AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವಿ ಪತಿ ವರುಣ್ ಮುನಿರಾಜು ಟ್ರೋಲ್ ಮಾಡಿದವರಿಗೆ ಸ್ಪಂದನಾ ಸೋಮಣ್ಣ ಖಡಕ್ ಉತ್ತರ

ಮದುವೆ ಸಮೀಪಿಸುತ್ತಿದ್ದಂತೆ ನಟಿ ಸ್ಪಂದನಾ ಸೋಮಣ್ಣ ಅವರ ಭಾವಿ ಪತಿ ವರುಣ್ ಮುನಿರಾಜು ಮದುವೆಗೆ ಸಿದ್ಧತೆ ನಡೆದಿದೆ. ಲಾಂಗ್ ಡಿಸ್ಟೆನ್ಸ್ ಪ್ರೀತಿಯ ಕಷ್ಟ ಹಾಗೂ ಕಣ್ಣೀರಿನ ವಿದಾಯಗಳಿಗೆ ಅಂತ್ಯಬಂದಿದೆ ಎಂದು ಭಾವುಕರಾಗಿ ಬರೆದುಕೊಂಡಿರುವ ಸ್ಪಂದನಾ, ತಮ್ಮ ಪ್ರೀತಿಯ ವೀಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ರೋಲಿಗರಿಗೆ ಖಡಕ್ ತಿರುಗೇಟು ನೀಡಿದ್ದಾರೆ.

ಭಾವಿ ಪತಿ ವರುಣ್ ಮುನಿರಾಜು ಟ್ರೋಲ್ ಮಾಡಿದವರಿಗೆ ಸ್ಪಂದನಾ ಸೋಮಣ್ಣ ಖಡಕ್ ಉತ್ತರ
ಸ್ಪಂದನಾ-ವರುಣ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 17, 2026 | 12:57 PM

Share

ಮುಖ್ಯಾಂಶಗಳು

  • ಬೆಂಗಳೂರಿಗೆ ಆಗಮಿಸಿದ ಸ್ಪಂದನಾ ಸೋಮಣ್ಣ ಭಾವಿ ಪತಿ ವರುಣ್
  • ಲಾಂಗ್ ಡಿಸ್ಟೆನ್ಸ್ ನೋವು ನೆನೆದು ಭಾವುಕರಾದ ನಟಿ ಸ್ಪಂದನಾ ಸೋಮಣ್ಣ
  • ನೆಗೆಟಿವ್ ಕಮೆಂಟ್ ಮಾಡುವವರಿಗೆ ಖಡಕ್ ತಿರುಗೇಟು ನೀಡಿದ ನಟಿ

ಕಿರುತೆರೆ ನಟಿ ಸ್ಪಂದನಾ ಸೋಮಣ್ಣ ಅವರ ವಿವಾಹದ ದಿನಗಳು ಸಮೀಪಿಸುತ್ತಿವೆ. ಹಲವು ವರ್ಷಗಳ ಗೆಳೆಯ ವರುಣ್ ಮುನಿರಾಜು  ಜೊತೆ ಹಸೆಮಣೆ ಏರುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ವರುಣ್ ಅವರನ್ನು ಸ್ವಾಗತಿಸಿದ ಸುಂದರ ಕ್ಷಣಗಳ ವಿಡಿಯೋವನ್ನು ಸ್ಪಂದನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ರೊಮ್ಯಾಂಟಿಕ್ ವಿಡಿಯೋ ಈಗ ಅಭಿಮಾನಿಗಳ ಗಮನ ಸೆಳೆದಿದೆ.

ದೂರದ ವಾಸ ಎಷ್ಟು ಕಷ್ಟಕರ ಎಂಬ ಬಗ್ಗೆ ಸ್ಪಂದನಾ ಭಾವುಕರಾಗಿ ಬರೆದುಕೊಂಡಿದ್ದಾರೆ. ‘ಅಂತಿಮವಾಗಿ ವಿಮಾನ ನಿಲ್ದಾಣದ ಬೀಳ್ಕೊಡುಗೆಗಳು ಮುಗಿಯುತ್ತಿವೆ ಮತ್ತು ಶಾಶ್ವತತೆಯ ಆರಂಭವು ಇಲ್ಲಿದೆ’ ಎಂದು ಬರೆದಿದ್ದಾರೆ. ಕಣ್ಣೀರು, ದಿನಗಳ ಕೌಂಟ್‌ಡೌನ್, ತಪ್ಪಿದ ಅಪ್ಪುಗೆಗಳು ಮತ್ತು ಮುಗಿಯದ ಏರ್‌ಪೋರ್ಟ್ ವಿದಾಯಗಳನ್ನು ವರ್ಷಗಟ್ಟಲೆ ಅನುಭವಿಸಿದ್ದಾಗಿ ಅವರು ನೆನಪಿಸಿಕೊಂಡಿದ್ದಾರೆ.

ಕೊನೆಗೂ ಪ್ರೀತಿಯೇ ಗೆದ್ದಿದೆ ಎಂದು ಸ್ಪಂದನಾ ಖುಷಿ ಹಂಚಿಕೊಂಡಿದ್ದಾರೆ. ‘ಇನ್ನು ಮುಂದೆ ಯಾವುದೇ ವಿದಾಯಗಳಿಲ್ಲ, ದಿನಗಳನ್ನು ಎಣಿಸುವುದಿಲ್ಲ, ಬದಲಿಗೆ ಒಟ್ಟಾಗಿ ಇಡಿಯಾದ ಜೀವನವಿದೆ’ ಎಂದು ಅವರು ಬರೆದುಕೊಂಡಿದ್ದಾರೆ. ಈ ಮೂಲಕ ಇನ್ನು ಮುಂದೆ ದೂರವಿರುವುದಿಲ್ಲ ಎಂಬ ತಮ್ಮ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೆಲವರ ನೆಗೆಟಿವ್ ಕಮೆಂಟ್‌ಗಳಿಗೂ ಸ್ಪಂದನಾ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ‘ಕೆಲವರು ಕಮೆಂಟ್‌ಗಳಲ್ಲಿ ಅನಗತ್ಯವಾಗಿ ತಲೆಕೆಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ನಾನು ಹೇಳುವುದೊಂದೇ – ಹೀಗೆಯೇ ತಲೆಕೆಡಿಸಿಕೊಳ್ಳುತ್ತಿರಿ, ನಾವು ಮಾತ್ರ ಸದಾ ಖುಷಿಯಾಗಿರುತ್ತೇವೆ’ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ವರುಣ್ ಮುನಿರಾಜು ಜೊತೆಗಿನ ಲವ್ ಸ್ಟೋರಿ ರಿವೀಲ್ ಮಾಡಿದ ಸ್ಪಂದನಾ ಸೋಮಣ್ಣ

ಸದ್ಯ ಸ್ಪಂದನಾ ಸೋಮಣ್ಣ ಮತ್ತು ವರುಣ್ ಮುನಿರಾಜು ಅವರ ಈ ವಿಡಿಯೋ ಹಾಗೂ ಪ್ರೀತಿಯ ಸಂದೇಶ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ. ನಟಿಯ ಮದುವೆ ಸಮಾರಂಭಕ್ಕಾಗಿ ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದು, ನವಜೋಡಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಕಾಮರ್ಸ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಫ್ರೀಲ್ಯಾನ್ಸಿಂಗ್ ಮಾಡುತ್ತಿದ್ದು, ಟಿವಿ9 ಕನ್ನಡದಲ್ಲಿಯೂ ಬರೆಯುತ್ತಿದ್ದೇನೆ.

Read More
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ