AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​​ವುಡ್​​ನಲ್ಲಿ ಬರಗಲಾದಲ್ಲಿ ಮಳೆ; ಸೈಲೆಂಟ್​ ಆಗೇ ಸದ್ದು ಮಾಡ್ತಿದೆ ‘ವಿಡಿಯೋ’ ಸಿನಿಮಾ

ಸ್ಯಾಂಡಲ್​​ವುಡ್​​ನಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ ‘ವಿಡಿಯೋ’ ಸಿನಿಮಾ ಸೈಲೆಂಟ್ ಆಗಿ ಸದ್ದು ಮಾಡುತ್ತಿದೆ. ಯೂಟ್ಯೂಬರ್‌ಗಳ ಕಥೆ ಆಧಾರಿತ ಈ ಹಾರರ್ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಿಕ್ಕ ಕಡಿಮೆ ಶೋಗಳೇ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿವೆ. ದೀಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಹಾರರ್ ಪ್ರಿಯರ ಗಮನ ಸೆಳೆಯುತ್ತಿದೆ.

ಸ್ಯಾಂಡಲ್​​ವುಡ್​​ನಲ್ಲಿ ಬರಗಲಾದಲ್ಲಿ ಮಳೆ; ಸೈಲೆಂಟ್​ ಆಗೇ ಸದ್ದು ಮಾಡ್ತಿದೆ ‘ವಿಡಿಯೋ’ ಸಿನಿಮಾ
ವಿಡಿಯೋ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Sep 12, 2026 | 1:15 PM

Share

ಮುಖ್ಯಾಂಶಗಳು

  • ಹಾರರ್ ಪ್ರಿಯರ ಗಮನ ಸೆಳೆದ 'ವಿಡಿಯೋ' ಸಿನಿಮಾ
  • ಕಡಿಮೆ ಶೋ ಸಿಕ್ಕರೂ ಹೌಸ್‌ಫುಲ್ ಪ್ರದರ್ಶನ
  • ಸೈಲೆಂಟ್ ಆಗಿ ಸದ್ದು ಮಾಡುತ್ತಿರೋ ಯೂಟ್ಯೂಬರ್‌ಗಳ ಕಥೆ

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಈ ಪೈಕಿ ಕೆಲವು ಯಶಸ್ಸು ಕಂಡರೆ ಇನ್ನೂ ಕೆಲವು ಸದ್ದಿಲ್ಲದೆ ಕಳೆದು ಹೋಗುತ್ತವೆ. ಹೊಸ ಪ್ರಯತ್ನಗಳ ಪೈಕಿ ಗೆಲ್ಲೋದು ಕೆಲವು ಮಾತ್ರ. ಈ ಸಾಲಿಗೆ ‘ವಿಡಿಯೋ’ ಸಿನಿಮಾ ಕೂಡ ಸೇರ್ಪಡೆ ಆಗುವ ನಿರೀಕ್ಷೆ ಇದೆ. ಹೊಸ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಮೆಚ್ಚುಗೆ ಪಡೆಯುತ್ತಿದೆ. ಬುಕಿಂಗ್ ಕೂಡ ಉತ್ತಮವಾಗಿಯೇ ಆಗುತ್ತಿದೆ.

‘ವಿಡಿಯೋ’ ಸಿನಿಮಾದ ಕಥೆ ಏನು?

‘ವಿಡಿಯೋ’ ಸಿನಿಮಾ ಯೂಟ್ಯೂಬರ್​​ಗಳ ಕಥೆ. ಕನ್ನಡದ ಫೇಮಸ್ ವ್ಲಾಗರ್ಸ್ ಭಯ ಬೀಳಿಸುವ ಜಾಗಕ್ಕೆ ತೆರಳುತ್ತಾರೆ. ಅಲ್ಲಿ ವ್ಲಾಗ್ ಮಾಡಿ ಫೇಮಸ್ ಆಗಬೇಕು ಎಂಬದು ಅವರ ಉದ್ದೇಶ ಆಗಿರುತ್ತದೆ. ಅಲ್ಲಿಗೆ ತೆರಳಿದ ಬಳಿಕ ಏನೆಲ್ಲ ಆಗುತ್ತದೆ ಎಂಬುದೇ ಸಿನಿಮಾದ ಕಥೆ. 6-5=2 ಹೆಸರಿನ ಹಾರರ್ ಸಿನಿಮಾ ಈ ಮೊದಲು ಬಂದು ಹಿಟ್ ಆಗಿತ್ತು. ಅದೇ ಮಾದರಿಯಲ್ಲಿ ಈ ‘ವಿಡಿಯೋ’ ಸಿನಿಮಾ ಮೂಡಿ ಬಂದಿದೆ. ಈ ಚಿತ್ರ ಹಾರರ್ ಪ್ರಿಯರಿಗೆ ಇಷ್ಟ ಆಗುತ್ತಿದೆ.

ಶ್ರೀನಿಧಿ ಬೆಂಗಳೂರು ಅವರು ‘ವಿಡಿಯೋ’ ಚಿತ್ರವನ್ನು ನಿರ್ದೇಶನ ಮಾಡಿದ್​ದಾರೆ. ಕನ್ನಡದ ಖ್ಯಾತ ನಟ ದೀಕ್ಷಿತ್ ಶೆಟ್ಟಿ ಅವರು ಶ್ರೀನಿಧಿ ಶೆಟ್ಟಿ ಪ್ರಯತ್ನಕ್ಕೆ ಹಣ ಹಾಕಿದ್ದಾರೆ. ‘ದೀ ಸಿನಿಮಾಸ್’ ಬ್ಯಾನರ್ ಅಡಿಯಲ್ಲಿ ಇದು ಮೂಡಿಬಂದಿದೆ.ಭರತ್, ಜೀವನ್ ಶಿವಕುಮಾರ್, ತೇಜಶ್, ಪ್ರಿಯಾ ಆಚಾರ ಮೊದಲಾದವರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

‘ವಿಡಿಯೋ’ ಚಿತ್ರಕ್ಕೆ ಎ ರೇಟಿಂಗ್ ಸಿಕ್ಕಿದೆ. ವಿಶೇಷ ಎಂದರೆ ಸಿನಿಮಾಗೆ ಬೆಂಗಳೂರಿನಲ್ಲಿ ಕಡಿಮೆ ಶೋಗಳು ಸಿಕ್ಕಿವೆ. ಸಿಕ್ಕ ಶೋಗಳೇ ಹೌಸ್​ಫುಲ್ ಆಗುತ್ತಿವೆ. ಈ ಸಿನಿಮಾದ ಬುಕಿಂಗ್ ಹೀಗೆಯೇ ಮುಂದುವರಿದರೆ ಎರಡನೇ ವಾರದ ವೇಳೆಗೆ ಶೋಗಳ ಸಂಖ್ಯೆ ಹೆಚ್ಚಾಗಬಹುದು.

ಇದನ್ನೂ ಓದಿ: ಟ್ರೇಲರ್ ಇಲ್ಲದೆ ಬರ್ತಿದೆ ‘ಪ್ಯಾರಡೈಸ್’ ಸಿನಿಮಾ; ಪ್ರೇಕ್ಷಕರು ಇದನ್ನು ಒಪ್ಪುತ್ತಾರಾ?

ಸದ್ಯ ಸಾಕಷ್ಟು ನಿರ್ದೇಶಕರು ಹಾಗೂ ಸೆಲೆಬ್ರಿಟಿಗಳು ಸಿನಿಮಾಗೆ ವಿಶ್ ಮಾಡುತ್ತಿದ್ದಾರೆ. ಈ ಸಿನಿಮಾ ಮತ್ತಷ್ಟು ಜನರನ್ನು ತಲುಪಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ. ಈ ಸಿನಿಮಾಗೆ ಉತ್ತಮ ಬುಕಿಂಗ್ ಆಗುತ್ತಿರುವುದು ಬರಗಾದಲ್ಲಿ ಮಳೆ ಬಂದಂತೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!