ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾದ ತರುಣ್-ಸೋನಲ್

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಇಂದು (ಆಗಸ್ಟ್ 11) ಬೆಳಿಗ್ಗೆ ಬೆಂಗಳೂರಿನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ.

ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾದ ತರುಣ್-ಸೋನಲ್
Follow us
ಮಂಜುನಾಥ ಸಿ.
|

Updated on: Aug 11, 2024 | 11:59 AM

ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ವಿವಾಹ ಬಂಧಕ್ಕೆ ಒಳಪಟ್ಟಿದ್ದಾರೆ. ಹಿಂದೂ ಸಂಪ್ರದಾಯದಂತೆ ಇವರಿಬ್ಬರ ವಿವಾಹ ನೆರವೇರಿದೆ. ಆಗಸ್ಟ್ 11 ರಂದು ಬೆಳಿಗ್ಗೆ 10:50 ರಿಂದ 11:30 ರ ವರೆಗೆ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು, ಅಂತೆಯೇ ಇದೆ ಶುಭ ಮುಹೂರ್ತದಲ್ಲಿ ಕುಟುಂಬದವರು, ಬಂಧುಗಳು, ಗುರು-ಹಿರಿಯರ ಸಮ್ಮುಖದಲ್ಲಿ, ಮಂಗಳವಾದ್ಯದ ಮೇಳ, ಮಂತ್ರ ಘೋಷಣೆಗಳ ನಡುವೆ ತರುಣ್ ಅವರು ಸೋನಲ್ ಅವರಿಗೆ ಮಾಂಗಲ್ಯಧಾರಣೆ ಮಾಡಿದರು.

ಮುಹೂರ್ತಕ್ಕೆ ಮದುವೆ ಮಂಟಪವನ್ನು ವಿಶೇಷವಾಗಿ ಅಲಂಕರಿಸಿ ಸಿದ್ಧಪಡಿಸಲಾಗಿತ್ತು. ದಕ್ಷಿಣ ಭಾರತದ ದೇವಾಲಯಗಳಿಂದ ಸ್ಪೂರ್ತಿ ಪಡೆದಂಥಹಾ ವಿನ್ಯಾಸದಲ್ಲಿ ಮಂಟಪವನ್ನು, ಪ್ರವೇಶದ್ವಾರವನ್ನು ಅಲಂಕರಿಸಲಾಗಿತ್ತು. ಪ್ರವೇಶ ದ್ವಾರದಲ್ಲಿ ಮಹಾದ್ವಾರದ ಮಾದರಿ ವಿನ್ಯಾಸ ಮಾಡಲಾಗಿತ್ತು. ವಿಷ್ಣುವಿನ ದಶಾವತಾರಗಳ ಮಧ್ಯೆ, ಕಮಲ ಮಂಟಪದ ರೀತಿ ಮುಖ್ಯ ಮಂಟಪವನ್ನು ಸಿದ್ಧ ಪಡಿಸಲಾಗಿತ್ತು. ಮಂಟಪ, ಪ್ರವೇಶ ದ್ವಾರದ ಅಲಂಕಾರ ಗಮನ ಸೆಳೆಯುವಂತಿತ್ತು.

ತರುಣ್ ಹಾಗೂ ಸೋನಲ್ ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿದ್ದರು. ಕಳೆದ ಕೆಲ ತಿಂಗಳಿನಿಂದ ಈಚೆಗೆ ಈ ಇಬ್ಬರ ನಡುವಿನ ಪ್ರೇಮ ಸಂಬಂಧ ಹೊರಬಿದ್ದಿತ್ತು. ಇಬ್ಬರೂ ಸಹ ತಮ್ಮ ಕುಟುಂಬದವರನ್ನು ಒಪ್ಪಿಸಿ ಇದೀಗ ಎಲ್ಲ ಗೆಳೆಯರು, ಆತ್ಮೀಯರನ್ನು ಕರೆದು ಅದ್ಧೂರಿಯಾಗಿ ವಿವಾಹವಾಗುತ್ತಿದ್ದಾರೆ. ಬೆಂಗಳೂರಿನ ಕೆಂಗೆರೆ ಬಳಿ ಇರೋ ಪೂರ್ಣಿಮಾ ಪ್ಯಾಲೇಸ್​ನಲ್ಲಿ ಇವರ ಅದ್ಧೂರಿ ಮದುವೆ ನೆರವೇರಿದೆ.

ಆಗಸ್ಟ್ 10 ರಂದು ರಾತ್ರಿ ತರುಣ್ ಹಾಗೂ ಸೋನಲ್​ರ ಆರತಕ್ಷತೆ ಅದ್ಧೂರಿಯಾಗಿ ನೆರವೇರಿದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು. ಯೋಗರಾಜ್ ಭಟ್, ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ಹಂಸಲೇಖ, ಪ್ರೇಮ್, ಶರಣ್ ಹಲವಾರು ಮಂದಿ ಸಿನಿಮಾ ಹಾಗೂ ಟಿವಿ ತಾರೆಯರು ಆರತಕ್ಷತೆಯಲ್ಲಿ ಭಾಗಿಯಾಗಿದ್ದರು. ಯಶ್, ಸುದೀಪ್ ಇನ್ನೂ ಹಲವರಿಗೆ ತರುಣ್ ಆಹ್ವಾನ ನೀಡಿದ್ದರು.

ಇದನ್ನೂ ಓದಿ:ಹೇಗಿರಲಿದೆ ತರುಣ್ ಸುಧೀರ್-ಸೋನಲ್ ವಿವಾಹ? ಮಾಹಿತಿ ಕೊಟ್ಟ ಸ್ಯಾಂಡಲ್​ವುಡ್ ಜೋಡಿ

ತರುಣ್ ಸುಧೀರ್ ಮೂಲತಃ ಉತ್ತರ ಕರ್ನಾಟಕದ ಕುಟುಂಬದವರಾದರೂ ದಶಕಗಳಿಂದಲೂ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಇನ್ನು ನಟಿ ಸೋನಲ್ ಮಂಗಳೂರಿನವರು. ಇವರಿಬ್ಬರೂ ಕಳೆದ ಕೆಲ ವರ್ಷಗಳಿಂದಲೂ ಪ್ರೀತಿಯಲ್ಲಿದ್ದಾರೆ. ತರುಣ್ ನಿರ್ದೇಶನ ಮಾಡಿದ್ದ ‘ರಾಬರ್ಟ್’ ಸಿನಿಮಾದಲ್ಲಿ ಸೋನಲ್ ನಟಿಸಿದ್ದರು. ತುಳು ಸಿನಿಮಾ ಮೂಲಕ ನಟನೆ ಆರಂಭಿಸಿದ ಸೋನಲ್, ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಭಟ್ಟರು ನಿರ್ದೇಶನ ಮಾಡಿರುವ ‘ಪಂಚತಂತ್ರ’, ‘ಗರಡಿ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ ‘ಬುದ್ಧಿವಂತ 2’ ಹಾಗೂ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ