AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 28ಕ್ಕೆ ಬಿಡುಗಡೆ ಆಗಲಿದೆ ಸೃಜನ್ ನಿರ್ದೇಶನದ ಮೊದಲ ಸಿನಿಮಾ ‘ಜಿಎಸ್​ಟಿ’

ಸೃಜನ್ ಲೋಕೇಶ್ ಅವರು ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ‘ಜಿಎಸ್​ಟಿ’ ಬಿಡುಗಡೆಗೆ ಸಜ್ಜಾಗಿದೆ. ಉಪೇಂದ್ರ ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಚಿತ್ರತಂಡ ಸುದ್ದಿಗೋಷ್ಠಿ ಮಾಡಿದೆ. ಇದು ಹಾರರ್ ಸಿನಿಮಾ ಆದರೂ ಕೂಡ ನಗು ಇರಲಿದೆ ಎಂದು ಸೃಜನ್ ಲೋಕೇಶ್ ಅವರು ಹೇಳಿದ್ದಾರೆ.

ನವೆಂಬರ್ 28ಕ್ಕೆ ಬಿಡುಗಡೆ ಆಗಲಿದೆ ಸೃಜನ್ ನಿರ್ದೇಶನದ ಮೊದಲ ಸಿನಿಮಾ ‘ಜಿಎಸ್​ಟಿ’
Gst Movie Trailer Launch
ಮದನ್​ ಕುಮಾರ್​
|

Updated on: Nov 12, 2025 | 3:57 PM

Share

ನಟ, ನಿರೂಪಕ ಸೃಜನ್ ಲೋಕೇಶ್ (Srujan Lokesh) ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಆ ಸಿನಿಮಾಗೆ ‘ಜಿಎಸ್​ಟಿ’ (GST) ಎಂದು ಶೀರ್ಷಿಕೆ ಇಡಲಾಗಿದೆ. ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ‘ಸಂದೇಶ್ ಪ್ರೊಡಕ್ಷನ್ಸ್’ ಮೂಲಕ ಸಂದೇಶ್ ಎನ್. ಅವರು ನಿರ್ಮಾಣ ಮಾಡಿದ್ದಾರೆ. ಸಂದೇಶ್ ನಾಗರಾಜ್ ಅವರು ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ನವೆಂಬರ್ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ಆಗಿದೆ. ‘ರಿಯಲ್ ಸ್ಟಾರ್’ ಉಪೇಂದ್ರ ಅವರು ಟ್ರೇಲರ್ ರಿಲೀಸ್ ಮಾಡಿದರು. ಪ್ರಿಯಾಂಕಾ ಉಪೇಂದ್ರ ಅವರು ಹಾಡಿನ ಪ್ರೋಮೋ ರಿಲೀಸ್ ಮಾಡಿ ಶುಭ ಹಾರೈಸಿದರು.

ಈ ಕಾರ್ಯಕ್ರಮಕ್ಕೆ ನಟಿ ತಾರಾ ಅನುರಾಧ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಸೃಜನ್ ಲೋಕೇಶ್ ಮಾತನಾಡಿದರು. ‘ಇದು ನಾನು ಕಂಡ ಕನಸು. ಅದನ್ನು ನನಸು ಮಾಡಿದವರು ನಿರ್ಮಾಪಕ ಸಂದೇಶ್. ನಾನು ಈ ಸಿನಿಮಾ ಮೂಲಕ ನಿರ್ದೇಶಕನಾಗಿದ್ದೇನೆ. ನಮ್ಮ ತಾತಾ ಸುಬ್ಬಯ್ಯ ನಾಯ್ಡು ಅವರು ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ನಮ್ಮ ತಂದೆ ಲೋಕೇಶ್ ಅವರನ್ನು ಬಾಲನಟನಾಗಿ ತೆರೆಗೆ ತಂದರು. ಬಳಿಕ ನಮ್ಮ ತಂದೆ ನಿರ್ದೇಶನದ ‘ಬುಜಂಗಯ್ಯನ ದಶಾವತಾರ’ ಚಿತ್ರದ ಮೂಲಕ ಬಾಲನಟನಾಗಿ ನಾನು ಚಿತ್ರರಂಗಕ್ಕೆ ಬಂದೆ. ಈಗ ನನ್ನ ಮಗ ಸುಕೃತ್ ನನ್ನ ಮೊದಲ ನಿರ್ದೇಶನದಲ್ಲಿ ಬೆಳ್ಳಿತೆರೆ ಪ್ರವೇಶಿಸಿದ್ದಾನೆ’ ಎಂದು ಸೃಜನ್ ಹೇಳಿದರು.

‘ಈ ಸಿನಿಮಾದಲ್ಲಿ ನಮ್ಮ ತಾಯಿ, ನಾನು ಹಾಗೂ ನನ್ನ ಮಗ ನಟಿಸಿದ್ದೇವೆ. ಇದು ಹಾರಾರ್ ಸಿನಿಮಾ ಆದರೂ ನಗುವೇ ಪ್ರಧಾನ. ಯಾವುದೇ ಸಂದೇಶ ನೀಡದೇ ನಗುವಿನ ಮೂಲಕ ಜನರ ಮನಸ್ಸನ್ನು ಗೆಲ್ಲಲ್ಲಿದ್ದೇನೆ. ಲೋಕೇಶ್ ಮ್ಯೂಸಿಕ್ ಎಂಬ ಮ್ಯೂಸಿಕ್ ಸಂಸ್ಥೆ ಸಹ ಆರಂಭಿಸಿದ್ದೇನೆ. ಅದರಲ್ಲಿ ನಮ್ಮ ಸಿನಿಮಾದ ಹಾಡುಗಳು ಬಿಡುಗಡೆ ಆಗಲಿದೆ. ಯಾರು ಊಹಿಸಲಾಗದ 4O ನಿಮಿಷಗಳ ಕ್ಲೈಮ್ಯಾಕ್ಸ್ ಇದೆ’ ಎಂದಿದ್ದಾರೆ ಸೃಜನ್ ಲೋಕೇಶ್.

ನಿರ್ಮಾಪಕ ಸಂದೇಶ್ ಅವರು ಮಾತನಾಡಿ, ‘ನಾನು ಈ ಸಿನಿಮಾದ ಕಥೆ ಕೇಳಿಲ್ಲ. ಸೃಜನ್ ನನ್ನ ಆತ್ಮೀಯ ಸ್ನೇಹಿತ. ಅವರು ಒಳ್ಳೆಯ ಸಿನಿಮಾ ಮಾಡಿರುತ್ತಾರೆ ಎಂಬ ನಂಬಿಕೆ ಇದೆ. ಇದು ನಮ್ಮ ಸಂಸ್ಥೆಯಿಂದ ನಿರ್ಮಾಣ ಆದ 34ನೇ ಸಿನಿಮಾ. ಎಂದಿನಂತೆ ಈ ಸಿನಿಮಾಗೂ ನಿಮ್ಮೆಲ್ಲರ ಬೆಂಬಲವಿರಲಿ’ ಎಂದು ಹೇಳಿದರು. ಚಿತ್ರೀಕರಣದ ಅನುಭವಗಳ ಬಗ್ಗೆ ಮಾತನಾಡಿದ ನಾಯಕಿ ರಜನಿ ಭಾರದ್ವಾಜ್ ಅವರು ತಮ್ಮ ಪಾತ್ರದ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಪ್ರಾಮಾಣಿಕ ಮಾತು

ಗಿರಿಜಾ ಲೋಕೇಶ್ ಅವರು ಮಾತನಾಡಿ, ‘ಕನ್ನಡ ಚಿತ್ರರಂಗದ ಹಲವು ಪ್ರಥಮಗಳು ಸುಬ್ಬಯ್ಯ ನಾಯ್ಡು ಅವರ ಕುಟುಂಬದ್ದೇ ಆಗಿರುವುದು ನಮಗೆ ಹೆಮ್ಮೆ ಇದೆ‌‌. ನಮ್ಮ ಕುಟುಂಬಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹ ಈ ಸಿನಿಮಾದಲ್ಲೂ ಮುಂದುವರಿಯಲಿ’ ಎಂದರು. ಹಿರಿಯ ನಟ ಅಶೋಕ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ