Puneeth Rajkumar: ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮಕ್ಕೆ ಸಿದ್ಧತೆ, ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿ

Puneeth Namana: ಪುನೀತ ನಮನ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟನಟಿಯರು ಆಗಮಿಸಲಿದ್ದಾರೆ. ಕಮಲ್ ಹಾಸನ್, ಧನುಷ್ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ.

Puneeth Rajkumar: ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮಕ್ಕೆ ಸಿದ್ಧತೆ, ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿ
ಪುನೀತ್​ ರಾಜಕುಮಾರ್
Follow us
| Updated By: shivaprasad.hs

Updated on: Nov 06, 2021 | 3:43 PM

ನವೆಂಬರ್ 16ರಂದು ನಡೆಯುವ ‘ಪುನೀತ ನಮನ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಟಿವಿ9ನೊಂದಿಗೆ ಅವರು ಮಾತನಾಡಿದರು. ಡಾ.ರಾಜಕುಮಾರ್ ಕುಟುಂಬದ ಜತೆ ಚರ್ಚೆ ಮಾಡಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಚಿತ್ರೋದ್ಯಮದ ಗಣ್ಯರು, ಕಲಾವಿದರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ವಿ.ನಾಗೇಂದ್ರ ಪ್ರಸಾದ್‌ರಿಂದ 5 ನಿಮಿಷದ ಹಾಡು ತಯಾರಾಗಲಿದ್ದು, ಪುನೀತ್ ನಡೆದು ಬಂದ ಹಾದಿಯ ಚಿತ್ರಣ ಇರುತ್ತದೆ. 2000 ಜನರು ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಕೋರಲು ಯೋಜಿಸಲಾಗಿದೆ ಎಂದು ಜಯರಾಜ್ ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ದಕ್ಷಿಣ  ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ‘‘ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟನಟಿಯರು ಆಗಮಿಸಲಿದ್ದಾರೆ. ಕಮಲ್ ಹಾಸನ್, ಧನುಷ್ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ಅವರು ನುಡಿದಿದ್ದಾರೆ. ಮಧ್ಯಾಹ್ನ 3 ಘಂಟೆಯಿಂದ‌ ಕಾರ್ಯಕ್ರಮ ಆರಂಭ ಆಗಲಿದೆ. ಸ್ಯಾಕ್ಸೋಪೋನ್ ಮೂಲಕ ಕಾರ್ಯಕ್ರಮ ಆರಂಭ ಆಗುತ್ತದೆ ಎಂದು ಜಯರಾಜ್ ಹೇಳಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಆಹ್ವಾನಿಸಿದ ಸಾ.ರಾ ಗೋವಿಂದು: ಪುನೀತ ನಮನ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಆಹ್ವಾನಿಸಿದ್ದಾರೆ. ನವೆಂಬರ್ 16ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ.

ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ನಮನ: ಅಕಾಲಿಕ ನಿಧನದಿಂದ ದೂರವಾದ ನಟ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಸೋಮವಾರ ಪುನೀತ್ 11ನೇ ದಿನದ ಕಾರ್ಯ; ಪುನೀತ್ ನಿವಾಸದಲ್ಲಿ ಕುಟುಂಬಸ್ಥರಿಂದ ಚರ್ಚೆ: ಸೋಮವಾರ ನಟ ಪುನೀತ್ 11ನೇ ದಿನ ಕಾರ್ಯ ಹಿನ್ನಲೆಯಲ್ಲಿ ಅದರ ತಯಾರಿಯ ಕುರಿತು ಪುನೀತ್ ನಿವಾಸದಲ್ಲಿ ಶಿವಕುಮಾರ್, ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಿದ್ದಾರೆ. ಕಾರ್ಯಕ್ಕೆ ಗಣ್ಯರ ಆಹ್ವಾನ ಕುರಿತು ಚರ್ಚೆ ನಡೆಸಲಾಗಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸೋ ಸಾಧ್ಯತೆ ಇದೆ. ರಾಜಕೀಯ ಗಣ್ಯರು, ಪ್ರಮುಖ ನಟರು, ಆತ್ಮೀಯರು ಹಾಗೂ ಹತ್ತಿರದ ಸಂಬಂಧಿಗಳಿಗೆ ಮಾತ್ರ ಆಹ್ವಾನ ನೀಡುವ ಸಾಧ್ಯತೆ ಇದೆ. ಹೀಗಾಗಿ ಕಾರ್ಯದ ತಯಾರಿ ಬಗ್ಗೆ ಕುಟುಂಬದವರ ಜೊತೆ ಶಿವರಾಜ್ ಕುಮಾರ್ ಚರ್ಚೆ ನಡೆಸಿದ್ದಾರೆ. ಇದರೊಂದಿಗೆ ಬಂದೋಬಸ್ತ್, ಸಂಚಾರ ವ್ಯವಸ್ಥೆ ಬಗ್ಗೆ ಪೊಲೀಸರಿಂದ ಸಿದ್ದತೆ ನಡೆಸಲಾಗುತ್ತಿದ್ದು, ವಾಹನಗಳ ಎಂಟ್ರಿ ಹಾಗೂ ಎಕ್ಸಿಟ್ ಗೆ ಬ್ಯಾರಿಕೇಡ್ ಹಾಕುವ ಬಗ್ಗೆ ತಯಾರಿ ಮಾಡಲಾಗುತ್ತಿದೆ. ಸದಾಶಿವ ನಗರ ಸಂಚಾರಿ ಪೊಲೀಸರಿಂದ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ:

‘ಜಿಮ್​ಗೆ ಹೋಗೋದ್ರಿಂದ ಸಾವು ಸಂಭವಿಸುತ್ತೆ ಅನ್ನೋದು ತಪ್ಪು’: ನಟ ನೆನಪಿರಲಿ ಪ್ರೇಮ್​

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಕೆರೆ ಹಾಡಿಯ ಪಡಸಾಲೆಯಲ್ಲಿ ಕುಳಿತು ಜನದ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜನಾಂಗೀಯ ನಿಂದನೆಯಾಗಿದೆ ಅಂತ ಕುಮಾರಸ್ವಾಮಿ ಯಾಕೆ ದೂರು ನೀಡಿಲ್ಲ? ಶಿವಕುಮಾರ್
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಜಮೀರ್ ಅಹ್ಮದ್​​ರನ್ನು ಸೃಷ್ಟಿ ಮಾಡಿದ್ದೇ ದೇವೇಗೌಡರ ಕುಟುಂಬ: ವಿ ಸೋಮಣ್ಣ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಹನುಮಂತನ ಪಂಚೆ ಧರಿಸಿದ ಗೌತಮಿ ಜಾದವ್; ಬಟ್ಟೆ ಮಹಿಮೆಯಿಂದ ಬದಲಾಯ್ತು ವರ್ತನೆ
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಸಿದ್ದರಾಮಯ್ಯ ವಿರುದ್ಧ ಯಾವತ್ತೂ ವೈಯಕ್ತಿಕ ಟೀಕೆ ಮಾಡಿಲ್ಲ: ಎ ಮಂಜು
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ಚನ್ನಪಟ್ಟಣದಲ್ಲಿ ನಾನೇ ಮುಖ್ಯಮಂತ್ರಿ ಅಂತ ಶಿವಕುಮಾರ್ ಹೇಳುತ್ತಾರೆ: ಅಶೋಕ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ನಾನು ತಪ್ಪು ಮಾಡಿದ್ರೆ ಕ್ಷೇತ್ರದಲ್ಲಿ ರಕ್ತ ಕಾರಿ ಸಾಯಬೇಕು ಎಂದ ಮುನಿರತ್ನ
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಕುಮಾರಸ್ವಾಮಿಯನ್ನು ಸಿಎಂ ಮಾಡಲು ನಾನು ಬಸ್ ಓಡಿಸಿದ್ದು: ಜಮೀರ್ ಅಹ್ಮದ್
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮಹಿಳೆಯ ಎದೆ ಸ್ಪರ್ಶಿಸಿ ಪರಾರಿಯಾದ ಯುವಕನ ಬಂಧನ; ವಿಡಿಯೋ ವೈರಲ್​​
ಮನೆ ಮಂದಿ ಮೇಲೆ ಬೆಂಕಿ ಉಂಡೆ ಉಗುಳಿದ ಗೋಲ್ಡ್ ಸುರೇಶ್, ಸಿಟ್ಟಿಗೆ ಕಾರಣವೇನು?
ಮನೆ ಮಂದಿ ಮೇಲೆ ಬೆಂಕಿ ಉಂಡೆ ಉಗುಳಿದ ಗೋಲ್ಡ್ ಸುರೇಶ್, ಸಿಟ್ಟಿಗೆ ಕಾರಣವೇನು?