ಸೆಪ್ಟೆಂಬರ್ 12ಕ್ಕೆ ಬಿಡುಗಡೆ ಆಗಲಿದೆ ‘s/o ಮುತ್ತಣ್ಣ’ ಸಿನಿಮಾ, ಟ್ರೈಲರ್ ಹೇಗಿದೆ?
Son Of Muthanna: "S/O ಮುತ್ತಣ್ಣ" ಸಿನಿಮಾ ಅನ್ನು ಶ್ರೀಕಾಂತ್ ಹುಣಸೂರು ನಿರ್ದೇಶನ ಮಾಡಿದ್ದು ಪುರಾತನ ಫಿಲಂಸ್ ನಿರ್ಮಾಣ ಮಾಡಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕ ಹಾಗೂ "ದಿಯಾ" ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದ್ದು, ಟ್ರೈಲರ್ ಸಹ ಬಿಡುಗಡೆ ಆಗಿದೆ.

ಪ್ರಜ್ವಲ್ ದೇವರಾಜ್ ಸಹೋದರ ಪ್ರಣಾಮ್ ದೇವರಾಜ್, ರಂಗಾಯಣ ರಘು ಮತ್ತು ಖುಷಿ ರವಿ ಅವರು ನಟಿಸಿರುವ ಕೌಟುಂಬಿಕ ಪ್ರೇಮಕತೆ ಹೊಂದಿರುವ ಸಿನಿಮಾ ‘S/O ಮುತ್ತಣ್ಣ’ ಸಿನಿಮಾ ಟೀಸರ್, ಹಾಡು, ಪೋಸ್ಟರ್ಗಳ ಮೂಲಕ ಈಗಾಗಲೇ ಗಮನ ಸೆಳೆದಿದೆ. ಒಂದು ಸದಭಿರುಚಿಯ ಕೌಟುಂಬಿಕ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಣೆ ಆಗಿದೆ.
“S/O ಮುತ್ತಣ್ಣ” ಸಿನಿಮಾ ಅನ್ನು ಶ್ರೀಕಾಂತ್ ಹುಣಸೂರು ನಿರ್ದೇಶನ ಮಾಡಿದ್ದು ಪುರಾತನ ಫಿಲಂಸ್ ನಿರ್ಮಾಣ ಮಾಡಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಮ್ ದೇವರಾಜ್ ನಾಯಕ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾನಲ್ಲಿ ಅಪ್ಪ-ಮಗನ ಬಾಂಧವ್ಯದ ಜೊತೆಗೆ ಒಂದೊಳ್ಳೆ ಭಾವುಕ ಪ್ರೇಮಕತೆಯೂ ಇರುವ ಸುಳಿವನ್ನು ಟ್ರೈಲರ್ ನೀಡುತ್ತಿದೆ. ಟ್ರೈಲರ್ನಲ್ಲಿ ರಂಗಾಯಣ ರಘು ಅವರ ಪಾತ್ರ ಹಾಗೂ ಅವರ ನಟನೆ ಗಮನ ಸೆಳೆಯುತ್ತಿದೆ. ಅಂದಹಾಗೆ ಈ ಸಿನಿಮಾ ಕನ್ನಡದ ಜೊತೆಗೆ ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಆಗುತ್ತಿದೆ.
‘ಪ್ರಣಾಮ್ ದೇವರಾಜ್ ಈ ಚಿತ್ರದಲ್ಲಿ ನನ್ನ ಮಗನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಜ್ವಲ್ ಜೊತೆಗೆ ಅವರ ಮೊದಲ ಚಿತ್ರ “ಸಿಕ್ಸರ್” ನಲ್ಲಿ ಅಭಿನಯಿಸಿದ್ದೆ. ಈಗ ಅವರ ಸಹೋದರನ ಸಿನಿಮಾನಲ್ಲಿ ನಟಿಸಿದ್ದೇನೆ. ಖುಷಿ ರವಿ ಬಹಳ ಚೆನ್ನಾಗಿ ಕನ್ನಡ ಮಾತನಾಡುತ್ತಾರೆ. ನಿರ್ದೇಶಕ ಶ್ರೀಕಾಂತ್ ಹುಣಸೂರು ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಅವರಿಗೆ ಕನ್ನಡ ಚಿತ್ರರಂಗದಲ್ಲಿ ಭವಿಷ್ಯ ಇದೆ’ ಎಂದಿದ್ದಾರೆ ರಂಗಾಯಣ ರಘು.
ಇದನ್ನೂ ಓದಿ:‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘S/O ಮುತ್ತಣ್ಣ’ ಒಂದು ಸುಂದರ ಅನುಭವ. ಈ ಚಿತ್ರದಲ್ಲಿ ನನ್ನ ತಂದೆಯ ಪಾತ್ರದಲ್ಲಿ ನಟಿಸಿರುವ ಹಿರಿಯನಟ ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಅವರು ನನ್ನ ತಂದೆ ಇದ್ದ ಹಾಗೆ. ನಿರ್ದೇಶಕರಂತೂ ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಖುಷಿ ರವಿ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸ್ಕೇಟಿಂಗ್ ಕೃಷ್ಣ ಅವರು ಈ ಚಿತ್ರದಲ್ಲಿ ಕಾಶಿಯನ್ನೂ ತೋರಿಸಿರುವ ಪರಿ ಚೆನ್ನಾಗಿದೆ. ಚಿತ್ರ ಸೆಪ್ಟೆಂಬರ್ 12 ರಂದು ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದು ನಾಯಕ ಪ್ರಣಾಮ್ ದೇವರಾಜ್ ತಿಳಿಸಿದರು.
ನಿರ್ದೇಶಕ ಶ್ರೀಕಾಂತ್ ಹುಣಸೂರು ಮಾತನಾಡಿ, ‘ನಮ್ಮ ಚಿತ್ರ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು. ಆದರೆ, ನಮ್ಮ ಚಿತ್ರ ನೋಡಿದ ಮಲಯಾಳಂ ವಿತರಕ ಶಾನ್, “S/O ಮುತ್ತಣ್ಣ” ಚಿತ್ರವನ್ನು ಮಲಯಾಳಂ ನಲ್ಲೂ ತೆರೆಗೆ ತರಲು ಮುಂದಾಗಿದ್ದಾರೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರವನ್ನು ಸೆಪ್ಟೆಂಬರ್ 12ರಂದು ಕನ್ನಡ, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹಾಡುಗಳು ಹಾಗೂ ಟೀಸರ್ ಈಗಾಗಲೇ ಜನರ ಮನಸ್ಸಿಗೆ ಹತ್ತಿರವಾಗಿದೆ’ ಎಂದರು.
ಪುರಾತನ ಫಿಲಂಸ್ ನಿರ್ಮಾಣದ ಸಿನಿಮಾಗೆ ಎಸ್ ಆರ್ ಕೆ ಫಿಲ್ಮ್ಸ್ ಸಾಥ್ ನೀಡಿದೆ, ಕನ್ನಡದ ವಿತರಕ ಬೆಂಗಳೂರು ಕುಮಾರ್, ಮಲಯಾಳಂ ವಿತರಕ ಶಾನ್, ಛಾಯಾಗ್ರಾಹಕ ಸ್ಕೇಟಿಂಗ್ ಹಾಗೂ ಸಂಕಲನಕಾರ ಹರೀಶ್ ಕೊಮ್ಮೆ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಚಿನ್ ಬಸ್ರೂರ್ “s/o ಮುತ್ತಣ್ಣ” ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




