Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ.

Sreeleela: ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಶ್ರೀಲೀಲಾ ನಾಯಕಿ? ಕನ್ನಡತಿಗೆ ಬಂಪರ್​ ಆಫರ್
ಮಹೇಶ್​ ಬಾಬು-ಶ್ರೀಲೀಲಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 07, 2022 | 3:20 PM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಹೊಸ ಸಿನಿಮಾ ಇತ್ತೀಚೆಗೆ ಸದ್ದಿಲ್ಲದೆ ಸೆಟ್ಟೇರಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas)​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಚಿತ್ರಕ್ಕೆ ನಾಯಕಿ ಯಾರು ಎನ್ನುವ ಕುತೂಹಲ ಮೂಡಿತ್ತು. ಮೂಲಗಳ ಪ್ರಕಾರ ಕನ್ನಡತಿ ಶ್ರೀಲೀಲಾ (Sreeleela) ಈ ಚಿತ್ರಕ್ಕೆ ಎರಡನೇ ನಾಯಕಿ ಆಗಿ ಆಯ್ಕೆ ಆಗಿದ್ದಾರೆ ಎಂಬ ಮಾತು ಜೋರಾಗಿದೆ. ಈ ವಿಚಾರದ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮಹೇಶ್​ ಬಾಬು ಹೊಸ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾಗೆ ಎರಡನೇ ಹೀರೋಯಿನ್​ ಆಯ್ಕೆಯಲ್ಲಿ ತಂಡ ಬ್ಯುಸಿ ಆಗಿದೆ. ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಮಹೇಶ್​ ಬಾಬು ಜತೆ ಈ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಕನ್ನಡತಿ ಶ್ರೀಲೀಲಾ ಹೆಸರನ್ನು ತ್ರಿವಿಕ್ರಮ್​ ಅವರು ಮಹೇಶ್​ ಬಾಬು ಮುಂದೆ ಇಟ್ಟಿದ್ದಾರೆ. ಇದಕ್ಕೆ ಮಹೇಶ್​ ಬಾಬು ಗ್ರೀನ್​ ಸಿಗ್ನಲ್​ ನೀಡಿದ್ದಾರೆ ಎಂಬ ಗುಸುಗುಸು ಟಾಲಿವುಡ್​ ಅಂಗಳದಲ್ಲಿ ಜೋರಾಗಿದೆ.

ಪರಭಾಷೆಯ ಚಿತ್ರರಂಗದಲ್ಲಿ ಕನ್ನಡದ ಬೆಡಗಿಯರ ಹವಾ ಹೆಚ್ಚುತ್ತಿದೆ. ಅದರಲ್ಲೂ ಟಾಲಿವುಡ್​ನಲ್ಲಿ ಕನ್ನಡತಿಯರಿಗೆ ವಿಶೇಷ ಮನ್ನಣೆ ಸಿಗುತ್ತಿದೆ. ನಭಾ ನಟೇಶ್​, ರಶ್ಮಿಕಾ ಮಂದಣ್ಣ ಈಗಾಗಲೇ ತೆಲುಗು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ನಟಿ ಶ್ರೀಲೀಲಾ ಕೂಡ ತೆಲುಗಿನಲ್ಲಿ ನೆಲೆ ಕಂಡುಕೊಳ್ಳುತ್ತಿದ್ದಾರೆ. ಕನ್ನಡದಲ್ಲಿ ‘ಕಿಸ್​’ ಸಿನಿಮಾ ಮೂಲಕ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಪಡೆದರು. ‘ಪೆಳ್ಳಿ ಸಂದಡಿ’ ಚಿತ್ರದಿಂದ ಅವರು ಟಾಲಿವುಡ್​ನಲ್ಲಿ ಮನೆಮಾತಾದರು. ಆ ಸಿನಿಮಾ ಜನಮೆಚ್ಚುಗೆ ಗಳಿಸುವಲ್ಲಿ ಹಿಂದೆ ಬಿದ್ದಿತಾದರೂ ನಟಿ ಶ್ರೀಲೀಲಾಗೆ ಭಾರಿ ಜನಪ್ರಿಯತೆ ತಂದುಕೊಟ್ಟಿತು. ನಟನೆ ಮತ್ತು ಗ್ಲಾಮರ್​ನಿಂದಾಗಿ ಅವರು ಪ್ರೇಕ್ಷಕರ ಗಮನ ಸೆಳೆದರು. ಹೀಗಾಗಿ, ಟಾಲಿವುಡ್​ನಿಂದ ಅವರಿಗೆ ಸಾಕಷ್ಟು ಆಫರ್​ಗಳು ಹುಡುಕಿಕೊಂಡು ಬರುತ್ತಿವೆ.

‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಮಹೇಶ್​ ಬಾಬುಗೆ ಜತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದರು. ಈ ಸಿನಿಮಾ ಹಿಟ್​ ಆಗಿತ್ತು. ಈಗ ಮತ್ತಿಬ್ಬರು ಕನ್ನಡತಿ ಜತೆಗೆ ಅವರು ತೆರೆಹಂಚಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈಗಾಗಲೇ ನಿರ್ದೇಶಕರು ಶ್ರೀಲೀಲಾ ಜತೆಗೆ ಒಂದು ಹಂತದ ಮಾತುಕತೆ ಪೂರ್ಣಗೊಳಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರ ಸಂಕ್ರಾಂತಿ ಹಬ್ಬಕ್ಕೆ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿತ್ತು. ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ

ಒಟ್ಟಾಗಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡ ಕಿಚ್ಚ ಸುದೀಪ್- ಪ್ರಿನ್ಸ್ ಮಹೇಶ್ ಬಾಬು: ಫ್ಯಾನ್ಸ್ ಫುಲ್ ಖುಷ್

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್