AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sruthi Hariharan: ಇದು ಶ್ರುತಿ ಹರಿಹರನ್ ಮೀಟೂ ಕೇಸ್​ ನಡೆದು ಬಂದ ಹಾದಿ; ಇಲ್ಲಿದೆ ಸಂಪೂರ್ಣ ಟೈಮ್​ಲೈನ್​

ಶ್ರುತಿ ಹರಿಹರನ್ ಮೀಟೂ ಕೇಸ್​ನಲ್ಲಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಈ ಪ್ರಕರಣ ನಡೆದು ಬಂದ ಹಾದಿ ಬಗ್ಗೆ ಇಲ್ಲಿದೆ ವಿವರ.

Sruthi Hariharan: ಇದು ಶ್ರುತಿ ಹರಿಹರನ್ ಮೀಟೂ ಕೇಸ್​ ನಡೆದು ಬಂದ ಹಾದಿ; ಇಲ್ಲಿದೆ ಸಂಪೂರ್ಣ ಟೈಮ್​ಲೈನ್​
ಅರ್ಜುನ್ ಸರ್ಜಾ-ಶ್ರತಿ ಹರಿಹರನ್
ರಾಜೇಶ್ ದುಗ್ಗುಮನೆ
|

Updated on: Jun 09, 2023 | 11:22 AM

Share

ಶ್ರುತಿ ಹರಿಹರನ್ ಅವರು ಅರ್ಜುನ್ ಸರ್ಜಾ (Arjun Sarja) ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಿದ್ದರು. ಅವರಿಂದ ಲೈಂಗಿಕ ಕಿರುಕುಳ ಆಗಿದೆ ಎಂದು ಅವರು ಆರೋಪಿಸಿದ್ದರು. ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಶ್ರುತಿ ಹರಿಹರನ್ (Sruthi Hariharan) ಆರೋಪವನ್ನು ಕೆಲವರು ಟೀಕಿಸಿದರೆ ಇನ್ನೂ ಕೆಲವರು ನಟಿಯನ್ನು ಬೆಂಬಲಿಸಿದ್ದರು. ಮೂರು ವರ್ಷ ತನಿಖೆ ನಡೆಸಿದ್ದರೂ ಪೊಲೀಸರಿಗೆ ಸಾಕ್ಷ್ಯ ಸಿಕ್ಕಿರಲಿಲ್ಲ. ಹೀಗಾಗಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಈ ಪ್ರಕರಣ ನಡೆದು ಬಂದ ಹಾದಿ ಬಗ್ಗೆ ಇಲ್ಲಿದೆ ವಿವರ.

‘ವಿಸ್ಮಯ’ ಚಿತ್ರದಲ್ಲಿ ನಟಿಸಿದ್ದ ಅರ್ಜುನ್-ಶ್ರುತಿ

ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ‘ವಿಸ್ಮಯ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಅರುಣ್​ ವೈದ್ಯನಾಥನ್​ ಈ ಸಿನಿಮಾಗೆ ನಿರ್ದೇಶನ ಮಾಡಿದ್ದರು. ಶ್ರುತಿ ಹರಿಹರನ್​ ಮತ್ತು ಅರ್ಜುನ್​ ಸರ್ಜಾ ಅವರು ಗಂಡ-ಹೆಂಡತಿ ಪಾತ್ರ ಮಾಡಿದ್ದರು. ಈ ಚಿತ್ರದ ಶೂಟಿಂಗ್ 2015-16ರಲ್ಲಿ ನಡೆದಿತ್ತು. 2017ರಲ್ಲಿ ಸಿನಿಮಾ ರಿಲೀಸ್ ಆಗಿತ್ತು.

2018ರಲ್ಲಿ ಆರೋಪ ಮಾಡಿದ ನಟಿ

2018ರಲ್ಲಿ ಮೀ ಟೂ ಆಂದೋಲನ ಆರಂಭ ಆಗಿತ್ತು. ಅನೇಕ ನಟಿಯರು ತಮಗಾದ ಕಹಿ ಅನುಭವ ಬಗ್ಗೆ ಹೇಳಿಕೊಂಡಿದ್ದರು. ಮಾಧ್ಯಮದ ಜೊತೆ ಮಾತನಾಡುತ್ತಾ ಶ್ರುತಿ ಹರಿಹರನ್ ಕೂಡ ತಮಗೂ ಲೈಂಗಿಕ ಕಿರುಕುಳ ಆಗಿತ್ತು ಎಂದಿದ್ದರು. ‘ವಿಸ್ಮಯ’ ಚಿತ್ರೀಕರಣದ ವೇಳೆ ಅರ್ಜುನ್​ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ಮಾಡಿದ್ದರು ಎಂದು ಶ್ರುತಿ ಹರಿಹರನ್​ ಆರೋಪ ಹೊರಿಸಿದರು. ಇದಾದ ಬಳಿಕ ಇಡೀ ಸ್ಯಾಂಡಲ್​ವುಡ್​ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು.

ನಡೆದಿತ್ತು ಸಂಧಾನ ಪ್ರಯತ್ನ

ಶ್ರುತಿ ಹಾಗೂ ಅರ್ಜುನ್ ಮಧ್ಯೆ ಸಂಧಾನ ಪ್ರಯತ್ನ ಕೂಡ ಆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಬಗ್ಗೆ ಸಭೆ ನಡೆಸಲಾಗಿತ್ತು. ಅಂಬರೀಷ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜಿ ಸಂಧಾನಕ್ಕೆ ಅರ್ಜುನ್​ ಸರ್ಜಾ ಮತ್ತು ಶ್ರುತಿ ಹರಿಹರನ್​ ಒಪ್ಪಿರಲಿಲ್ಲ.

ಮೂರು ವರ್ಷ ನಡೆದಿತ್ತು ತನಿಖೆ

ಶ್ರುತಿ ನೀಡಿದ ದೂರನ್ನು ಆಧರಿಸಿ ಬೆಂಗಳೂರಿನ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲು ಆಗಿತ್ತು. ಮೂರು ವರ್ಷ ತನಿಖೆಯೂ ನಡೆಯಿತು. ಆದರೆ, ಸಾಕ್ಷ್ಯ ಸಿಗದ ಕಾರಣ ಕಾರಣ 2021 ಡಿಸೆಂಬರ್​ನಲ್ಲಿ ಕೋರ್ಟ್​​ಗೆ ಪೊಲೀಸರು ಬಿ ರಿಪೋರ್ಟ್​ ಸಲ್ಲಿಕೆ ಮಾಡಿದ್ದರು.

ಏನಿದು ಬಿ ರಿಪೋರ್ಟ್

ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌.

ಇದನ್ನೂ ಓದಿ: Sruthi Hariharan: ಮತ್ತೆ ಮುನ್ನೆಲೆಗೆ ಬಂದ ಮೀಟೂ ಕೇಸ್​; ಬಿ ರಿಪೋರ್ಟ್​ ಚಾಲೆಂಜ್ ಮಾಡಿದ ಶ್ರುತಿ ಹರಿರಹರನ್​ಗೆ ನೋಟಿಸ್

ಚಾಲೆಂಜ್ ಮಾಡಿದ ಶ್ರುತಿ ಹರಿಹರನ್

ಪೊಲೀಸರ ಬಿ ರಿಪೋರ್ಟ್​​ನ ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದಾರೆ. ಅವರಿಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್​ನಿಂದ ನೋಟಿಸ್​ ಜಾರಿ ಆಗಿದೆ. ಸಾಕ್ಷ್ಯ ಒದಗಿಸುವಂತೆ ಶ್ರುತಿಗೆ ಸೂಚಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!