Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ಮತ್ತೆ ಮುಂದೂಡಲ್ಪಟ್ಟ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ; ಹೊಸ ರಿಲೀಸ್​ ದಿನಾಂಕ ಯಾವಾಗ?

‘ಆರ್​ಆರ್​ಆರ್​’ ಸಿನಿಮಾ 400 ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ. ಈಗ ಕೊವಿಡ್​ ಪ್ರಕರಣ ಹೆಚ್ಚುತ್ತಿರುವುದರಿಂದ ಸಿನಿಮಾ ರಿಲೀಸ್ ಆಗಿ ಹಿನ್ನಡೆ ಉಂಟಾಗಬಹುದು. ಹೀಗಾಗಿ, ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ ಎನ್ನಲಾಗುತ್ತಿದೆ.

RRR Movie: ಮತ್ತೆ ಮುಂದೂಡಲ್ಪಟ್ಟ ‘ಆರ್​ಆರ್​ಆರ್​’ ಸಿನಿಮಾ ಬಿಡುಗಡೆ; ಹೊಸ ರಿಲೀಸ್​ ದಿನಾಂಕ ಯಾವಾಗ?
ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 01, 2022 | 12:34 PM

ಕೊವಿಡ್​ ಪ್ರಕರಣ ಭಾರತದಲ್ಲಿ ಒಂದೇ ಸಮನೆ ಹೆಚ್ಚುತ್ತಿದೆ. ಕೊರೊನಾ ರೂಪಾಂತರಿ ಒಮಿಕ್ರಾನ್​ ಬಗ್ಗೆ ಹೆಚ್ಚು ಆತಂಕ ಶುರುವಾಗಿದೆ. ಶೀಘ್ರದಲ್ಲೇ ಕೊರೊನಾ ಮೂರನೆ ಅಲೆ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ. ಇದರ ನೇರ ಪರಿಣಾಮ ಚಿತ್ರರಂಗದ ಮೇಲಾಗಿದೆ. ಹಲವು ರಾಜ್ಯಗಳಲ್ಲಿ ನೈಟ್​ ಕರ್ಫ್ಯೂ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಹಲವು ರಾಜ್ಯಗಳ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಜಾರಿ ಆದರೂ ಅಚ್ಚರಿ ಏನಿಲ್ಲ. ಈ ಕಾರಣಕ್ಕೆ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ ಎಂಬ ಸುದ್ದಿ ಹೊರ ಬಿದ್ದಿದೆ.

ಜನವರಿ 2ರಂದು ಬೆಂಗಳೂರಿನಲ್ಲಿ ಪ್ರೀ-ರಿಲೀಸ್​ ಇವೆಂಟ್​ ನಡೆಯಬೇಕಿತ್ತು. ಅತಿಥಿಗಳಾಗಿ ಮುಖ್ಯಮಂತ್ರಿ ಬೊಸವರಾಜ ಬೊಮ್ಮಾಯಿ, ರಾಕಿಂಗ್​ ಸ್ಟಾರ್​ ಯಶ್, ಶಿವರಾಜ್​ಕುಮಾರ್​, ಉಪೇಂದ್ರ ಹಾಗೂ ಧ್ರುವ ಸರ್ಜಾ ಆಗಮಿಸಬೇಕಿತ್ತು. ನಿರ್ದೇಶಕ ಎಸ್​.ಎಸ್​. ರಾಜಮೌಳಿ, ನಟ ಜ್ಯೂ.ಎನ್​ಟಿಆರ್​, ರಾಮ್​ ಚರಣ್​, ನಟಿ ಆಲಿಯಾ ಭಟ್​ ಈ ಕಾರ್ಯಕ್ರಮಕ್ಕೆ ಬರುವವರಿದ್ದರು. ಆದರೆ, ಈ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಇದರಿಂದ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಿರುವ ಸಾಧ್ಯತೆ ದಟ್ಟವಾಗಿದೆ.

‘ಆರ್​ಆರ್​ಆರ್​’ ಸಿನಿಮಾ 400 ಕೋಟಿ ಬಜೆಟ್​ನಲ್ಲಿ ಸಿದ್ಧವಾದ ಸಿನಿಮಾ. ಈ ಹಣವನ್ನು ಮರಳಿ ಪಡೆಯಬೇಕು ಎಂದರೆ ನೈಟ್​ ಕರ್ಫ್ಯೂ, ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಅವಕಾಶದಂತಹ ನಿರ್ಬಂಧಗಳು ಇರಬಾರದು. ‘ಆರ್​ಆರ್​ಆರ್​’ ರಿಲೀಸ್​ ಆದ ನಂತರದಲ್ಲಿ ಒಂದು ತಿಂಗಳವರೆಗೆ ಇದರ ಅಬ್ಬರ ಇರಲಿದೆ. ಈ ಕಾರಣಕ್ಕೆ ಸಿನಿಮಾ ತಂಡ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಕೊವಿಡ್​ ಪ್ರಕರಣ ಕಡಿಮೆ ಆದರೆ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಪ್ರಭಾಸ್​ ನಟನೆಯ ‘ರಾಧೆ ಶ್ಯಾಮ್​’ ಚಿತ್ರದ ರಿಲೀಸ್​ ದಿನಾಂಕವೂ ಮುಂದೂಡಲ್ಪಡುವ ಸೂಚನೆ ಸಿಕ್ಕಿದೆ. ಈ ಸಿನಿಮಾ ಜನವರಿ 14ರಂದು ತೆರೆಗೆ ಬರಬೇಕಿತ್ತು.

‘ಆರ್​ಆರ್​ಆರ್​’ ಸಿನಿಮಾ ರೇಸ್​ನಿಂದ ಹಿಂದೆ ಸರಿಯುತ್ತಿದ್ದಂತೆ, ಪವನ್​ ಕಲ್ಯಾಣ್​ ನಟನೆಯ ‘ಭೀಮ್ಲಾ ನಾಯಕ್​’ ರಿಲೀಸ್​ಗೆ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ರಾನಾ ದಗ್ಗುಬಾಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು.

ಎಸ್​ಎಸ್​ ರಾಜಮೌಳಿ ನಿರ್ದೇಶನ ಇರುವ ಈ ಸಿನಿಮಾದಲ್ಲಿ, ರಾಮ್​ ಚರಣ್​ ಹಾಗೂ ಜ್ಯೂ.ಎನ್​ಟಿಆರ್​  ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.  ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್​ ಅವರು ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ನಟ ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ಮುಖ್ಯ ಪಾತ್ರ ನಿಭಾಯಿಸಿದ್ದಾರೆ.  ಟ್ರೇಲರ್​ ನೋಡಿದ ಸಿನಿಪ್ರಿಯರು ಫಿದಾ ಆಗಿದ್ದಾರೆ. ‘ಜನನಿ..’ ಹಾಡು ಕೂಡ ಗಮನ ಸೆಳೆದಿದೆ.

ಇದನ್ನೂ ಓದಿ: Liger First Glimpse: 24 ಗಂಟೆಯಲ್ಲಿ 16 ಮಿಲಿಯನ್ ವೀಕ್ಷಣೆ ಪಡೆದು ದಾಖಲೆ ಬರೆದ ವಿಜಯ್ ದೇವರಕೊಂಡ ನಟನೆಯ ಲೈಗರ್

‘ಆರ್​ಆರ್​ಆರ್​’ ಚಿತ್ರದಲ್ಲಿ ಆಲಿಯಾ, ಅಜಯ್​ ದೇವಗನ್​ ಅತಿಥಿ ಪಾತ್ರ; ಸತ್ಯ ಬಾಯ್ಬಿಟ್ಟ ರಾಜಮೌಳಿ

Published On - 12:32 pm, Sat, 1 January 22

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ