ನಟಿ ಶ್ರೀಲೀಲಾಗೆ ಟಾಲಿವುಡ್ನಲ್ಲಿ ಅದೃಷ್ಟ ಖುಲಾಯಿಸಿದೆ. ಸ್ಯಾಂಡಲ್ವುಡ್ನಲ್ಲಿ ಮಿಂಚಿದ ನಂತರದಲ್ಲಿ ಅವರಿಗೆ ಟಾಲಿವುಡ್ನಿಂದ ಸಾಕಷ್ಟು ಆಫರ್ ಬರುತ್ತಿದೆ. ಈ ಮಧ್ಯೆ ತಮ್ಮ ಶಿಕ್ಷಣದ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ ಅವರು. ಈ ಕಾರಣಕ್ಕೆ ಶ್ರೀಲೀಲಾ ಸಿನಿಮಾ ಕೆಲಸ ತೊರೆದು ಶಿಕ್ಷಣದತ್ತ ಗಮನ ಹರಿಸೋಕೆ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಶ್ರೀಲೀಲಾ ಎಂಬಿಬಿಎಸ್ ಪರೀಕ್ಷೆ ಬರೆಯೋಕೆ ಸಿದ್ಧರಾಗುತ್ತಿದ್ದಾರೆ ಎನ್ನಲಾಗಿದೆ.
ಕನ್ನಡದ ‘ಕಿಸ್’ ಚಿತ್ರದಿಂದ ಪ್ರೇಕ್ಷಕರಿಗೆ ಪರಿಚಯವಾದ ಈ ಅಪ್ಪಟ ಕನ್ನಡತಿಗೆ ತೆಲುಗು ನೆಲದಲ್ಲಿ ಡಿಮ್ಯಾಂಡ್ ಸೃಷ್ಟಿ ಆಗಿದೆ. ಅವರು ನಟಿಸಿರುವ ತೆಲುಗು ಸಿನಿಮಾ ‘ಪೆಳ್ಳಿ ಸಂದಡಿ’ ಬಾಕ್ಸ್ ಆಫೀಸ್ನಲ್ಲಿ ಸೋತಿದೆ. ಅದರ ನಡುವೆಯೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಟಾಲಿವುಡ್ನಲ್ಲಿ ನಿರ್ಮಾಪಕರು ಶ್ರೀಲೀಲಾ ಕಾಲ್ಶೀಟ್ ಪಡೆಯೋಕೆ ಕಾದು ಕೂತಿದ್ದಾರೆ. ಆದರೆ, ಸದ್ಯಕ್ಕೆ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ನೀಡಿದ್ದಾರೆ.
ಹಲವು ಆಫರ್ಗಳು ಬರುತ್ತಿರುವ ಮಧ್ಯೆಯೂ ಶ್ರೀಲೀಲಾ ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದಾರೆ. ಈ ಕಾರಣಕ್ಕೆ ಶೂಟಿಂಗ್ ಕೆಲಸಕ್ಕೆ ಬ್ರೇಕ್ ನೀಡಿದ್ದಾರೆ. ಹೊಸ ಸಿನಿಮಾಗಳನ್ನು ಶಿಕ್ಷಣ ಪೂರ್ಣಗೊಂಡ ನಂತರವೇ ಒಪ್ಪಿಕೊಳ್ಳಬೇಕು ಎನ್ನುವ ನಿರ್ಧಾರ ಅವರದ್ದು.
‘ಪೆಳ್ಳಿ ಸಂದಡಿ’ ಸಿನಿಮಾದಲ್ಲಿ ಶ್ರೀಲೀಲಾ ಅವರ ನಟನೆ, ಗ್ಲಾಮರ್ ಕಂಡವರು ಫಿದಾ ಆಗಿದ್ದಾರೆ. ಸದ್ಯ ಟಾಲಿವುಡ್ ಅಂಗಳದಲ್ಲಿ ಅವರ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಹಲವು ಸಿನಿಮಾ ತಂಡಗಳು ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆಸುತ್ತಿವೆ. ಸ್ಟಾರ್ ನಟ ರವಿ ತೇಜಾ ಅವರ ಸಿನಿಮಾದಲ್ಲಿ ಶ್ರೀಲೀಲಾಗೆ ಚಾನ್ಸ್ ಸಿಕ್ಕಿದೆ ಎಂಬ ಮಾಹಿತಿ ಕೇಳಿಬರುತ್ತಿದೆ.
ತೆಲುಗು ಚಿತ್ರರಂಗದ ಪ್ರತಿಷ್ಠಿತ ‘ಗೀತಾ ಆರ್ಟ್ಸ್’ ನಿರ್ಮಾಣ ಸಂಸ್ಥೆ ಈಗ ಶ್ರೀಲೀಲಾ ಮೇಲೆ ಕಣ್ಣಿಟಿದೆ. ನಿರ್ಮಾಪಕ ಅಲ್ಲು ಅರವಿಂದ್ ಅವರು ಶ್ರೀಲೀಲಾ ಜೊತೆ ಮೂರು ಬ್ಯಾಕ್ ಟು ಬ್ಯಾಕ್ ಸಿನಿಮಾದ ಕಾಲ್ಶೀಲ್ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ತಮ್ಮ ಬ್ಯಾನರ್ನಲ್ಲಿ ನಿರ್ಮಾಣ ಆಗಲಿರುವ ಸ್ಟಾರ್ ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾದರೆ ಒಳಿತು ಎಂಬ ಲೆಕ್ಕಾಚಾರದಲ್ಲಿ ಅಲ್ಲು ಅರವಿಂದ್ ಅವರಿದ್ದಾರೆ ಎಂಬ ಗುಸುಗುಸು ಟಾಲಿವುಡ್ನಲ್ಲಿ ಕೇಳಿಬರುತ್ತಿದೆ.
ಇದನ್ನೂ ಓದಿ: ತೆಲುಗಿನಲ್ಲಿ ಮೊದಲ ಚಿತ್ರದ ರಿಲೀಸ್ಗೂ ಮುನ್ನವೇ ಹೆಚ್ಚಿದೆ ಕನ್ನಡತಿ ಶ್ರೀಲೀಲಾ ಹವಾ; ರಶ್ಮಿಕಾ, ಪೂಜಾ, ಕೃತಿ ಕಥೆಯೇನು?