ಕೊವಿಡ್​ ಸೋಂಕಿತ ಸ್ನೇಹಿತರಿಗೆ ಬೆಡ್​ ಸಿಗದೇ 13 ಗಂಟೆ ಅಲೆದಾಡಿದ ನಟಿ ಶ್ರುತಿ ಹರಿಹರನ್​

ಬೆಡ್​ ಕೊಡಿಸಲು ಶ್ರುತಿ ಹರಿಹರನ್​ ಅವರು ಕಷ್ಟಪಟ್ಟಿದ್ದಾರೆ. ಸತತ 13 ಗಂಟೆಗಳ ಕಾಲ ಅವರು ಹರಸಾಹಸ ಪಟ್ಟಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಕೊವಿಡ್​ ಸೋಂಕಿತ ಸ್ನೇಹಿತರಿಗೆ ಬೆಡ್​ ಸಿಗದೇ 13 ಗಂಟೆ ಅಲೆದಾಡಿದ ನಟಿ ಶ್ರುತಿ ಹರಿಹರನ್​
ಶ್ರುತಿ ಹರಿಹರನ್
Follow us
|

Updated on: May 01, 2021 | 2:21 PM

ಸದ್ಯಕ್ಕಂತೂ ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿ ಕಡಿಮೆ ಆಗುವಂತೆ ಕಾಣುತ್ತಿಲ್ಲ. ಎಷ್ಟೇ ಹಣ, ಪ್ರಭಾವ ಬಳಸಿದರೂ ಜನರನ್ನು ಉಳಿಸಿಕೊಳ್ಳಲು ಆಗದಂತಹ ವಾತಾವರಣ ನಿರ್ಮಾಣ ಆಗಿದೆ. ಈ ಸಂದರ್ಭದಲ್ಲಿ ತಮ್ಮವರನ್ನು ಉಳಿಸಿಕೊಳ್ಳಲು ಸೆಲೆಬ್ರಿಟಿಗಳು ಕೂಡ ಕಷ್ಟಪಡುತ್ತಿದ್ದಾರೆ. ಇತ್ತೀಚೆಗೆ ನಟಿ ಶ್ರುತಿ ಹರಿಹರನ್​ ಅವರು ಸ್ನೇಹಿತರೊಬ್ಬರಿಗೆ ಚಿಕಿತ್ಸೆ ಕೊಡಿಸಲು ಪರದಾಡಿದ್ದಾರೆ.

ಕೊವಿಡ್​ ಸೋಂಕಿತ ಸ್ನೇಹಿತರಿಗಾಗಿ ಬೆಡ್​ ಕೊಡಿಸಲು ಶ್ರುತಿ ಹರಿಹರನ್​ ಅವರು ಕಷ್ಟಪಟ್ಟಿದ್ದಾರೆ. ಸತತ 13 ಗಂಟೆಗಳ ಕಾಲ ಅವರು ಹರಸಾಹಸ ಪಟ್ಟಿದ್ದಾರೆ. ಈ ಎಲ್ಲ ವಿಷಯಗಳ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಒಬ್ಬ ರೋಗಿಗೆ ಬೆಡ್​ ಸಿಗಬೇಕಿದ್ದರೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಶ್ರುತಿ ಹರಿಹರನ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹೇಳಿಕೊಂಡಿರುವ ಪ್ರಕಾರ, ಯಾರಿಗಾಗಿ ಅವರು ಬೆಡ್​ ವ್ಯವಸ್ಥೆ ಮಾಡಲು ಕಷ್ಟಪಡುತ್ತಿದ್ದರೋ ಆ ವ್ಯಕ್ತಿ ನಿಧನರಾಗಿದ್ದಾರೆ. ಸೂಕ್ತ ಸಮಯಕ್ಕೆ ಐಸಿಯು ಸಿಗದ ಕಾರಣ ಅವರು ಅಸುನೀಗಿದರು ಎಂಬ ಬೇಸರದ ವಿಷಯವನ್ನು ಶ್ರುತಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಅಸಹಾಯಕ ಸ್ಥಿತಿಯಲ್ಲಿ ಇದ್ದಾರೆ ಎಂಬುದಕ್ಕೆ ಇದು ಉದಾಹರಣೆ ಆಗಿದೆ. ಇತ್ತೀಚೆಗಷ್ಟೇ ತಮ್ಮ ಸಹೋದರ ಕೋಮಲ್​ ಕುಮಾರ್​ ಅವರಿಗೆ ಚಿಕಿತ್ಸೆ ಕೊಡಿಸಲು ತೀವ್ರ ಕಷ್ಟ ಅನುಭವಿಸಬೇಕಾಯಿತು ಎಂದು ನಟ ಜಗ್ಗೇಶ್​ ಹೇಳಿಕೊಂಡಿದ್ದರು.

ಕೆಲವೇ ದಿನಗಳಿಂದ ಚಿತ್ರರಂಗದ ಅನೇಕರು ಕೊರೊನಾ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ಏ.26ರಂದು ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ಕೋಟಿ ರಾಮು ಅವರು ನಿಧನರಾದರು. ಯುವ ನಟ-ನಿರ್ಮಾಪಕ ಡಿ.ಎಸ್​. ಮಂಜುನಾಥ್, ಪೆಟ್ರೋಮ್ಯಾಕ್ಸ್​ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​ ಅವರು ಕೂಡ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹೀಗೆ ಕೊರೊನಾ ಮಹಾಮಾರಿಯ ಮರಣ ಮೃದಂಗ ಮುಂದುವರಿಸಿದೆ. ಆದಷ್ಟು ಸುರಕ್ಷಿತವಾಗಿರಿ ಎಂದು ಅನೇಕ ಸೆಲೆಬ್ರಿಟಿಗಳು ಜನರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ತಲೆ ಬಾಗಿ ಕ್ಷಮೆ ಕೋರುವೆ; ರಾಮು ನಿಧನದ ಬಗ್ಗೆ ಮಾಲಾಶ್ರೀಗೆ ಜಗ್ಗೇಶ್​ ಹೀಗೆ ಹೇಳಿದ್ದೇಕೆ?

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್