AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಘೀರ’ ಸಿನಿಮಾ ಟೀಸರ್ ಲಾಂಚ್​ಗೆ ಮುಹೂರ್ತ ನಿಗದಿ

Bagheeera: ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿ, ಶ್ರೀಮುರಳಿ, ರುಕ್ಮಿಣಿ ವಸಂತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಬಘೀರ’ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

‘ಬಘೀರ’ ಸಿನಿಮಾ ಟೀಸರ್ ಲಾಂಚ್​ಗೆ ಮುಹೂರ್ತ ನಿಗದಿ
ಮಂಜುನಾಥ ಸಿ.
| Edited By: |

Updated on:Dec 14, 2023 | 12:03 PM

Share

ಶ್ರೀಮುರಳಿ (SriMurali) ನಟಿಸಿರುವ ‘ಬಘೀರ’ (Bagheera) ಸಿನಿಮಾದ ಟೀಸರ್​ ಲಾಂಚ್​ಗೆ ಮುಹೂರ್ತ ನಿಗದಿಯಾಗಿದೆ. ಹೊಂಬಾಳೆ ನಿರ್ಮಿಸುತ್ತಿರುವ ಈ ಸಿನಿಮಾದ ಚಿತ್ರೀಕರಣ ನಾನಾ ಕಾರಣಗಳಿಂದ ತಡವಾಗುತ್ತಲೇ ಬಂದಿತ್ತು. ಸಿನಿಮಾ ಶುರುವಾಗಿ ಬಹಳ ದಿನಗಳೇ ಕಳೆದಿದ್ದವು, ಇದೀಗ ಹೊಂಬಾಳೆ ಫಿಲ್ಮ್ಸ್​ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದು, ‘ಬಘೀರ’ ಬಗ್ಗೆ ಮತ್ತೆ ಪ್ರೇಕ್ಷಕರಲ್ಲಿ ಕುತೂಹಲ ಮೂಡುವಂತಾಗಿದೆ.

‘ಬಘೀರ’ ಸಿನಿಮಾದ ಟೀಸರ್ ಡಿಸೆಂಬರ್ 17ರ ಬೆಳಿಗ್ಗೆ 9:45ಕ್ಕೆ ಬಿಡುಗಡೆ ಆಗಲಿದೆ. ‘ಅರಣ್ಯ ಉಸಿರು ಬಿಗಿ ಹಿಡಿದು ಕಾಯುತ್ತಿರುತ್ತದೆ’ ಎಂಬ ಅಡಿಬರಹದೊಂದಿಗೆ ಟೀಸರ್ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್​ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಶ್ರೀಮುರಳಿ ನಟಿಸಿರುವ ಈ ಸಿನಿಮಾಕ್ಕೆ ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಕತೆ ಬರೆದಿದ್ದಾರೆ, ಹಾಗಾಗಿ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ.

‘ಬಘೀರ’ ಸಿನಿಮಾವನ್ನು ಡಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಕತೆ ಬರೆದಿರುವುದು ಪ್ರಶಾಂತ್ ನೀಲ್, ‘ಬಘೀರ’ ಚಿತ್ರಕತೆಯನ್ನು ತಿದ್ದಿ ಫೈನ್ ಟ್ಯೂನ್ ಮಾಡುವಲ್ಲಿಯೂ ಪ್ರಶಾಂತ್ ನೀಲ್ ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಅಸಲಿಗೆ ಈ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸಬೇಕಿತ್ತಂತೆ, ಆದರೆ ‘ಕೆಜಿಎಫ್ 2’ ಹಾಗೂ ಅದರ ಹಿಂದೆಯೇ ‘ಸಲಾರ್’ ಸಿನಿಮಾದಲ್ಲಿ ತೊಡಗಿಕೊಂಡ ಕಾರಣ ಸಿನಿಮಾದ ಕತೆಯನ್ನು ಬೇರೆಯವರಿಗೆ ನೀಡಿ ನಿರ್ದೇಶನ ಮಾಡಿಸಿದ್ದಾರೆ.

ಇದನ್ನೂ ಓದಿ:Sri Murali: ಶ್ರೀಮುರಳಿ ಕಾಲಿಗೆ ಪೆಟ್ಟು: ‘ಬಘೀರ’ ಚಿತ್ರದ ಶೂಟಿಂಗ್​ ವೇಳೆ ಅವಘಡ; ಶೀಘ್ರದಲ್ಲೇ ಸರ್ಜರಿ

‘ಬಘೀರ’ ಸಿನಿಮಾವು ಪಕ್ಕಾ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಬಹಳ ಸಮಯವಾಗಿದೆ. ಆದರೆ ಸಿನಿಮಾದ ಚಿತ್ರೀಕರಣ ನಾನಾ ಕಾರಣಗಳಿಗೆ ತಡವಾಗುತ್ತಲೇ ಬಂತು. ಚಿತ್ರೀಕರಣದ ವೇಳೆ ಶ್ರೀಮುರಳಿಗೆ ಗಾಯವಾದ ಘಟನೆಯೂ ಸಹ ನಡೆಯಿತು. ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾದ ಚಿತ್ರೀಕರಣವನ್ನು ಚಿತ್ರತಂಡ ಮುಗಿಸಿದಂತಿದೆ. ‘ಬಘೀರ’ ಸಿನಿಮಾದಲ್ಲಿ ಶ್ರೀಮುರಳಿ ಎದುರು ‘ಸಪ್ತ ಸಾಗರದಾಚೆ ಎಲ್ಲೋ’ ಚೆಲುವೆ ರುಕ್ಮಿಣಿ ವಸಂತ್ ನಟಿಸಿದ್ದಾರೆ.

ಹೊಂಬಾಳೆ ನಿರ್ಮಿಸುತ್ತಿರುವ ಸಿನಿಮಾಗಳು ಒಂದರ ಹಿಂದೊಂದು ಬಿಡುಗಡೆಗೆ ಸಜ್ಜಾಗುತ್ತಿವೆ. ‘ಸಲಾರ್’ ಇದೇ ತಿಂಗಳು 22ಕ್ಕೆ ಬಿಡುಗಡೆ ಆಗಲಿದೆ. ಅದರ ಬೆನ್ನಲ್ಲೆ ಯುವರಾಜ್ ಕುಮಾರ್ ನಟನೆಯ ‘ಯುವ’ ಬಿಡುಗಡೆ ಆಗಲಿದೆ. ಅದಾದ ಬಳಿಕ ‘ಬಘೀರ’ ತೆರೆಗೆ ಬರಲಿದೆ. ಮಲಯಾಳಂನಲ್ಲಿ ‘ಟೈಸನ್’, ತಮಿಳಿನಲ್ಲಿ ‘ತಾತ’ ಹೆಸರಿನ ಸಿನಿಮಾಗಳನ್ನು ಸಹ ಹೊಂಬಾಳೆ ನಿರ್ಮಾಣ ಮಾಡುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 13 December 23

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?