ಬಂದಿವೆ ಎಂದಿದ್ದಾರೆ.

‘ತುಂಬಾ ಬ್ಯಾಡ್ ಕಮೆಂಟ್ಸ್, ಯೂಟ್ಯೂಬ್, ಇನ್​ಸ್ಟಾಂ, ಫೇಸ್​ಬುಕ್​ನಲ್ಲಿ ಹಾಕುತ್ತಿದ್ದಾರೆ. ನಿಮ್ಮ ಡಿ ಬಾಸ್ ದರ್ಶನ್ ಪರವಾಗಿ ಮಾತನಾಡಿಲ್ಲ ಎಂದು ಒತ್ತಾಯಿಸುತ್ತಲೇ ಇದ್ದಾರೆ. ನಾವು ಇನ್ನೂ ಚಿಕ್ಕೋರು, ಅವರ ಬಗ್ಗೆ ಮಾತನಾಡುವಷ್ಟು ನಾವಿನ್ನೂ ಬೆಳೆದಿಲ್ಲ. ನಾವು ಯಾರಿಗಾದರೂ ಒಮ್ಮೆ ಅಭಿಮಾನಿಯಾದರೆ ಸಾಯುವವರೆಗೆ ಅಭಿಮಾನಿಯಾಗಿಯೇ ಇರುತ್ತೇವೆ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಿಯೇ ಆಗುತ್ತೆ’ ಎಂದಿದ್ದಾರೆ ಸೋನು ಶ್ರೀನಿವಾಸ್ ಗೌಡ.

ಇದನ್ನೂ ಓದಿ: ಅಭಿಮಾನಿಗಳ ಬಳಿ ದರ್ಶನ್ ವಿಶೇಷ ಮನವಿ; ಇದನ್ನು ಪಾಲಿಸ್ತಾರಾ ಫ್ಯಾನ್ಸ್?

ಮುಂದುವರೆದು, ‘ಒಳ್ಳೆಯರಾಗಿರಬಹುದು, ಕೆಟ್ಟವರಾಗಿರಬಹುದು, ತೀರ್ಪು ಅಂತ ಬರುತ್ತದೆ. ಅಲ್ಲಿಯವರೆಗೆ ಕಾಯೋಣ. ಅಲ್ಲಿಯವರೆಗೆ ದಯವಿಟ್ಟು ಕಾಯಿರಿ, ನಮಗೆ ಯಾವುದೇ ಥರ ಕೆಟ್ಟ ಸಂದೇಶಗಳನ್ನು, ಕಮೆಂಟ್ಸ್​ಗಳನ್ನು ಮಾಡಬೇಡಿ. ಅದೇ ರೀತಿ ಆ ಎರಡು ಕುಟುಂಬಗಳಿಗೂ ಸಹ ನ್ಯಾಯ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ’ ಎಂದಿದ್ದಾರೆ.

‘ಆದಷ್ಟು ಬೇಗ ದರ್ಶನ್ ಅವರು ನಿರಪರಾಧಿ ಎಂದಾಗಿ ಜೈಲಿನಿಂದ ಹೊರಗೆ ಬರಲಿ. ಅವರು ಪ್ರಾಣಿಗಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಕಷ್ಟ ಎಂದವರಿಗೆ ಸಹಾಯ ಮಾಡಿದ್ದಾರೆ. ಅವರು ಇಂಥಹಾ ಕೆಲಸ ಮಾಡಲು ಸಾಧ್ಯವೇ ಇಲ್ಲ ಎಂಬುದು ನನ್ನ ವೈಯಕ್ತಿಕ ನಂಬಿಕೆ. ನನ್ನ ನಂಬಿಕೆ ನಿಜವಾಗಲಿ ಎಂದು ಬಯಸುತ್ತೀನಿ. ಎಲ್ಲರಿಗೂ ಒಳ್ಳೆಯದಾಗಲಿ, ಮತ್ತೊಮ್ಮೆ ಹೇಳುತ್ತಿದ್ದೀನಿ, ಕೆಟ್ಟ ಕಮೆಂಟ್ಸ್​ಗಳು ಬೇಡ’ ಎಂದಿದ್ದಾರೆ ಸೋನು ಗೌಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್