AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhagaja Teaser: ಶ್ರೀಮುರಳಿ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಮದಗಜ ಕಡೆಯಿಂದ ಹೊಸ ಅಪ್​ಡೇಟ್​

ಹಬ್ಬದ ದಿನ ಚಿತ್ರತಂಡದಿಂದ ಪೋಸ್ಟರ್​, ಟೀಸರ್​, ಟ್ರೇಲರ್​ ರಿಲೀಸ್​ ಮಾಡುವ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಈಗ ಮದಗಜ ಕೂಡ ಇದನ್ನು ಫಾಲೋ ಮಾಡುತ್ತಿದೆ.

Madhagaja Teaser: ಶ್ರೀಮುರಳಿ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಮದಗಜ ಕಡೆಯಿಂದ ಹೊಸ ಅಪ್​ಡೇಟ್​
ಶ್ರೀಮುರಳಿ
ರಾಜೇಶ್ ದುಗ್ಗುಮನೆ
|

Updated on: Apr 09, 2021 | 7:07 PM

Share

ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಸಿನಿಮಾ ಮದಗಜ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಶೂಟಿಂಗ್​ ವೇಳೆ ಶ್ರೀಮುರಳಿ ಗಾಯಗೊಂಡಿದ್ದರು. ಈ ವಿಚಾರ ಅಭಿಮಾನಿಗಳಿಗೆ ಬೇಸರ ಮೂಡಿಸಿತ್ತು. ಈಗ ಈ ಬೇಸರ ದೂರವಾಗುವ ಸುದ್ದಿಯನ್ನು ಚಿತ್ರತಂಡ ನೀಡಿದೆ. ಮದಗಜ ಚಿತ್ರತಂಡ ಲವ್​ ಟೀಸರ್​ ಬಿಡುಗಡೆ ಮಾಡೋಕೆ ಡೇಟ್​ ಅನೌಂನ್ಸ್​ ಮಾಡಿದೆ. ಹಬ್ಬದ ದಿನ ಚಿತ್ರತಂಡದಿಂದ ಪೋಸ್ಟರ್​, ಟೀಸರ್​, ಟ್ರೇಲರ್​ ರಿಲೀಸ್​ ಮಾಡುವ ಸಂಪ್ರದಾಯ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಈಗ ಮದಗಜ ಕೂಡ ಇದನ್ನು ಫಾಲೋ ಮಾಡುತ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾ ತಂಡ ಟೀಸರ್​ ಒಂದನ್ನು ಬಿಡುಗಡೆ ಮಾಡಲಿದೆ.

ಈ ಬಗ್ಗೆ ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಮಂಗಳವಾರ (ಏಪ್ರಿಲ್​ 13) ಯುಗಾದಿ ಹಬ್ಬದ ಪ್ರಯುಕ್ತ 10:05 ನಿಮಿಷಕ್ಕೆ ನಮ್ಮ ಮದಗಜ ಚಿತ್ರದ ಟೀಸರ್​ ಕನ್ನಡ ,ತೆಲುಗು, ತಮಿಳು, ಹಿಂದಿ, ಭಾಷೆಗಳಲ್ಲಿ ಏಕಕಾಲದಲ್ಲಿ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್​​ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ‘ಮದಗಜ’ ಸಿನಿಮಾದ ಫೈಟಿಂಗ್​ ದೃಶ್ಯಗಳನ್ನು ಚಿತ್ರಿಸಲಾಗುತ್ತಿತ್ತು. ಸತತ 5 ದಿನಗಳ ಕಾಲ ಚಿತ್ರೀಕರಣ ನಡೆಸಲು ನಿರ್ದೇಶಕ ಮಹೇಶ್​ ಕುಮಾರ್​ ಪ್ಲ್ಯಾನ್​ ಮಾಡಿಕೊಂಡಿದ್ದರು. ಎಲ್ಲವೂ ಸರಾಗವಾಗಿ ನಡೆಯುತ್ತಿತ್ತು. ಆದರೆ ಒಂದು ಸನ್ನಿವೇಶದ ಶೂಟಿಂಗ್​ನಲ್ಲಿ ಶ್ರೀಮುರಳಿ ಕಾಲಿಗೆ ಗಾಯವಾಗಿತ್ತು. ಅವರು 15 ದಿನಗಳ ಕಾಲ ಬೆಡ್​ ರೆಸ್ಟ್​ ತೆಗೆದುಕೊಳ್ಳಬೇಕಾಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು.

‘ಭರಾಟೆ’ ಸಿನಿಮಾದ ಬಳಿಕ ಶ್ರೀಮರಳಿ ನಟಿಸುತ್ತಿರುವ ‘ಮದಗಜ’ ಚಿತ್ರ ಕೂಡ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬರುತ್ತಿದೆ. ‘ಅಯೋಗ್ಯ’ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡ ಮಹೇಶ್​ ಈಗ ‘ಮದಗಜ’ಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಭಾರಿ ನಿರೀಕ್ಷೆ ಮೂಡಿಸಿದೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳು ಈ ಚಿತ್ರದಲ್ಲಿ ಇರಲಿವೆ. ಬಹಳ ದಿನಗಳ ಹಿಂದೆಯೇ ಈ ಸಿನಿಮಾ ಸೆಟ್ಟೇರಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದಾಗಿ ಚಿತ್ರದ ಕೆಲಸಗಳು ತಡವಾಗಿದ್ದವು. ಈಗ ಶ್ರೀಮರಳಿ ಗಾಯ ಮಾಡಿಕೊಂಡಿರುವುದರಿಂದ ಶೂಟಿಂಗ್​ ಇನ್ನಷ್ಟು ವಿಳಂಬ ಆಗಲಿದೆ.

ಈ ಸಿನಿಮಾದಲ್ಲಿ ಶ್ರೀಮರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಟ ಜಗಪತಿ ಬಾಬು ಕೂಡ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಮುಂತಾದ ಭಾಷೆಗಳಲ್ಲೂ ಮದಗಜ ಮೂಡಿಬರುತ್ತಿದೆ. ‘ರಾಬರ್ಟ್​’ ಸಿನಿಮಾ ಮೂಲಕ ಭಾರಿ ಯಶಸ್ಸು ಕಂಡಿರುವ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ‘ಮದಗಜ’ಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: Sri Murali: ‘ಮದಗಜ’ ಫೈಟಿಂಗ್​ ವೇಳೆ ಗಾಯಗೊಂಡ ಶ್ರೀಮುರಳಿ! ರೋರಿಂಗ್​ ಸ್ಟಾರ್​ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?