AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್ ಮುನಿರಾಜು ಜೊತೆಗಿನ ಲವ್ ಸ್ಟೋರಿ ರಿವೀಲ್ ಮಾಡಿದ ಸ್ಪಂದನಾ ಸೋಮಣ್ಣ

ಬಿಗ್ ಬಾಸ್ ಖ್ಯಾತಿಯ ಜನಪ್ರಿಯ ನಟಿ ಸ್ಪಂದನಾ ಸೋಮಣ್ಣ ಅವರು ಶೀಘ್ರದಲ್ಲೇ ವರುಣ್ ಮುನಿರಾಜು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಒಂದೇ ಕಾಲೇಜಿನಲ್ಲಿ ಓದುತ್ತಿದ್ದರೂ ಆ ಸಮಯದಲ್ಲಿ ಮಾತನಾಡಿಕೊಳ್ಳದ ಇವರ ಪ್ರೇಮವು ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಶುರುವಾಯಿತು. ಸುದೀರ್ಘ ವರ್ಷಗಳ ಕಾಲ ಲಾಂಗ್ ಡಿಸ್ಟೆನ್ಸ್ ರಿಲೇಶನ್‌ಶಿಪ್‌ನಲ್ಲಿದ್ದ ಈ ಜೋಡಿ, ಪರಸ್ಪರ ಬೆಂಬಲವಾಗಿ ನಿಂತು ಈಗ ಹೊಸ ಜೀವನ ಆರಂಭಿಸುತ್ತಿದೆ.

ವರುಣ್ ಮುನಿರಾಜು ಜೊತೆಗಿನ ಲವ್ ಸ್ಟೋರಿ ರಿವೀಲ್ ಮಾಡಿದ ಸ್ಪಂದನಾ ಸೋಮಣ್ಣ
ಸ್ಪಂದನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 12, 2026 | 8:03 AM

Share

ಬಿಗ್ ಬಾಸ್ ಖ್ಯಾತಿಯ ಜನಪ್ರಿಯ ನಟಿ ಸ್ಪಂದನಾ ಸೋಮಣ್ಣ ಅವರು ಶೀಘ್ರದಲ್ಲೇ ವರುಣ್ ಮುನಿರಾಜು ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ತಮ್ಮ ಮದುವೆಯ ಸಂಭ್ರಮದ ನಡುವೆ, ತಾವು ವರುಣ್ ಅವರನ್ನು ಭೇಟಿಯಾದ ರೋಚಕ ಹಾಗೂ ಸುಂದರ ಪ್ರೇಮಕಥೆಯನ್ನು ವೀಡಿಯೊ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕಾಲೇಜು ದಿನಗಳು: ಸ್ಪಂದನಾ ಮತ್ತು ವರುಣ್ ಒಂದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರಾದರೂ, ಆ ಕಾಲದಲ್ಲಿ ಇಬ್ಬರ ನಡುವೆ ಯಾವುದೇ ನೇರ ಪರಿಚಯ ಅಥವಾ ಮಾತುಕತೆ ಇರಲಿಲ್ಲ. ಈ ವಿಷಯ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಆ ಸಮಯದಲ್ಲಿ ಯಾವುದೇ ಪ್ರೀತಿ ಮೂಡಿರಲಿಲ್ಲ ಎಂಬುದನ್ನು ರಿವೀಲ್ ಮಾಡಿದ್ದಾರೆ.

ಕೋವಿಡ್ ಲಾಕ್‌ಡೌನ್ ತಿರುವು: ನಂತರ ಕೋವಿಡ್ ಸಮಯದಲ್ಲಿ ಇಬ್ಬರ ನಡುವೆ ಮಾತುಕತೆ ಆರಂಭವಾಯಿತು. ಕ್ರಮೇಣ ಇದು ಪರಿಚಯಕ್ಕೆ ತಿರುಗಿ, ಇಬ್ಬರೂ ದೀರ್ಘಕಾಲದ ‘ಲಾಂಗ್ ಡಿಸ್ಟೆನ್ಸ್ ರಿಲೇಶನ್‌ಶಿಪ್’ನಲ್ಲಿದ್ದರು.

ಕಷ್ಟದ ಸಮಯದಲ್ಲಿ ಬೆನ್ನೆಲುಬಾದ ವರುಣ

ವೃತ್ತಿಪರವಾಗಿ ತಾವಿಬ್ಬರೂ ಜೀವನದಲ್ಲಿ ಬೇರೆ ಬೇರೆ ಹಂತಗಳಲ್ಲಿದ್ದರೂ, ತಾನು ವೃತ್ತಿಜೀವನದಲ್ಲಿ ಹೆಣಗಾಡುತ್ತಿದ್ದ ಹಾಗೂ ಕಷ್ಟದ ಕಾಲದಲ್ಲಿದ್ದಾಗ ವರುಣ್ ಅವರು ತಮಗೆ ಅತ್ಯಂತ ಸಪೋರ್ಟಿವ್ ಆಗಿ ನಿಂತರು ಎಂದು ಸ್ಪಂದನಾ ಮುಕ್ತವಾಗಿ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ: ಸ್ಪಂದನಾ ಸೋಮಣ್ಣ ಮದುವೆ ಆಗ್ತಿರೋ ಹುಡುಗ ಯಾರು? ಕಾಲೇಜು ದಿನದಲ್ಲೇ ಮೂಡಿತ್ತು ಪ್ರೀತಿ

ಸದ್ಯ ಈ ಜೋಡಿಯ ಮದುರೆಯ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಪ್ಯಾರಿಸ್ ಐಫೆಲ್ ಟವರ್ ಎದುರು ನಿಂತು ಪೋಸ್ ಕೊಟ್ಟು ಫೋಟೋ ಪೋಸ್ಟ್ ಮಾಡಿದ್ದಾರೆ ಸ್ಪಂದನಾ. ಶೀಘ್ರವೇ ಇವರು ವಿವಾಹ ಆಗಲಿದ್ದಾರೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:59 am, Mon, 12 October 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ