‘ಜಿಎಸ್ಟಿ’ ಜೊತೆ ಬರ್ತಿದ್ದಾರೆ ಸೃಜನ್ ಲೋಕೇಶ್, ಇದು ತೆರಿಗೆಯಲ್ಲ
Srujan Lokesh: ನಟ ಸೃಜನ್ ಲೋಕೇಶ್ ಕಳೆದ ಎರಡು ದಶಕಗಳಿಂದಲೂ ನಟನಾಗಿ ಗುರುತಿಸಿಕೊಂಡಿದ್ದಾರೆ. ಈಗ ‘ಜಿಎಸ್ಟಿ’ ಸಿನಿಮಾ ಮೂಲಕ ನಿರ್ದೇಶಕರೂ ಅಗಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಸಂದೇಶ್ ನಾಗರಾಜ್ (Sandesh Nagaraj) ಇದೀಗ ಹೊಸದೊಂದು ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ನಟನಾಗಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ಕೆಲಸ ಮಾಡಿರುವ ಸೃಜನ್ ಲೋಕೇಶ್ (Srujan Lokesh) ನಿರ್ದೇಶಕನಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದು ನಿರ್ದೇಶನದ ಜೊತೆಗೆ ನಾಯಕನಾಗಿಯೂ ನಟಿಸಿರುವ ‘GST’ ಸಿನಿಮಾ ಚಿತ್ರೀಕರಣ ಮುಗಿಸಿದೆ. ಸಿನಿಮಾದ ಮಾತಿನ ಭಾಗವನ್ನು ಪೂರ್ಣಗೊಳಿಸಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಾಣ ಮಾಡಲಾಗಿರುವ ಅದ್ದೂರಿ ಸೆಟ್ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ.
‘GST’ ಚಿತ್ರದ ವಿಶೇಷವೆಂದರೆ ನಿರ್ಮಾಪಕ ಸಂದೇಶ್ ಅವರು ಸಹ ಈ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದನ್ನು ನಿರ್ದೇಶಕ ಸೃಜನ್ ಗುಟ್ಟು ಬಿಟ್ಟುಕೊಟ್ಟಿಲ್ಲ. ಇನ್ನು ಈ ಸಿನಿಮಾದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪರಿಶುದ್ಧ ಮನೋರಂಜನೆಯ ಕಥಾಹಂದರ ಹೊಂದಿರುವ ‘GST’ಗೆ, ‘ಘೋಸ್ಟ್ ಇನ್ ಟ್ರಬಲ್’ ಎಂಬ ಅಡಿಬರಹವಿದೆ.
ಇದನ್ನೂ ಓದಿ:ಕನ್ನಡ ಸಿನಿಮಾದಲ್ಲಿ ನಟಿಸ್ತಾರಾ ಆಮಿರ್ ಖಾನ್? ನೀಡಿದ ಉತ್ತರವೇನು?
ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.
ಸೃಜನ್ ಲೋಕೇಶ್ 2002 ರಲ್ಲಿ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಎರಡು ದಶಕಗಳಲ್ಲಿ ಹಲವಾರು ಸಿನಿಮಾಗಳಲ್ಲಿ ಸೃಜನ್ ಲೋಕೇಶ್ ನಟಿಸಿದ್ದಾರೆ. ಸಿನಿಮಾಗಳಿಗಿಂತಲೂ ಕಿರುತೆರೆಯಲ್ಲಿ ಸೃಜನ್ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. 2022ರಲ್ಲಿ ಬಿಡುಗಡೆ ಆಗಿದ್ದ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಅವರ ನಟನೆಯ ಕೊನೆಯ ಸಿನಿಮಾ. ಈಗ ‘ಜಿಎಸ್ಟಿ’ ಸಿನಿಮಾನಲ್ಲಿ ನಾಯಕನಾಗಿ ನಟಿಸಿರುವ ಜೊತೆಗೆ ನಿರ್ದೇಶನವನ್ನೂ ಸಹ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:40 pm, Fri, 16 February 24