ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ

19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಧಿ ತುಂಬಾ ಕ್ರೂರ; ವಿವಾಹ ವಾರ್ಷಿಕೋತ್ಸವದ ಖುಷಿಯ ಹೊಸ್ತಿಲಲ್ಲಿದ್ದ ಸ್ಪಂದನಾ-ವಿಜಯ್ ರಾಘವೇಂದ್ರ
ವಿಜಯ್-ಸ್ಪಂದನಾ

Updated on: Aug 07, 2023 | 11:16 AM

ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ ತಿಳಿದು ಇಡೀ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಅಭಿಮಾನಿಗಳಿಗೂ ಈ ವಿಚಾರವನ್ನು ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಸ್ಪಂದನಾ ಹಾಗೂ ವಿಜಯ್ ಅವರು ವಿವಾಹ ವಾರ್ಷಿಕೋತ್ಸವದ ಹೊಸ್ತಿಲಲ್ಲಿ ಇದ್ದರು. ಅದಕ್ಕೂ ಮೊದಲೇ ಸ್ಪಂದನಾ ಮೃತಪಟ್ಟಿದ್ದಾರೆ.

ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರ ಮಗಳು ಸ್ಪಂದನಾ. ವಿಜಯ್ ಹಾಗೂ ಸ್ಪಂದನಾ ಅವರದ್ದು ಪ್ರೇಮ ವಿವಾಹ. 2007ರ ಆಗಸ್ಟ್ 26ರಂದು ಇವರು ಹಸಮಣೆ ಏರಿದ್ದರು. ಇನ್ನು, 19 ದಿನ ಕಳೆದಿದ್ದರೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವುದರಲ್ಲಿತ್ತು. ಅದಕ್ಕೂ ಮೊದಲೇ ವಿಧಿ ಇವರ ಬಾಳಲ್ಲಿ ಆಟವಾಡಿದೆ.

ವಿಜಯ್ ಹಾಗೂ ಸ್ಪಂದನಾ ಬ್ಯಾಂಕಾಕ್​​ಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸ್ಪಂದನಾಗೆ ಹೃದಯಾಘಾತ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್​​ನಲ್ಲೇ ನಡೆಯಲಿದೆ. ಮಂಗಳವಾರ (ಆಗಸ್ಟ್​​ 8) ಅವರ ಮೃತದೇಹ ಬೆಂಗಳೂರಿಗೆ ಬರಲಿದೆ.

ಇದನ್ನೂ ಓದಿ: Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಸ್ಪಂದನಾ ನಿಧನ ವಾರ್ತೆ ತಿಳಿದು ಇಡೀ ಸ್ಯಾಂಡಲ್​ವುಡ್ ಮರುಗಿದೆ. ಸ್ಪಂದನಾ ನಿಧನ ವಾರ್ತೆಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಸ್ಪಂದನಾ ಚಿತ್ರರಂಗದಲ್ಲೂ ಗುರುತಿಸಿಕೊಂಡಿದ್ದರು. 2016ರಲ್ಲಿ ರಿಲೀಸ್ ಆದ ರವಿಚಂದ್ರನ್ ನಿರ್ದೇಶನದ ‘ಅಪೂರ್ವ’ ಸಿನಿಮಾದಲ್ಲಿ ವಿಜಯ್ ರಾಘವೇಂದ್ರಗೆ ಜೊತೆಯಾಗಿ ಸ್ಪಂದನಾ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us