AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ನಿಗಮ್ ವಿವಾದಾತ್ಮಕ ಹೇಳಿಕೆ: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’; ವಿವಾದದ ಕಿಡಿ ಹೊತ್ತಿಸಿದ ಗಾಯಕ

Sonu Nigam Controversy: ಸೋನು ನಿಗಮ್ ಅವರು ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಕನ್ನಡ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪಹಲ್ಗಾಮ್ ದಾಳಿಯನ್ನು ಕನ್ನಡದೊಂದಿಗೆ ಜೋಡಿಸಿ ಮಾಡಿದ ಹೇಳಿಕೆಗೆ ಕ್ಷಮೆ ಕೋರಲು ಅನೇಕರು ಒತ್ತಾಯಿಸುತ್ತಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೋನು ನಿಗಮ್ ವಿವಾದಾತ್ಮಕ ಹೇಳಿಕೆ: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’; ವಿವಾದದ ಕಿಡಿ ಹೊತ್ತಿಸಿದ ಗಾಯಕ
ಸೋನು ನಿಗಮ್
ರಾಜೇಶ್ ದುಗ್ಗುಮನೆ
|

Updated on:May 02, 2025 | 11:41 AM

Share

ಗಾಯಕ ಸೋನು ನಿಗಮ್ (Sonu Nigam) ಅವರು ವಿವಾದಿಂದ ಆಗಾಗ ಸುದ್ದಿ ಆಗುತ್ತಾರೆ. ಈಗ ಅವರು ಕನ್ನಡಕ್ಕೆ ಅವಮಾನ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ‘ಪಹಲ್ಗಾಮ್ ದಾಳಿಯಾಗಿದ್ದು ಕನ್ನಡದಿಂದಲೇ’ ಎಂಬರ್ಥ ಬರೋ ರೀತಿಯಲ್ಲಿ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೋನು ನಿಗಮ್ ಬಗ್ಗೆ ಈಗ ಅನೇಕರು ಅಪಸ್ವರ ತೆಗೆದಿದ್ದಾರೆ. ಗಾಯಕ ಸೋನು ನಿಗಮ್ ವಿರುದ್ಧ ಕನ್ನಡ ಅಭಿಮಾನಿಗಳು ಗರಂ ಆಗಿದ್ದಾರೆ. ಸೋನು ನಿಗಮ್​ನ ಕನ್ನಡದಿಂದ ಬ್ಯಾನ್ ಮಾಡಲು ಒತ್ತಾಯ ಕೇಳಿ ಬಂದಿದೆ.

ಬೆಂಗಳೂರಿನ ಕಾಲೇಜು ಒಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದರು. ಅದು ಸಾಮಾನ್ಯ ಕೂಡ. ಸೋನು ಎಲ್ಲೇ ಹೋದರೂ ಕನ್ನಡ ಹಾಡು ಹೇಳುವ ಬಗ್ಗೆ ಒತ್ತಾಯ ಬರುತ್ತದೆ. ಆದರೆ, ಸೋನು ಇಲ್ಲಿ ತಾಳ್ಮೆ ಕಳೆದುಕೊಂಡಿದ್ದಾರೆ. ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿದ ಅವರು, ‘ಕನ್ನಡ.. ಕನ್ನಡ ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ: ಸೋನು ನಿಗಮ್ ಹೆಸರಲ್ಲಿ ಮಹಾ ಮೋಸ; ಎಚ್ಚರಿಕೆ ನೀಡಿದ ಗಾಯಕ

ಇದನ್ನೂ ಓದಿ
Image
ಅಜಯ್ ದೇವಗನ್ ನಟನೆಯ ‘ರೇಡ್ 2’ ಒಟಿಟಿಗೆ ಯಾವಾಗ? ಮೊದಲ ದಿನದ ಗಳಿಕೆ ಎಷ್ಟು?
Image
ಖ್ಯಾತ ನಿರ್ದೇಶಕ ರಾಜಮೌಳಿಯ ನೆಚ್ಚಿನ ನಟಿ ಯಾರು ಗೊತ್ತಾ?
Image
ಇಲ್ಲಿಗೆ ಬರಲು ನಾನೊಬ್ಬನೇ ಕಾರಣವಲ್ಲ; ಹಲವರಿಗೆ ಕ್ರೆಡಿಟ್ ಕೊಟ್ಟ ಅಲ್ಲು
Image
ಅಜಿತ್​ಗೆ ಸಾವಿನ ಬಗ್ಗೆ ಶುರುವಾಗಿದೆ ಭಯ? ವಿಚಿತ್ರವಾಗಿ ಮಾತನಾಡಿದ ನಟ

‘ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ಪ್ರತಿ ಬಾರಿ ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಕನ್ನಡ ಹಾಡನ್ನು ಹಾಡಿರುತ್ತೇನೆ’ ಎಂದ ಸೋನು ನಿಗಮ್, ಆ ಬಳಿಕ ಈ ರೀತಿ ಹೇಳಿದ್ದಾರೆ. ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ

ಕಲಾವಿದರು, ಗಾಯಕರು ಎಲ್ಲರೂ ಎಲ್ಲಾ ಸಂದರ್ಭದಲ್ಲಿ ಒಂದೇ ರೀತಿ ಇರುತ್ತಾರೆ ಎಂದು ಹೇಳೋಕೆ ಸಾಧ್ಯವಾಗುವುದಿಲ್ಲ. ಅವರುಗಳು ಅವರದ್ದೇ ಆದ ಒತ್ತಡದಲ್ಲಿ ಇರುತ್ತಾರೆ. ಇಂಥ ಸಂದರ್ಭದಲ್ಲಿ ಈ ರೀತಿ ಕೇಳಿದಾಗ ಅವರಿಗೆ ಕಿರಿಕಿರಿ ಅನ್ನಿಸಿರಬಹುದು. ಆದರೆ, ತಾಳ್ಮೆ ಕಳೆದುಕೊಂಡು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಪಹಲ್ಗಾಮ್ ದಾಳಿಗೂ ಕನ್ನಡ ಕನ್ನಡ ಎಂದು ಕೇಳುವುದಕ್ಕೂ ಏನು ಸಂಬಂಧ ಎನ್ನುವ ಪ್ರಶ್ನೆ ಅನೇಕರದ್ದು. ಈ ಬಗ್ಗೆ ಸೋನು ನಿಗಮ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕ್ಷಮೆ ಕೇಳಲು ಒತ್ತಾಯ..

ಸೋಶಿಯಲ್ ಮೀಡಿಯಾದಲ್ಲಿ ಗಾಯಕನ ವಿರುದ್ಧ ಕನ್ನಡಿಗರು, ಕನ್ನಡ ಚಿತ್ರರಂಗದ ಕಲಾವಿದರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು ಸೋನು ನಿಗಮ್ ಕ್ಷಮೆ ಕೇಳಲು ಒತ್ತಾಯಿಸಿದ್ದಾರೆ. ಅವರನ್ನು ಬ್ಯಾನ್ ಮಾಡುವ ಒತ್ತಾಯವೂ ಕೇಳಿ ಬಂದಿದೆ. ಕನ್ನಡಕ್ಕೆ ಸೋನು ನಿಗಮ್ ಸಾಕಷ್ಟು ಪ್ರೀತಿ ತೋರಿಸಿದ್ದಾರೆ. ಹೀಗಾಗಿ, ಮತ್ತೊಂದು ಅವಕಾಶ ನೀಡಬೇಕು ಎನ್ನುವ ಆಗ್ರಹವೂ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:19 am, Fri, 2 May 25

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?