ಲೈಂಗಿಕ ಕಾರ್ಯಕರ್ತೆ ಪಾತ್ರದಲ್ಲಿ ಶ್ರುತಿ ಹರಿಹರನ್​; ಸ್ಟ್ರಾಬೆರಿ ಸಿನಿಮಾಗೆ ರಕ್ಷಿತ್​ ಶೆಟ್ಟಿ ನಿರ್ಮಾಣ

‘ಸ್ಟ್ರಾಬೆರಿ’ ಚಿತ್ರಕ್ಕೆ ಸದ್ದಿಲ್ಲದೇ ಚಿತ್ರೀಕರಣ ಮಾಡಲಾಗಿದೆ. ಈಗಾಗಲೇ ಶೂಟಿಂಗ್​ ಮುಕ್ತಾಯವಾಗಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೊನೇ ಹಂತದಲ್ಲಿವೆ.

ಲೈಂಗಿಕ ಕಾರ್ಯಕರ್ತೆ ಪಾತ್ರದಲ್ಲಿ ಶ್ರುತಿ ಹರಿಹರನ್​; ಸ್ಟ್ರಾಬೆರಿ ಸಿನಿಮಾಗೆ ರಕ್ಷಿತ್​ ಶೆಟ್ಟಿ ನಿರ್ಮಾಣ
ಶ್ರುತಿ ಹರಿಹರನ್, ರಕ್ಷಿತ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Feb 03, 2022 | 4:35 PM

ಖ್ಯಾತ ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ಚಿತ್ರರಂಗದ ಹಲವು ವಿಭಾಗಗಳಲ್ಲಿ ತೊಡಗಿಕೊಂಡಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಅವರು ನಿರ್ಮಾಣದಲ್ಲಿಯೂ ಸಕ್ರಿಯರಾಗಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡುತ್ತ ಬಂದಿದ್ದಾರೆ. ಅವರ ಸಿನಿಮಾಗಳಲ್ಲಿ ಚಾನ್ಸ್​ ಪಡೆದ ಹೊಸಬರು ಇಂದು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿಕೊಂಡ ಉದಾಹರಣೆ ಸಾಕಷ್ಟಿದೆ. ಇನ್ನೂ ಅನೇಕರಿಗೆ ರಕ್ಷಿತ್​ ಶೆಟ್ಟಿ ಅವಕಾಶ ನೀಡುತ್ತಿದ್ದಾರೆ. ಅದಕ್ಕಾಗಿಯೇ ಅವರು ‘ಪರಮ್​ವಾ ಸ್ಪಾಟ್​ಲೈಟ್​ ಪ್ರೊಡಕ್ಷನ್​’ ಸಂಸ್ಥೆ ಆರಂಭಿಸಿದ್ದಾರೆ. ಹೊಸ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಈ ಸಂಸ್ಥೆಯ ಮೂಲಕ ರಕ್ಷಿತ್​ ಶೆಟ್ಟಿ ಅವಕಾಶ ನೀಡುತ್ತಿದ್ದಾರೆ. ‘ಪರಮ್​ವಾ ಸ್ಪಾಟ್​ಲೈಟ್​ ಪ್ರೊಡಕ್ಷನ್​’ ಸಂಸ್ಥೆಯ ಮೊದಲ ಚಿತ್ರ ‘ಸ್ಟ್ರಾಬೆರಿ’ (Strawberry Movie) ಬಗ್ಗೆ ಈಗ ಮಾಹಿತಿ ಬಿಟ್ಟುಕೊಡಲಾಗಿದೆ. ಈ ಚಿತ್ರಕ್ಕೆ ಅರ್ಜುನ್​ ಲೂವಿಸ್​ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವ ಅವರು ಈಗ ಇದೇ ಮೊದಲ ಬಾರಿಗೆ ‘ಸ್ಟ್ರಾಬೆರಿ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಈ ಚಿತ್ರದ ಕೆಲಸಗಳ ಪ್ರಗತಿಯಲ್ಲಿವೆ. ವಿಶೇಷ ಎಂದರೆ, ನಟಿ ಶ್ರುತಿ ಹರಿಹರನ್​ (Sruthi Hariharan) ಅವರು ಪ್ರಮುಖ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

‘ಸ್ಟ್ರಾಬೆರಿ’ ಚಿತ್ರಕ್ಕೆ ಸದ್ದಿಲ್ಲದೇ ಚಿತ್ರೀಕರಣ ಮಾಡಲಾಗಿದೆ. ಈಗಾಗಲೇ ಶೂಟಿಂಗ್​ ಮುಕ್ತಾಯವಾಗಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಕೊನೇ ಹಂತದಲ್ಲಿವೆ. ಶ್ರುತಿ ಹರಿಹರನ್​ ಅವರು ಈ ಸಿನಿಮಾದಲ್ಲಿ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿಭಾಯಿಸುತ್ತಿದ್ದಾರೆ. ಅಮೃತಾ ಎಂಬ ಆ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಅವರ ಜೊತೆಗೆ ‘ದಿಯಾ’ ಸಿನಿಮಾ ಖ್ಯಾತಿಯ ನಟ ದೀಕ್ಷಿತ್​ ಶೆಟ್ಟಿ ಕೂಡ ನಟಿಸಿದ್ದಾರೆ. ಒಂದು ಮೊಟ್ಟೆಯ ಕಥೆ, ಬೀರ್ ಬಲ್, ಗರುಡ ಗಮನ ವೃಷಭ ವಾಹನ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ವಿನೀತ್ ಕುಮಾರ್ ಅವರಿಗೂ ‘ಸ್ಟ್ರಾಬೆರಿ’ ಚಿತ್ರದಲ್ಲೊಂದು ಮುಖ್ಯ ಪಾತ್ರವಿದೆ. ಮಂಗಳೂರಿನ ರಂಗಭೂಮಿಯಲ್ಲಿ ಗುರುತಿಸಿಕೊಂಡಿರುವ ವಿಜಯ್ ಮಯ್ಯ ಜಾರ್ಜ್ ಎಂಬ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಹೊಸ ಪ್ರತಿಭೆಗಳು ಸಿನಿಮಾ ಮಾಡಿದಾಗ ಪ್ರೇಕ್ಷಕರು ಹೊಸತನ ಬಯಸುತ್ತಾರೆ. ಅದನ್ನು ನೀಡುವ ಭರವಸೆಯೊಂದಿಗೆ ಅರ್ಜುನ್​ ಲೂವಿಸ್​ ಅವರು ರಿವರ್ಸ್​ ಸ್ಕ್ರೀನ್​ ಪ್ಲೇ ಮೂಲಕ ಈ ಚಿತ್ರದ ಕಥೆಯನ್ನು ನಿರೂಪಿಸುತ್ತಿದ್ದಾರೆ. ಜೋಯೆಲ್ ಶಮನ್ ಡಿಸೋಜಾ ಛಾಯಾಗ್ರಹಣ, ಪ್ರಸಾದ್ ಕೆ. ಶೆಟ್ಟಿ ಸಂಗೀತ, ರಾಹುಲ್ ವಸಿಷ್ಠ ಸಂಕಲನದ ಜಬಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ತಾಯಿಯ ಪ್ರೀತಿಯನ್ನು ಕಳೆದುಕೊಂಡ ಅಮೃತಾ ಅನ್ನುವ ಲೈಂಗಿಕ ಕಾರ್ಯಕರ್ತೆಯೊಬ್ಬಳು ಮತ್ತೊಮ್ಮೆ ಅಂಥ ಪ್ರೀತಿಯ ಭರವಸೆ ಸಿಕ್ಕಾಗ ಕಡಲನ್ನು ಸೇರಲು ಹೊರಟ ನದಿಯಂತೆ ಹೊರಡುವ ಕಥೆಯೇ ‘ಸ್ಟ್ರಾಬೆರಿ’ ಎಂದು ಚಿತ್ರದ ಬಗ್ಗೆ ಕೌತುಕ ಮೂಡಿಸಿದೆ ಸಿನಿಮಾ ತಂಡ. ಈ ಹಿಂದೆ ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಶ್ರುತಿ ಹರಿಹರನ್​ ಮತ್ತು ರಕ್ಷಿತ್​ ಶೆಟ್ಟಿ ಅವರು ಜೊತೆಯಾಗಿ ಅಭಿನಯಿಸಿದ್ದರು. ಈಗ ಶ್ರುತಿ ಹರಿಹರನ್​ ನಟನೆಯ ಚಿತ್ರಕ್ಕೆ ರಕ್ಷಿತ್​ ಶೆಟ್ಟಿ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ:

ಶ್ರುತಿ ಹರಿಹರನ್​ ಮೀಟೂ ಕಾನೂನು ಸಮರ: ಅರ್ಜುನ್​ ಸರ್ಜಾಗೆ ಗೆಲುವು? ಸಾಕ್ಷಿ ಕೊರತೆಯಿಂದ ಬಿ ರಿಪೋರ್ಟ್​

ಮೀಟೂ ಕೇಸ್​: ಶ್ರುತಿ ಹರಿಹರನ್​ಗೆ ಹಿನ್ನಡೆ ಬಳಿಕ ಧ್ರುವ ಸರ್ಜಾ, ಮೇಘನಾ ರಾಜ್​ ಪ್ರತಿಕ್ರಿಯೆ ಏನು?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ