AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಆರತಿಗೆ ಹಾಡು, ಸಂಗೀತ ನಿರ್ದೇಶಕರುಗಳೊಟ್ಟಿಗೆ ಅಧಿಕಾರಿ, ಶಾಸಕರ ಸಭೆ

Cauvery Arthi: ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಡಿಕೆ ಶಿವಕುಮಾರ್ ಅವರು ಈ ಕಾರ್ಯಕ್ರಮದ ಮುಂದಾಳತ್ವ ವಹಿಸಿದ್ದಾರೆ. ಕಾವೇರಿ ಆರತಿಗೆ ಒಂದು ಒಳ್ಳೆಯ ಕನ್ನಡ ಹಾಡು ಮಾಡಿಕೊಡುವಂತೆ ಡಿಕೆ ಶಿವಕುಮಾರ್ ಮನವಿ ಮಾಡಿದ್ದರು. ಅದರ ಬೆನ್ನಲ್ಲೆ ಇಂದು ಕೆಲ ಸಂಗೀತ ನಿರ್ದೇಶಕರು, ಗೀತ ರಚನೆಕಾರರ ಜೊತೆಗೆ ಸಭೆ ನಡೆಸಲಾಗಿದೆ.

ಕಾವೇರಿ ಆರತಿಗೆ ಹಾಡು, ಸಂಗೀತ ನಿರ್ದೇಶಕರುಗಳೊಟ್ಟಿಗೆ ಅಧಿಕಾರಿ, ಶಾಸಕರ ಸಭೆ
Music Director
ಮಂಜುನಾಥ ಸಿ.
|

Updated on: May 24, 2025 | 4:26 PM

Share

ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ (cauvery arthi) ಮಾಡಲು ರಾಜ್ಯ ಸರ್ಕಾರ (State Government) ಮುಂದಾಗಿದೆ. ಕರ್ನಾಟಕ ಜಲ ಸಂಪನ್ಮೂಲ ಇಲಾಖೆ ಮುಂದಾಳತ್ವದಲ್ಲಿ ಕಾವೇರಿ ಆರತಿ ನಡೆಯಲಿದ್ದು, ಕಾವೇರಿ ಹಿರಿಮೆಯನ್ನು ದೇಶ-ವಿದೇಶಗಳಲ್ಲಿ ಸಾರಲು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲೆಂದು ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸರ್ಕಾರ ಮುಂದಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತಿದ್ದು, ಕಾವೇರಿ ಆರತಿ ಕಾರ್ಯಕ್ರಮಕ್ಕೆ ಥೀಮ್ ಸಾಂಗ್ ಒಂದನ್ನು ಮಾಡಿಕೊಡುವಂತೆ ಕನ್ನಡ ಚಿತ್ರರಂಗದ ಪ್ರಮುಖರಿಗೆ ಈಗಾಗಲೇ ಮನವಿ ಮಾಡಿದ್ದರು.

ಡಿಕೆ ಶಿವಕುಮಾರ್ ಮನವಿ ಪ್ರಯುಕ್ತ ಇಂದು (ಮೇ 24) ಕನ್ನಡ ಚಿತ್ರರಂಗದ ಪ್ರಮುಖ ಸಂಗೀತ ನಿರ್ದೇಶಕರುಗಳಾದ ಹಂಸಲೇಖ, ಅರ್ಜುನ್ ಜನ್ಯ ಮತ್ತು ಕಾಂಗ್ರೆಸ್ ಮುಖಂಡರು ಚಲನಚಿತ್ರ ಅಕಾಡೆಮಿ ಅಧ್ಯಕ್ಷರೂ ಆಗಿರುವ ಸಾಧುಕೋಕಿಲ ಅವರುಗಳ ಸಭೆ ನಡೆಸಲಾಯ್ತು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು, ಕಾವೇರಿ ಆರತಿ ಕಾರ್ಯಕ್ರಮದ ಆಯೋಜಕ ಜವಾಬ್ದಾರಿ ಹೊತ್ತಿರುವವರು, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌದ, ಎಂಎಲ್‌ಸಿ ದಿನೇಶ್ ಗೂಳಿಗೌಡ ಭಾಗಿ ಆಗಿದ್ದರು. ಸಭೆಯಲ್ಲಿ ಹಾಡಿನ ರೂಪು ರೇಷೆ, ಸಂಗೀತ ಮಾದರಿ, ಡೆಡ್​ಲೈನ್, ಚಿತ್ರೀಕರಣ ಇನ್ನಿತರೆ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.

ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶ ಹೊಂದಿರುವ ಕಾರಣ, ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಥೀಮ್ ಹಾಡೊಂದನ್ನು ರಚಿಸುವ ಅಗತ್ಯವಿದೆ ಎಂದು ನಿನ್ನೆ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕರು, ಸಾಹಿತ್ಯ ರಚನೆಕಾರರು ಮುಂದೆ ಬಂದು ಹಾಡು ಮಾಡಿಕೊಡಬೇಕು ಎಂದು ಡಿಕೆಶಿ ಕೋರಿದ್ದರು.

ಇದನ್ನೂ ಓದಿ:ಸ್ಯಾಂಕಿ ಕೆರೆಯಲ್ಲಿ ‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ

‘ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಗೀತೆ ಮೂಡಿಬರಬೇಕು, ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು.ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ’ ಎಂದು ಡಿಕೆ ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದರು.

ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ವೇಳೆ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಕಾವೇರಿಯ ಮೆರುಗನ್ನು ಹೆಚ್ಚಿಸಲು ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆ ಮನವಿ ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ