ಸಿನಿಮಾ ಶೂಟಿಂಗ್​ಗೆ ಬ್ರೇಕ್​ ನೀಡಿ ಮಹತ್ವದ ಕೆಲಸಕ್ಕೆ ಮುಂದಾದ ನಟಿ ಶ್ರೀಲೀಲಾ

ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಟಾಲಿವುಡ್​ನಲ್ಲಿ ನಿರ್ಮಾಪಕರು ಶ್ರೀಲೀಲಾ ಕಾಲ್​ಶೀಟ್​ ಪಡೆಯೋಕೆ ಕಾದು ಕೂತಿದ್ದಾರೆ. ಆದರೆ, ಸದ್ಯಕ್ಕೆ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ನೀಡಿದ್ದಾರೆ.

ಸಿನಿಮಾ ಶೂಟಿಂಗ್​ಗೆ ಬ್ರೇಕ್​ ನೀಡಿ ಮಹತ್ವದ ಕೆಲಸಕ್ಕೆ ಮುಂದಾದ ನಟಿ ಶ್ರೀಲೀಲಾ
ಶ್ರೀಲೀಲಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 28, 2021 | 7:18 PM

ನಟಿ ಶ್ರೀಲೀಲಾಗೆ ಟಾಲಿವುಡ್​ನಲ್ಲಿ ಅದೃಷ್ಟ ಖುಲಾಯಿಸಿದೆ. ಸ್ಯಾಂಡಲ್​ವುಡ್​ನಲ್ಲಿ ಮಿಂಚಿದ ನಂತರದಲ್ಲಿ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರುತ್ತಿದೆ. ಈ ಮಧ್ಯೆ ತಮ್ಮ ಶಿಕ್ಷಣದ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ ಅವರು. ಈ ಕಾರಣಕ್ಕೆ ಶ್ರೀಲೀಲಾ ಸಿನಿಮಾ ಕೆಲಸ ತೊರೆದು ಶಿಕ್ಷಣದತ್ತ ಗಮನ ಹರಿಸೋಕೆ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಶ್ರೀಲೀಲಾ ಎಂಬಿಬಿಎಸ್​ ಪರೀಕ್ಷೆ ಬರೆಯೋಕೆ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ.

ಕನ್ನಡದ ‘ಕಿಸ್​’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್​ ಆಫೀಸ್​ನಲ್ಲಿ ಸೋತಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಟಾಲಿವುಡ್​ನಲ್ಲಿ ನಿರ್ಮಾಪಕರು ಶ್ರೀಲೀಲಾ ಕಾಲ್​ಶೀಟ್​ ಪಡೆಯೋಕೆ ಕಾದು ಕೂತಿದ್ದಾರೆ. ಆದರೆ, ಸದ್ಯಕ್ಕೆ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ನೀಡಿದ್ದಾರೆ.

ಹಲವು ಆಫರ್​ಗಳು ಬರುತ್ತಿರುವ ಮಧ್ಯೆಯೂ ಶ್ರೀಲೀಲಾ ಎಂಬಿಬಿಎಸ್​ ಅಂತಿಮ ವರ್ಷದ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದಾರೆ. ಈ ಕಾರಣಕ್ಕೆ ಶೂಟಿಂಗ್​ ಕೆಲಸಕ್ಕೆ ಬ್ರೇಕ್​ ನೀಡಿದ್ದಾರೆ. ಹೊಸ ಸಿನಿಮಾಗಳನ್ನು ಶಿಕ್ಷಣ ಪೂರ್ಣಗೊಂಡ ನಂತರವೇ ಒಪ್ಪಿಕೊಳ್ಳಬೇಕು ಎನ್ನುವ ನಿರ್ಧಾರ ಅವರದ್ದು.

‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್​ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್​ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್​ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್​ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್​’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್​ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್​ ಟು ಬ್ಯಾಕ್​ ಸಿನಿಮಾದ ಕಾಲ್​ಶೀಲ್​ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್​ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್​ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್​ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್​ನಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ತೆಲುಗಿನಲ್ಲಿ ಮೊದಲ ಚಿತ್ರದ ರಿಲೀಸ್​ಗೂ ಮುನ್ನವೇ ಹೆಚ್ಚಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ, ಪೂಜಾ, ಕೃತಿ ಕಥೆಯೇನು?

ಶ್ರೀಲೀಲಾ ಸೌಂದರ್ಯಕ್ಕೆ ಮಾರುಹೋದ ಟಾಲಿವುಡ್​

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ