ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್

Bagheera Trailer: ಶ್ರೀಮುರಳಿ ನಾಯಕನಾಗಿ ನಟಿಸಿ, ಹೊಂಬಾಳೆ ಫಿಲಮ್ಸ್​ ಬಂಡವಾಳ ಹೂಡಿದ್ದ ‘ಬಘೀರ’ ಸಿನಿಮಾ ವರ್ಷಗಳಿಂದಲೂ ಚಿತ್ರೀಕರಣ ಚಾಲ್ತಿಯಲ್ಲಿತ್ತು. ಶ್ರೀಮುರಳಿಗೆ ಆದ ಗಾಯಗಳು ಇನ್ನಿತರೆ ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬಂದಿತ್ತು. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಬಘೀರನೇ ರಕ್ಷಕ-ರಾಕ್ಷಸ; ಗಮನ ಸೆಳೆದ ಶ್ರೀಮುರಳಿ ಸಿನಿಮಾದ ಟ್ರೇಲರ್
ಧ್ರುವ

Updated on: Oct 21, 2024 | 10:40 AM

ನಟ ಶ್ರೀಮುರಳಿ ಅವರು ಇತ್ತೀಚೆಗೆ ಆ್ಯಕ್ಷನ್ ಹೀರೋ ಎನಿಸಿಕೊಂಡಿದ್ದಾರೆ. ಅವರು ‘ಬಘೀರ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ, ಡಾ. ಸೂರಿ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಶ್ರೀಮುರಳಿ ಎರಡು ಶೇಡ್​ನ ಕಾಣಿಸಿಕೊಂಡಿದ್ದಾರೆ.

ಶ್ರೀಮುರಳಿ ಅವರು ‘ಬಘೀರ’ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಕೆಟ್ಟವರ ನಾಶ ಮಾಡಲು ‘ಬಘೀರ’ನಾಗುತ್ತಾನೆ. ಅವರದ್ದು ಎರಡು ಶೇಡ್​ನ ಪಾತ್ರ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಸಿನಿಮಾ ಉದ್ದಕ್ಕೂ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬುದು ಟ್ರೇಲರ್ ನೋಡಿದವರಿಗೆ ಸ್ಪಷ್ಟವಾಗಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರು ಕಥೆ ಬರೆದಿದ್ದಾರೆ.  ಅಲ್ಲಲ್ಲಿ ‘ಕೆಜಿಎಫ್’ನಂತೆ ಬ್ಲ್ಯಾಕ್​ಶೇಡ್​ನಲ್ಲಿ ಸಿನಿಮಾ ಮೂಡಿ ಬಂದಿದೆ.

ಈ ಚಿತ್ರದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್, ಪ್ರಕಾಶ್ ರಾಜ್, ರಂಗಾಯಣ ರಘು, ಅಚ್ಯುತ್ ಕುಮಾರ್, ಗರುಡಾ ರಾಮ್, ಸುಧಾರಾಣಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ.

YouTube video player

ಈ ಚಿತ್ರದಲ್ಲಿ ಶ್ರೀಮುರಳಿ ಅವರು ಬ್ಯಾಟ್​ಮ್ಯಾನ್ ರೀತಿಯೂ ಕಾಣಿಸಿಕೊಳ್ಳುತ್ತಾರೆ. ಈ ಟ್ರೇಲರ್ ಕೆಲವೇ ನಿಮಿಷಗಳಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ‘ರುದ್ರ + ಹರ= ಬಘೀರ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಬಘೀರ’ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರೇ ಈ ಚಿತ್ರಕ್ಕೆ ಕಥೆ ಬರೆದಿರುವುದರಿಂದ ಪರಭಾಷಿಗರು ಚಿತ್ರವನ್ನು ಇಷ್ಟಪಡಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಘೋಷಣೆಯಾಯ್ತು ಶ್ರೀಮುರಳಿಯ ‘ಬಘೀರ’ ಬಿಡುಗಡೆ ದಿನಾಂಕ

ಶ್ರೀಮುರಳಿ ನಟನೆಯ ಕೊನೆಯ ಸಿನಿಮಾ ‘ಮದಗಜ’. ಈ ಚಿತ್ರ 2021ರಲ್ಲಿ ರಿಲೀಸ್ ಆಯಿತು. ಈ ಚಿತ್ರ ಸಾಧಾರಣ ಮೆಚ್ಚುಗೆ ವ್ಯಕ್ತವಾಯಿತು. ಈಗ ಅವರು ಮತ್ತೆ ತೆರೆಮೇಲೆ ಬರಲು ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us