Kantara Movie: ‘ಕಾಂತಾರ’ ಚಿತ್ರದ ಯಶಸ್ಸು ಅತಿ ಹೆಚ್ಚು ಅಚ್ಚರಿ ಮೂಡಿಸಿದ್ದು ರಾಜಮೌಳಿಗೆ; ಕಾರಣ ಇಲ್ಲಿದೆ..

SS Rajamouli | Rishab Shetty: ‘ಕಾಂತಾರ’ ಸಿನಿಮಾ ಬಗ್ಗೆ ನಿರ್ದೇಶಕ ರಾಜಮೌಳಿ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ನಾವೇನು ಮಾಡುತ್ತಿದ್ದೇವೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.

Kantara Movie: ‘ಕಾಂತಾರ’ ಚಿತ್ರದ ಯಶಸ್ಸು ಅತಿ ಹೆಚ್ಚು ಅಚ್ಚರಿ ಮೂಡಿಸಿದ್ದು ರಾಜಮೌಳಿಗೆ; ಕಾರಣ ಇಲ್ಲಿದೆ..
ರಾಜಮೌಳಿ - ‘ಕಾಂತಾರ’
Follow us
TV9 Web
| Updated By: ಮದನ್​ ಕುಮಾರ್​

Updated on:Dec 11, 2022 | 8:49 AM

ಕನ್ನಡ ಸಿನಿಮಾಗಳ ಬಗ್ಗೆ ಇಡೀ ದೇಶವೇ ಮಾತನಾಡುತ್ತಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನಂತರ ‘ಕಾಂತಾರ’ (Kantara Movie) ಚಿತ್ರ ಕೂಡ ಅತಿ ದೊಡ್ಡ ಯಶಸ್ಸು ಪಡೆದುಕೊಂಡಿದೆ. ಈ ಸಿನಿಮಾ ಕುರಿತು ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈಗ ಖ್ಯಾತ ನಿರ್ದೇಶಕ ರಾಜಮೌಳಿ (SS Rajamouli) ಕೂಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಕನ್ನಡದಲ್ಲಿ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಮೋಡಿ ಮಾಡಿದೆ. ಹಿಂದಿ ಮತ್ತು ತೆಲುಗು ಪ್ರೇಕ್ಷಕರು ‘ಕಾಂತಾರ’ ಸಿನಿಮಾವನ್ನು ಮುಗಿಬಿದ್ದು ನೋಡಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ನಟನೆ, ನಿರ್ದೇಶನದ ಈ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವುದು ರಾಜಮೌಳಿ ಅವರಿಗೆ ಅಚ್ಚರಿ ಮೂಡಿಸಿದೆ. ಅವರ ಅಚ್ಚರಿಗೆ ಕಾರಣ ಆಗಿರುವುದು ಚಿತ್ರದ ಬಜೆಟ್​!

ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಲು ಚಿತ್ರದ ಬಜೆಟ್​ ಕೂಡ ದೊಡ್ಡದಾಗಿಯೇ ಇರಬೇಕು ಎಂಬ ವಾದವೊಂದಿದೆ. ರಾಜಮೌಳಿ ಅವರ ಸಿನಿಮಾಗಳೆಲ್ಲವೂ ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತವೆ. ಆದರೆ ‘ಕಾಂತಾರ’ ತಯಾರಾಗಿದ್ದು ಸಣ್ಣ ಬಜೆಟ್​ನಲ್ಲಿ. ಈ ಚಿತ್ರ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿರುವುದರ ಬಗ್ಗೆ ರಾಜಮೌಳಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rishab Shetty: ದೇಶಾದ್ಯಂತ ‘ಕಾಂತಾರ’ ಗೆದ್ದಿದ್ದು ಯಾಕೆ? ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ರಿಷಬ್​ ಶೆಟ್ಟಿ

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಫಿಲ್ಮ್​ ಕಂಪ್ಯಾನಿಯನ್​’ಗೆ ನೀಡಿದ ಸಂದರ್ಶನದಲ್ಲಿ ರಾಜಮೌಳಿ ಅವರು ಈ ಕುರಿತು ಮಾತನಾಡಿದ್ದಾರೆ. ‘ದೊಡ್ಡ ಬಜೆಟ್​ನ ಸಿನಿಮಾಗಳು ಒಂದು ರೀತಿ ಇವೆ. ತಕ್ಷಣ ಕಾಂತಾರ ರೀತಿಯ ಚಿತ್ರ ಬರುತ್ತದೆ. ಈ ಸಿನಿಮಾದ ಬಾಕ್ಸ್​ ಆಫೀಸ್​ ಗಳಿಕೆ ನೋಡಿ. ದೊಡ್ಡ ಕಲೆಕ್ಷನ್​ ಮಾಡಲು ದೊಡ್ಡ ಬಜೆಟ್​ ಬೇಕಿಲ್ಲ. ಕಾಂತಾರ ರೀತಿಯ ಸಣ್ಣ ಬಜೆಟ್​ ಚಿತ್ರ ಕೂಡ ಆ ಸಾಧನೆ ಮಾಡಬಹುದು. ವೀಕ್ಷಕರಾಗಿ ನೋಡಿದಾಗ ಕಾಂತಾರ ಚಿತ್ರ ಎಕ್ಟೈಟ್​ ಎನಿಸುತ್ತದೆ. ಆದರೆ ಸಿನಿಮಾದವರಾಗಿ ನೋಡಿದಾಗ ನಾವೇನು ಮಾಡುತ್ತಿದ್ದೇವೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕಾಗಿದೆ’ ಎಂದು ರಾಜಮೌಳಿ ಹೇಳಿದ್ದಾರೆ.

ಇದನ್ನೂ ಓದಿ: Rishab Shetty: ‘ಕಾಂತಾರ’ ಹೀರೋ ರಿಷಬ್​ ಶೆಟ್ಟಿ ಜೊತೆ ಸೆಲ್ಫಿಗೆ ಮುಗಿಬಿದ್ದ ಕಲಬುರಗಿ ಅಭಿಮಾನಿಗಳು

ಟಾಪ್​ 5 ಸಿನಿಮಾಗಳಲ್ಲಿ ‘ಕೆಜಿಎಫ್​ 2’, ‘ಕಾಂತಾರ’:

ಗೂಗಲ್​ ಹುಡುಕಾಟದಲ್ಲಿ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ. ಮೊದಲ ಸ್ಥಾನದಲ್ಲಿ ರಣಬೀರ್​ ಕಪೂರ್​-ಆಲಿಯಾ ಭಟ್​ ಜೋಡಿಯ ‘ಬ್ರಹ್ಮಾಸ್ತ್ರ’ ಸಿನಿಮಾ ಇದೆ. ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನದಲ್ಲಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾ ಇದೆ. ನಾಲ್ಕನೇ ಸ್ಥಾನವನ್ನು ‘ಕಾಂತಾರ’ ಚಿತ್ರ ಪಡೆದುಕೊಂಡಿದ್ದರೆ, ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 5ನೇ ಸ್ಥಾನದಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:49 am, Sun, 11 December 22

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಡಾಮಿನೇಟ್ ಮಾಡುವ ಪ್ರವೃತ್ತಿ ರಜತ್​ಗೆ ಮುಳುವಾಯಿತೇ?
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ
ಅಧಿಕಾರಿಗಳು ಕೇವಲ ಸಿದ್ದರಾಮಯ್ಯ ಪ್ರಕರಣದಲ್ಲಿ ತಪ್ಪು ಮಾಡ್ತಾರೆಯೇ? ಕೃಷ್ಣ