AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು?

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಆದಾಯದ ಅಸಲಿ ಲೆಕ್ಕಾಚಾರ ಹಾಗೂ ಹೊಸ ಕಾರಿನ ಸಾಲದ ಹೊರೆಯನ್ನು ಮುಕ್ತವಾಗಿ ಹಂಚಿಕೊಂಡಿದ್ದಾರೆ. ತಿಂಗಳಿಗೆ ₹30 ಸಾವಿರ ಕೈ ಸೇರುವುದು ಕಷ್ಟ ಎಂದಿರುವ ಸೋನು, ₹30 ಲಕ್ಷದ ಕಿಯಾ ಕಾರಿಗಾಗಿ ಬರೋಬ್ಬರಿ ₹25 ಲಕ್ಷ ಸಾಲ ಪಡೆದು 6 ವರ್ಷಗಳ ಇಎಂಐ ಭಾರ ಹೊತ್ತಿರುವ ಶಾಕಿಂಗ್ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.

ಸೋನು ಶ್ರೀನಿವಾಸ್ ಗೌಡಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ ಬರೋ ಹಣ ಎಷ್ಟು?
ಸೋನು ಶ್ರೀನಿವಾಸ್ ಗೌಡ
ರಾಜೇಶ್ ದುಗ್ಗುಮನೆ
|

Updated on: Jul 01, 2026 | 9:55 PM

Share

ಮುಖ್ಯಾಂಶಗಳು

  • ಇನ್‌ಸ್ಟಾಗ್ರಾಮ್ ಆದಾಯದ ಕಹಿ ಸತ್ಯ: ತಿಂಗಳಿಗೆ 30 ಸಾವಿರವೂ ಸಿಗಲ್ಲ ಎಂದ ಸೋನು ಗೌಡ
  •  30 ಲಕ್ಷದ ಐಷಾರಾಮಿ ಕಾರು, 25 ಲಕ್ಷದ ಸಾಲ: ಸೋನು ಶ್ರೀನಿವಾಸ್ ಗೌಡ ಹೊತ್ತ 6 ವರ್ಷಗಳ ಇಎಂಐ ಗಂಟು!
  • ನೆಗೆಟಿವಿಟಿಯಿಂದ ಬೆಳ್ಳಿಪರೆದೆಯವರೆಗೆ: ಬಿಗ್ ಬಾಸ್ ತಂದುಕೊಟ್ಟ ಬದಲಾವಣೆ ಮತ್ತು ಸೆಲೆಬ್ರಿಟಿ ಗಳಿಕೆಯ ರಹಸ್ಯ!

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುವ ಸೋನು ಶ್ರೀನಿವಾಸ್ ಗೌಡ, ಈಗ ಬೆಳ್ಳಿಪರದೆಗೆ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ಅವರ ಖಾಸಗಿ ವಿಡಿಯೋ ವೈರಲ್ ಆಗಿ ದೊಡ್ಡ ಮಟ್ಟದ ವಿವಾದ ಸೃಷ್ಟಿಸಿತ್ತು. ಆ ಬಳಿಕ ಬಿಗ್ ಬಾಸ್ ಒಟಿಟಿ ಶೋಗೆ ಸ್ಪರ್ಧಿಯಾಗಿ ಬಂದ ಅವರು, ತಮ್ಮ ಮೇಲಿದ್ದ ನೆಗೆಟಿವ್ ಅಭಿಪ್ರಾಯಗಳನ್ನು ಬದಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರು ಬಿಗ್ ಬಾಸ್‌ಗೆ ಬಂದಾಗ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು, ಆದರೆ ಶೋ ಹೋಸ್ಟ್ ಕಿಚ್ಚ ಸುದೀಪ್ ಅವರು ‘ತಪ್ಪನ್ನು ತಿದ್ದಿಕೊಳ್ಳಲು ಪ್ರತಿಯೊಬ್ಬರಿಗೂ ಒಂದು ಚಾನ್ಸ್ ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ಸೋನು ಪರವಾಗಿ ನಿಂತಿದ್ದರು. ಈಗ ಸೋನು ಅವರು ತಮ್ಮ ಗಳಿಕೆ ಬಗ್ಗೆ ಮಾತನಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಿಂದ ಎಷ್ಟು ಹಣ ಬರುತ್ತೆ ಗೊತ್ತಾ?

ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಫಾಲೋವರ್ಸ್ ಹೊಂದಿರುವ ಸೋನು ಶ್ರೀನಿವಾಸ್ ಗೌಡ, ಇನ್‌ಸ್ಟಾಗ್ರಾಮ್ ಸಬ್‌ಸ್ಕ್ರಿಪ್ಷನ್‌ನಿಂದ ತಮಗೆ ಎಷ್ಟು ಆದಾಯ ಬರಬಹುದು ಎಂಬ ಲೆಕ್ಕಾಚಾರವನ್ನು ಬಿಚ್ಚಿಟ್ಟಿದ್ದಾರೆ.

ಸೋನು ಅವರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸದ್ಯಕ್ಕೆ ಇರುವುದು ಕೇವಲ 289 ಪೇಡ್ ಸಬ್‌ಸ್ಕ್ರೈಬರ್ಸ್ ಮಾತ್ರ. ಒಂದು ವೇಳೆ 300 ಜನ ಸಬ್‌ಸ್ಕ್ರೈಬರ್ಸ್ ಇದ್ದಾರೆ ಎಂದು ಅಂದುಕೊಂಡರೂ, ಒಬ್ಬರಿಂದ ಸಿಗುವ 390 ರೂಪಾಯಿಯಲ್ಲಿ ದೊಡ್ಡ ಮೊತ್ತವನ್ನು ಇನ್​​ಸ್ಟಾಗ್ರಾಮ್ ಇಟ್ಟುಕೊಳ್ಳುತ್ತದೆ ಎಂದಿದ್ದಾರೆ ಸೋನು. ‘ಇನ್‌ಸ್ಟಾಗ್ರಾಮ್ 100 ರೂಪಾಯಿ ತೆಗೆದುಕೊಂಡು ಉಳಿದ ಹಣ ನನಗೆ ನೀಡುತ್ತದೆ. ಈ ಲೆಕ್ಕಾಚಾರದ ಪ್ರಕಾರ ನನಗೆ ಇನ್‌ಸ್ಟಾಗ್ರಾಮ್‌ನಿಂದ ತಿಂಗಳಿಗೆ 30 ಸಾವಿರ ರೂಪಾಯಿ ಕೂಡ ಕೈ ಸೇರುವುದಿಲ್ಲ’ ಎಂದಿದ್ದಾರೆ ಅವರು.

ತಮ್ಮ ಒಟ್ಟು ತಿಂಗಳ ಆದಾಯ ಎಷ್ಟು ಎಂಬುದನ್ನು ನೇರವಾಗಿ ಬಹಿರಂಗಪಡಿಸದ ಸೋನು, ‘ಎಲ್ಲವನ್ನೂ ಮೊದಲೇ ಹೇಳಿದರೆ ಎಲ್ಲರ ಕಣ್ಣು ಬೀಳುತ್ತದೆ’ ಎಂದು ನಗುತ್ತಲೇ ಉತ್ತರಿಸಿದ್ದಾರೆ. ಆದರೆ ಸದ್ಯಕ್ಕೆ ಆರಾಮಾಗಿ ಜೀವನ ನಡೆಸಲು ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ.

ಹೊಸ ಕಾರು ಖರೀದಿಸಿದ ಸೋನುಗೆ ತಪ್ಪಿಲ್ಲ ಸಾಲದ ಗೋಳು

ಕ್ಯಾಬ್‌ಗಳಲ್ಲಿ ಓಡಾಡಿ ಸುಸ್ತಾಗಿದ್ದ ಸೋನು ಶ್ರೀನಿವಾಸ್ ಗೌಡ ಇತ್ತೀಚೆಗೆ ತಮ್ಮದೇ ಆದ ಹೊಸ ಕಿಯಾ ಕಾರನ್ನು ಖರೀದಿಸಿದ್ದಾರೆ. ಆದರೆ ಈ ಕಾರು ಖರೀದಿಯ ಹಿಂದೆ ದೊಡ್ಡ ಸಾಲದ ಗೋಳಿದೆ ಎಂಬುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಸೋನು ಖರೀದಿಸಿರುವ ಹೊಸ ಕಾರಿನ ಆನ್ ರೋಡ್ ಬೆಲೆ ಬರೋಬ್ಬರಿ 30 ಲಕ್ಷ ರೂಪಾಯಿ. ಈ ಐಷಾರಾಮಿ ಕಾರನ್ನು ಮನೆಗೆ ತರಲು ಸೋನು ಶ್ರೀನಿವಾಸ್ ಗೌಡ ಅವರು ಪಾವತಿಸಿರುವುದು ಕೇವಲ 5 ಲಕ್ಷ ರೂಪಾಯಿ ಡೌನ್ ಪೇಮೆಂಟ್ ಮಾತ್ರ. ಇನ್ನುಳಿದ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ಸಾಲದ ರೂಪದಲ್ಲಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ

‘ಪೇಡ್ ಸಬ್‌ಸ್ಕ್ರೈಬರ್ಸ್ ಇದ್ದಾರೆ ಎಂದಾಕ್ಷಣ ಸೋನು ಶ್ರೀನಿವಾಸ್ ಗೌಡ ಒಮ್ಮೆಗೆ ದುಡ್ಡು ಕೊಟ್ಟು ಕಾರು ತಗೊಂಡಿದ್ದಾರೆ ಅಂದುಕೊಂಡರೆ ತಪ್ಪು, ನಾನು ಇಎಂಐ ಮೂಲಕವೇ ಕಾರು ಖರೀದಿಸಿದ್ದು. ಆರು ವರ್ಷಗಳ ಕಾಲ ಕಾರಿನ ಇಎಂಐ ಕಟ್ಟಬೇಕಿದೆ’ ಎಂದು ತಮ್ಮ ಸಾಲದ ಹೊರೆಯನ್ನು ತೋಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ದಿಲ್ಜಿತ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
‘ಆಪರೇಷನ್ ಗಜ’ ಕಾರ್ಯಾಚರಣೆಗೆ ವ್ಯಾಪಕ ವಿರೋಧ: ಮೂಡಿಗೆರೆ ಬಂದ್‌
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ವಿಡಿಯೋ ಕರೆ ಮಾಡಿ ಧೈರ್ಯ ತುಂಬಿದ ಸಿಎಂ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಇಂದು ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಸಂಕಷ್ಟ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
‘ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ