ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ

ಸೋನು ಶ್ರೀನಿವಾಸ ಗೌಡ ಅವರು ಕಳೆದ ವಾರ ಅರೆಸ್ಟ್ ಆದರು. ಆ ಬಳಿಕ ಈ ಪ್ರಕರಣದಲ್ಲಿ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದರು. ಈಗ ನ್ಯಾಯಾಂಗ ಬಂಧನ ವಿಧಿಸಿ CJM ನ್ಯಾಯಾಲಯ ಆದೇಶ ಹೊರಡಿಸಿದೆ.

ಸೋನು ಶ್ರೀನಿವಾಸ ಗೌಡಗೆ ಹೆಚ್ಚಿದ ಸಂಕಷ್ಟ; 14 ದಿನ ನ್ಯಾಯಾಂಗ ಬಂಧನ
ಸೋನು
Follow us
Prajwal Kumar NY
| Updated By: ರಾಜೇಶ್ ದುಗ್ಗುಮನೆ

Updated on:Mar 25, 2024 | 2:24 PM

ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಅವರಿಗೆ ದಿನ ಕಳೆದಂತೆ ಸಂಕಷ್ಟ ಹೆಚ್ಚುತ್ತಲೇ ಇದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ಅವರಿಗೆ ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅವರು ಜಾಮಿನಿಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಸೋನು ಶ್ರೀನಿವಾಸ್ ಗೌಡ ಅವರು ಟಿಕ್​ಟಾಕ್ ಹಾಗೂ ರೀಲ್ಸ್ ಮಾಡಿ ಫೇಮಸ್ ಆದವರು. ನಂತರ ಅವರ ಖಾಸಗಿ ವಿಡಿಯೋ ಲೀಕ್ ಆಗಿ ಸಾಕಷ್ಟು ಸುದ್ದಿ ಆಯಿತು. ನಂತರ ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರಲ್ಲಿ ಸ್ಪರ್ಧಿ ಆಗಿ ಭಾಗಿ ಆಗಿದ್ದರು. ಈ ವೇಳೆ ಅವರ ಮೇಲೆ ಇದ್ದ ಅಭಿಪ್ರಾಯ ಕೆಲವರಿಗೆ ಬದಲಾಗಿತ್ತು. ಈಗ ಸೋನು ಶ್ರೀನಿವಾಸ ಗೌಡ ಅವರು ಕಾನೂನು ಬಾಹೀರವಾಗಿ ಮಗುವನ್ನು ದತ್ತು ಪಡೆದು ಸಂಕಷ್ಟ ಅನುಭವಿಸಿದ್ದಾರೆ.

ಇದನ್ನೂ ಓದಿ: ಹಣ ಕೊಟ್ಟು ಮಗುವನ್ನು ಖರೀದಿಸಿದ್ದರೆ ಸೋನು? ಮಗುವಿನ ಚಿಕ್ಕಪ್ಪ ಹೇಳಿದ್ದು ಹೀಗೆ

ಸೋನು ಶ್ರೀನಿವಾಸ ಗೌಡ ಅವರು ಕಳೆದ ವಾರ ಅರೆಸ್ಟ್ ಆದರು. ಆ ಬಳಿಕ ಈ ಪ್ರಕರಣದಲ್ಲಿ ಅವರನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿತ್ತು. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದರು. ಈಗ ನ್ಯಾಯಾಂಗ ಬಂಧನ ವಿಧಿಸಿ CJM ನ್ಯಾಯಾಲಯ ಆದೇಶ ಹೊರಡಿಸಿದೆ.

ಸೋನು ಶ್ರೀನಿವಾಸ್ ಗೌಡ ಅವರು ರಾಯಚೂರು ಮೂಲದ ಬಾಲಕಿಯನ್ನು ದತ್ತು ಪಡೆದಿದ್ದರು. ಆ ಬಾಲಕಿಗೆ ಏಳು ವರ್ಷ. ತಂದೆ-ತಾಯಿಯ ಒಪ್ಪಿಗೆ ಪಡೆದು ಸೋನು ಮಗುವನ್ನು ದತ್ತು ಪಡೆದಿದ್ದರು. ಇಲ್ಲಿ ಯಾವುದೇ ನಿಯಮಗಳೂ ಫಾಲೋ ಆಗಿರಲಿಲ್ಲ. ಇದನ್ನು ತಿಳಿದ ಬಳಿಕ ಸೋನು ವಿರುದ್ಧ ಕೇಸ್ ದಾಖಲಾಯ್ತು. ಆ ಬಳಿಕ ಪೊಲೀಸರು ಎಫ್​ಐಆರ್ ದಾಖಲಿಸಿ ಸೋನು ಅವರನ್ನು ಬಂಧಿಸಿದ್ದಾರೆ. ಮಗುವನ್ನು ದತ್ತು ಪಡೆಯುವ ಮೊದಲು ಅರ್ಜಿ ಸಲ್ಲಿಕೆ ಮಾಡಬೇಕು. ಮಗುವಿಗೂ ಹಾಗೂ ದತ್ತು ಪಡೆಯುತ್ತಿರುವ ವ್ಯಕ್ತಿಗೂ 25 ವರ್ಷಗಳ ವಯಸ್ಸಿನ ಅಂತರ ಇರಬೇಕು. ಇದ್ಯಾವುದನ್ನೂ ಸೋನು ಫಾಲೋ ಮಾಡಿಲ್ಲ. ಮಗುವಿನ ಪಾಲಕರಿಗೆ ಸೋನು ಹಣ ನೀಡಿದ್ದಾರೆ ಎನ್ನುವ ಆರೋಪವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:13 pm, Mon, 25 March 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ