AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಿಂದ ಬ್ಯಾನ್ ಆದ ಕೂಡಲೇ ದೀರ್ಘ ಪತ್ರ ಬರೆದ ಗಾಯಕ ಸೋನು ನಿಗಮ್

ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರಿಗೆ ಅಸಹಕಾರ ತೋರಲು ನಿರ್ಧರಿಸಲಾಗಿದೆ. ಅದರ ಬೆನ್ನಲ್ಲೇ ಸೋನು ನಿಗಮ್ ಅವರು ಸೋಶಿಯಲ್ ಮೀಡಿಯಾದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ನೀವು ಯಾವ ತೀರ್ಪು ನೀಡಿದರೂ ನಾನು ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. ಅವರು ಬರೆದ ಪತ್ರ ಇಲ್ಲಿದೆ..

ಕನ್ನಡದಿಂದ ಬ್ಯಾನ್ ಆದ ಕೂಡಲೇ ದೀರ್ಘ ಪತ್ರ ಬರೆದ ಗಾಯಕ ಸೋನು ನಿಗಮ್
Sonu Nigam
ಮದನ್​ ಕುಮಾರ್​
|

Updated on: May 05, 2025 | 5:17 PM

Share

‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡೆಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿಯೊಂದು ಕರ್ನಾಟಕದ ಕಾರ್ಯಕ್ರಮಕ್ಕಾಗಿಯೂ ಒಂದು ಗಂಟೆಗಿಂತ ಹೆಚ್ಚು ಕನ್ನಡ ಹಾಡುಗಳನ್ನು ತಯಾರಿಸಿಕೊಂಡಿರುತ್ತೇನೆ’

‘ಆದರೆ, ನಾನು ಇನ್ನೂ ಬಾಲಕನಲ್ಲ. ಯಾರಿಂದಲಾದರೂ ಅವಮಾನವನ್ನು ಸಹಿಸುವ ವಯಸ್ಸಿಲ್ಲ. ನನಗೆ ಈಗ 51 ವರ್ಷ, ಜೀವನದ ದ್ವಿತೀಯಾರ್ಧಕ್ಕೆ ಹೆಜ್ಜೆ ಇಟ್ಟಿದ್ದೇನೆ. ನನ್ನ ಮಗನಷ್ಟು ಕಿರಿಯವನು ನನ್ನನ್ನು ಸಾವಿರಾರು ಜನರ ಮುಂದೆ ಭಾಷೆಯ ಹೆಸರಿನಲ್ಲಿ ಬೆದರಿಸಲು ಪ್ರಯತ್ನಿಸಿದಾಗ, ಅದು ನನ್ನ ಕೆಲಸದ ವಿಚಾರದಲ್ಲಿ ಎರಡನೇ ಭಾಷೆಯಾದ ಕನ್ನಡವೇ ಆಗಿರಲಿ ನಾನು ಪ್ರತಿಕ್ರಿಯಿಸುದು ಸಹಜ. ಅದು ಕೂಡ ನಾನು ಮೊದಲ ಹಾಡು ಹಾಡಿದ ತಕ್ಷಣವೇ. ಅವನು ಇನ್ನೂ ಕೆಲವರನ್ನು ಪ್ರಚೋದಿಸಿದ. ಅವರದೇ ಜನರು ಕೂಡಾ ಅವಮಾನವಾಗದಂತೆ ನಿಲ್ಲಿಸಬೇಕೆಂದು ಕೇಳುತ್ತಿದ್ದರು.’

ಇದನ್ನೂ ಓದಿ
Image
ಕನ್ನಡಿಗರ ಕೆಣಕಿದ ಸೋನು ನಿಗಮ್​ ಸ್ಯಾಂಡಲ್​ವುಡ್​ನಿಂದ ಬ್ಯಾನ್!
Image
ಸೋನು ನಿಗಂಗೆ ನೊಟೀಸ್ ನೀಡಲಿರುವ ಬೆಂಗಳೂರು ಪೊಲೀಸ್
Image
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
Image
ವಿವಾದದ ಬಳಿಕ ‘ಕನ್ನಡಿಗರು ತುಂಬಾನೇ ಒಳ್ಳೆಯವರು’ ಎಂದ ಸೋನು ನಿಗಮ್

‘ನಾನು ಅವರಿಗೆ ತುಂಬಾ ಶಾಂತಿಯುತವಾಗಿ, ಪ್ರೀತಿಯಿಂದ ಹೇಳಿದೆ. ಈಗ ಮಾತ್ರ ಕಾರ್ಯಕ್ರಮ ಪ್ರಾರಂಭವಾಗಿದೆ. ಇದು ನನ್ನ ಮೊದಲ ಹಾಡು. ನಾನು ನಿಮಗೆ ನಿರಾಸೆ ಉಂಟು ಮಾಡಲ್ಲ. ಆದರೆ ನೀವು ನನಗೆ ಕಾರ್ಯಕ್ರಮವನ್ನು ನನ್ನ ಯೋಜನೆಯಂತೆ ಮುಂದುವರಿಸಲು ಅವಕಾಶ ನೀಡಬೇಕೆಂದೆ. ಪ್ರತಿಯೊಬ್ಬ ಕಲಾವಿದನು ಹಾಡುಗಳ ಪಟ್ಟಿ ರೂಪಿಸಿಕೊಂಡಿರುವುದರಿಂದ ಸಂಗೀತಗಾರರು ಹಾಗೂ ತಾಂತ್ರಿಕರು ಎಲ್ಲರೂ ಸಮನ್ವಯದಲ್ಲಿರುತ್ತಾರೆ. ಆದರೆ ಅವರು ಗದ್ದಲ ಸೃಷ್ಟಿಸಲು, ಬೆದರಿಕೆ ಹಾಕಲು ಕಾತರವಾಗಿದ್ದರು.’

‘ಇಲ್ಲಿ ತಪ್ಪು ಯಾರು ಮಾಡಿದರು ಎಂಬುದನ್ನು ನೀವೇ ಹೇಳಿ. ನಾನು ದೇಶಭಕ್ತನಾಗಿದ್ದರಿಂದ, ಭಾಷೆ, ಜಾತಿ ಅಥವಾ ಧರ್ಮದ ಹೆಸರಿನಲ್ಲಿ ದ್ವೇಷ ಹುಟ್ಟಿಸುವ ಯಾರನ್ನಾದರೂ ನಾನು ತಾತ್ವಿಕವಾಗಿ ವಿರೋಧಿಸುತ್ತೇನೆ. ವಿಶೇಷವಾಗಿ ಪಹಲ್ಗಾಮ್‌ನಲ್ಲಿ ಸಂಭವಿಸಿದ ಘಟನೆಗಳನ್ನು ನೋಡುವ ಬಳಿಕ. ನಾನು ಅವರಿಗೆ ಬುದ್ಧಿವಾದ ಹೇಳಬೇಕಾಯಿತು. ಸಾವಿರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅದಕ್ಕೆ ಸಂಭ್ರಮಿಸಿದರು. ವಿಷಯ ಅಲ್ಲಿ ಅಂತ್ಯವಾಯಿತು. ನಾನು ನಂತರ ಒಂದು ಗಂಟೆಗಿಂತ ಹೆಚ್ಚು ಕಾಲ ಕನ್ನಡ ಹಾಡುಗಳನ್ನು ಹಾಡಿದೆ. ಎಲ್ಲವೂ ಸಾಮಾಜಿಕ ಮಾಧ್ಯಮಗಳಲ್ಲಿ ದಾಖಲಾಗಿದೆ.’

ಇದನ್ನೂ ಓದಿ: ಬಹುಬೇಡಿಕೆಯಿಂದ ಬ್ಯಾನ್ ತನಕ; ಸೋನು ನಿಗಮ್ 900 ಕನ್ನಡ ಹಾಡುಗಳು

‘ಇಲ್ಲಿ ತಪ್ಪು ಯಾರದ್ದು ಎಂಬ ನಿರ್ಧಾರವನ್ನು ಕನ್ನಡದ ವಿವೇಕವಂತ ಜನತೆಗೆ ಬಿಟ್ಟುಬಿಡುತ್ತೇನೆ. ನೀವು ಯಾವ ತೀರ್ಪು ನೀಡಿದರೂ ನಾನು ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ. ನಾನು ಕರ್ನಾಟಕದ ಕಾನೂನು ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ಮೇಲೆ ಪೂರ್ಣ ಗೌರವ ಮತ್ತು ನಂಬಿಕೆ ಇಟ್ಟುಕೊಂಡಿದ್ದೇನೆ ಮತ್ತು ನನ್ನಿಂದ ನಿರೀಕ್ಷಿಸಬಹುದಾದ ಎಲ್ಲ ಸಹಕಾರವನ್ನು ನಾನು ನೀಡುತ್ತೇನೆ. ನಾನು ಕರ್ನಾಟಕದಿಂದ ದೈವಿಕ ಪ್ರೀತಿಯನ್ನು ಪಡೆದಿದ್ದೇನೆ ಮತ್ತು ನಿಮ್ಮ ತೀರ್ಪು ಏನೇ ಆಗಿರಲಿ, ಯಾವುದೇ ದ್ವೇಷವಿಲ್ಲದೆ ಅದನ್ನು ಸದಾ ಗೌರವದಿಂದ ಜ್ಞಾಪಿಸಿಕೊಳ್ಳುತ್ತೇನೆ.’

ಧನ್ಯವಾದಗಳು, ಸೋನು ನಿಗಮ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ