Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ

Padma Awards: ನಟ ಪುನೀತ್​ಗೆ ಪದ್ಮ ಪ್ರಶಸ್ತಿಗೆ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿರುವ ಬೆನ್ನಲ್ಲೇ ಸರ್ಕಾರ ಈ ಕುರಿತು ಗಂಭೀರ ಚಿಂತನೆ ನಡೆಸಿದೆ. ಹೆಸರು ಶಿಫಾರಸ್ಸು ಮಾಡುವ ಕುರಿತಂತೆ ಸಿಎಂ ಬೊಮ್ಮಾಯಿ ಸುಳಿವು ಬಿಟ್ಟುಕೊಟ್ಟಿದ್ದಾರೆ.

Puneeth Rajkumar: ಪುನೀತ್​ಗೆ ಪದ್ಮ ಪ್ರಶಸ್ತಿ ನೀಡಲು ಅಭಿಮಾನಿಗಳ ಒತ್ತಾಯ; ಅಗತ್ಯ ಕ್ರಮಕ್ಕೆ ಮುಂದಾದ ಸರ್ಕಾರ
ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: shivaprasad.hs

Updated on:Nov 06, 2021 | 10:01 AM

ನಟ ಪುನೀತ್‌ಗೆ ಪದ್ಮ ಪ್ರಶಸ್ತಿ ನೀಡುವಂತೆ ಒತ್ತಾಯ ಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲೇ ಕೇಂದ್ರಕ್ಕೆ ನಟ ಪುನೀತ್ ಹೆಸರಿನ ಶಿಫಾರಸು ಪತ್ರ ಕಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಭಿಮಾನಿಗಳು ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿಗೆ ಒತ್ತಾಯಿಸಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇತ್ತೀಚೆಗೆ ಸಿಎಂ ಕೂಡ ಪುನೀತ್​ಗೆ ಪದ್ಮಶ್ರೀ ನೀಡುವ ವಿಚಾರಕ್ಕೆ ಸಮ್ಮತವಿದೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದರು. 

ಪುನೀತ್ ಪುತ್ಥಳಿ ಪ್ರತಿಷ್ಠಾಪಿಸುವ ಮುನ್ನ ಅನುಮತಿ ಪಡೆಯುವಂತೆ ಬಿಬಿಎಂಪಿ ಕೋರಿಕೆ ಬೆಂಗಳೂರಿನಲ್ಲಿ ನಟ ಪುನೀತ್ ಪುತ್ಥಳಿ ಪ್ರತಿಷ್ಠಾಪನೆಗೆ ಸಿದ್ಧತೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದು, ಪುತ್ಥಳಿ ಪ್ರತಿಷ್ಠಾಪನೆಗೆ ಸ್ಥಳ ಗುರುತು ಮಾಡಿದ್ದಾರೆ. ಈ ನಡುವೆ ಬಿಬಿಎಂಪಿ ಫ್ಯಾನ್ಸ್ ಬಳಿ ಮನವಿ ಮಾಡಿಕೊಂಡಿದ್ದು, ಅನಧಿಕೃತವಾಗಿ ಪುತ್ಥಳಿ ಪ್ರತಿಷ್ಠಾಪಿಸದಂತೆ ಕೋರಿಕೊಂಡಿದೆ. ಅನಧಿಕೃತ ಪುತ್ಥಳಿ ತೆರವಿಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ , ಅನುಮತಿ ಪಡೆಯದೆ ಯಾವುದೇ ಪುತ್ಥಳಿ ಸ್ಥಾಪಿಸುವಂತಿಲ್ಲ. ಹೀಗಾಗಿ ಬಿಬಿಎಂಪಿ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಇಡದಂತೆ ಸೂಚನೆ ನೀಡಲಾಗಿದ್ದು, ಫುಟ್ ಪಾತ್, ಸಾರ್ವಜನಿಕರು ಓಡಾಡೋ ಸ್ಥಳ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತಹ ಸ್ಥಳ ಗುರುತಿಸಲು ಸೂಚನೆ ನೀಡಲಾಗಿದೆ.

ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ರಾಜಕುಮಾರ್ ಅವರಿಗೆ ವಿಶೇಷ ನಮನ: ಅಕಾಲಿಕ ನಿಧನದಿಂದ ದೂರವಾದ ನಟ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ:

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

ಪುನೀತ್ ರಾಜಕುಮಾರ್ ಅವರ ಆದರ್ಶ ಮತ್ತು ಸಮಾಜಮುಖಿ ಚಿಂತನೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ: ಎಮ್ ಪಿ ರೇಣುಕಾಚಾರ್ಯ

Published On - 10:00 am, Sat, 6 November 21

ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ