AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಹೀರೋಯಿನ್​​​ಗಳ ಜೊತೆ ‘ಪ್ರೇಮದ ಊರಲಿ’ ಶ್ರೀರಾಮ್ ಪಯಣ

ನಟ ಶ್ರೀರಾಮ್ ನಾಯಕನಾಗಿ ನಟಿಸಿರುವ 'ಪ್ರೇಮದ ಊರಲಿ' ಚಿತ್ರದ ಟೀಸರ್ ಬಿಡುಗಡೆಯಾಗಿ ಎಲ್ಲೆಡೆ ಮೆಚ್ಚುಗೆ ಗಳಿಸಿದೆ. ಮನೋಜ್ ಕುಮಾರ್ ನಿರ್ದೇಶನದ ಈ ಚಿತ್ರ ಹಳ್ಳಿ ಜೀವನದ ಸೊಗಸು ಹಾಗೂ ಸುಂದರ ಪ್ರೇಮಕಥೆಯನ್ನು ಅನಾವರಣಗೊಳಿಸುತ್ತದೆ. ರಂಗಾಯಣ ರಘು ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತಪಸ್ವಿನಿ ಪೂಣಚ್ಚ ಮತ್ತು ರಮಿಕಾ ಶಿವು ನಾಯಕಿಯರಾಗಿದ್ದಾರೆ. ಉತ್ತಮ ಸಂದರ್ಭ ನೋಡಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಇಬ್ಬರು ಹೀರೋಯಿನ್​​​ಗಳ ಜೊತೆ ‘ಪ್ರೇಮದ ಊರಲಿ’ ಶ್ರೀರಾಮ್ ಪಯಣ
ಪ್ರೇಮದ ಊರಲಿ
ರಾಜೇಶ್ ದುಗ್ಗುಮನೆ
|

Updated on:Mar 03, 2026 | 1:05 PM

Share

ನಟ ಶ್ರೀರಾಮ್ ಅವರು ಕಿರುತೆರೆ ಮೂಲಕ ಗುರುತಿಸಿಕೊಂಡವರು. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಗಮನ ಸೆಳೆದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ‘ಪ್ರೇಮದ ಊರಲಿ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಚಿತ್ರದ ಟೀಸರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಟೀಸರ್ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಒಂದು ಸುಂದರ ಪ್ರೇಮಕಥೆ ಜೊತೆಗೆ ಹಳ್ಳಿ ಜೀವನವನ್ನು ಸುಂದರವಾಗಿ ಕಟ್ಟಿಕೊಡುವ ಪ್ರಯತ್ನ ನಡೆದಿದೆ.

ಈ ಮೊದಲು ‘ಅಕ್ಷಿ’ ಹೆಸರಿನ ಮಾಡಿ ನ್ಯಾಷನಲ್ ಅವಾರ್ಡ್ ಗೆದ್ದ ಮನೋಜ್ ಕುಮಾರ್ ಅವರು, ‘ಪ್ರೇಮದ ಊರಲಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಶ್ರೀರಾಮ್ ಹೀರೋ ಆದರೆ, ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ನಾಯಕಿ ಆಗಿದ್ದಾರೆ. ಈ ಚಿತ್ರದಲ್ಲಿ ಶ್ರೀರಾಮ್ ತಂದೆ ಪಾತ್ರದಲ್ಲಿ ರಂಗಾಯಣ ರಘು ನಟಿಸಿದ್ದಾರೆ. ಸಿನಿಮಾದ ಟೀಸರ್ ಅಲ್ಲಿ ಹಳ್ಳಿ ಜೀವನ, ಹಳ್ಳಿಯಲ್ಲಿ ಸಂಬಂಧಗಳಿಗೆ ಕೊಡೋ ಪ್ರಾಮುಖ್ಯತೆ ಬಗ್ಗೆ ಹೇಳಲಾಗಿದೆ. ಒಂದು ಸೊಗಸಾದ ಪ್ರೇಮ ಕಥೆಯನ್ನು ಕೂಡ ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು 

ಈ ಚಿತ್ರದ ಬಹುತೇಕ ಶೂಟ್ ನಡೆದಿದ್ದು ಹಾಸನದ ಭಾಗದಲ್ಲಂತೆ. ಅಲ್ಲಿನ ಮಳೆಗಾಲದ ಸುಂದರ ಪರಿಸವರನ್ನು ಸೆರೆಹಿಡಿಯಲಾಗಿದೆ. ರಂಗಾಯಣ ರಘು ಅವರಿಗೆ ಹಳ್ಳಿ ಜೀವನ ಎಂದರೆ ಸಖತ್ ಇಷ್ಟ. ಈ ಸಿನಿಮಾ ಸಿಕ್ಕಾಗ ಅವರು ಖುಷಿಯಿಂದ ಒಪ್ಪಿಕೊಂಡರು. ಇನ್ನು, ಶ್ರೀರಾಮ್ ಅವರು, ಈ ಚಿತ್ರಕ್ಕಾಗಿ ಒಂದು ತಿಂಗಳು ಆಳಾಗಿ ಕೆಲಸ ಮಾಡಿದರು. ಹೀಗೆ ಕೆಲಸ ಕಲಿತರು. ‘ಪ್ರೇಮದ ಊರಲಿ’ ಚಿತ್ರವನ್ನು ಮಮತಾ ದೇವೇಂದ್ರ, ಪ್ರಶಾಂತ್ ಹಾಗೂ ರಮೇಶ್ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ರಿಲೀಸ್​​​ಗಾಗಿ ಪ್ಲ್ಯಾನಿಂಗ್ ನಡೆಯುತ್ತಿದೆ. ಒಳ್ಳೆಯ ಸಂದರ್ಭದ ನೋಡಿ ಚಿತ್ರವನ್ನು ತೆರೆಗೆ ತರುವ ಆಲೋಚನೆ ನಿರ್ಮಾಪಕರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:04 pm, Tue, 3 March 26

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ