ಮೊದಲ ನಿರ್ದೇಶನದ ಚಿತ್ರದಲ್ಲೇ ತಾಯಿ-ಮಗನಿಗೆ ಆ್ಯಕ್ಷನ್ಕಟ್ ಹೇಳಿದ ಸೃಜನ್ ಲೋಕೇಶ್
ಸೃಜನ್ ಲೋಕೇಶ್ ಅವರು ಈಗ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಅವರು ‘ಜಿಎಸ್ಟಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ನೋಡಬಹುದು.
ಸೃಜನ್ ಲೋಕೇಶ್ ಅವರು ನಟನಾಗಿ, ನಿರೂಪಕನಾಗಿ ಗಮನ ಸೆಳೆದವರು. ಅವರು ಈಗ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ‘ಜಿಎಸ್ಟಿ’ ಹೆಸರಿನ ಚಿತ್ರವನ್ನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಸೃಜನ್ ಲೋಕೇಶ್ ಅವರು ಹೀರೋ ಆಗಿ ನಟಿಸಿದ್ದಾರೆ ಕೂಡ. ಈ ಸಿನಿಮಾದ ಬಗ್ಗೆ ತಂಡ ಅಪ್ಡೇಟ್ ಕೊಟ್ಟಿದೆ. ಸಿನಿಮಾದ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿವೆ.
ಕಬಿನಿ ಬಳಿ ಸಂದೇಶ್ ನಾಗರಾಜ್ ಅವರ ರೆಸಾರ್ಟ್ ಇದೆ. ಇಲ್ಲಿ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ನಡೆದಿದೆ. ಅದೇ ರೀತಿ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಇರುವ ಹಾಡನ್ನು ಶೂಟ್ ಮಾಡಲಾಗಿದೆ. ಈ ಮೂಲಕ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.
ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಸಾಹಿತ್ಯ ಬರೆದಿದ್ದಾರೆ. ಮುರುಗಾನಂದ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ಹಾರಾರ್ ಕಾಮಿಡಿ ಜಾನರ್ನಲ್ಲಿ ಸಿನಿಮಾ ಮೂಡಿಬಂದಿದೆ. ಸದ್ಯ ಸಿನಿಮಾಗೆ ಸಿಜಿ ಕಾರ್ಯ ನಡೆಯುತ್ತಿದೆ. ಶೀಘ್ರವೇ ಸಿನಿಮಾ ತೆರೆಮೇಲೆ ಬರಲಿದೆ.
‘ಜಿಎಸ್ಟಿ’ ಚಿತ್ರದಲ್ಲಿ ಸಂದೇಶ್ ನಾಗರಾಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಬಗ್ಗೆ ಸೃಜನ್ ಲೋಕೇಶ್ ಹೆಚ್ಚಿನ ಮಾಹಿತಿ ರಿವೀಲ್ ಮಾಡಿಲ್ಲ. ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ನಟಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು ಅನ್ನೋದು ವಿಶೇಷ.
ಇದನ್ನೂ ಓದಿ: ಆ್ಯಂಕರ್ಗೆ ದುಡ್ಡು ಕೊಡಲ್ಲ ಸೃಜನ್ ಲೋಕೇಶ್; ತಾರಾ ಹೊಸ ಆರೋಪ
ಸೃಜನ್ ಲೋಕೇಶ್ ಅವರಿಗೆ ಜೊತೆಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶರತ್ ಲೋಹಿತಾಶ್ವ, ಶೋಭ್ ರಾಜ್, ಅರವಿಂದ್ ರಾವ್, ನಿವೇದಿತಾ, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇದೆ. ರಾಜಶೇಖರ್ ಸಂಭಾಷಣೆ ಬರೆದಿದ್ದು, ತೇಜಸ್ವಿ ಕೆ. ನಾಗ್ ಈ ಚಿತ್ರಕ್ಕೆ ಸಹ ನಿರ್ದೇಶನ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:45 am, Tue, 13 August 24