AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಹೆಸರಲ್ಲಿ ಹೊಸ ಪ್ರಶಸ್ತಿ ಸ್ಥಾಪಿಸಿದ ಸರ್ಕಾರ

ಕನ್ನಡ ಚಿತ್ರರಂಗಕ್ಕೆ ಇದು ಸಿಹಿ ಸುದ್ದಿ. ಮಹಿಳೆಯರ ಸಾಧನೆ ಗುರುತಿಸಲು ರಾಜ್ಯ ಸರ್ಕಾರ ಹೊಸ ಪ್ರಶಸ್ತಿ ಸ್ಥಾಪಿಸಿದೆ. ಕನ್ನಡ ಚಿತ್ರರಂಗದ ಹಿರಿಯ ನಟಿ, ದಿವಂಗತ ಬಿ. ಸರೋಜಾದೇವಿ ಹೆಸರಿನಲ್ಲಿ ಹೊಸ ಪ್ರಶಸ್​ತಿಯನ್ನು ಆರಂಭಿಸಲಾಗಿದೆ. 25 ವರ್ಷಗಳ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿ ಸಿಗಲಿದೆ.

‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಹೆಸರಲ್ಲಿ ಹೊಸ ಪ್ರಶಸ್ತಿ ಸ್ಥಾಪಿಸಿದ ಸರ್ಕಾರ
B Saroja Devi
ಮದನ್​ ಕುಮಾರ್​
|

Updated on: Sep 17, 2025 | 6:36 PM

Share

ನಟಿ ಬಿ. ಸರೋಜಾದೇವಿ (B Saroja Devi) ಅವರು ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ ನಿಧನದ ನಂತರ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ನೀಡಲಾಯಿತು. ಅದರ ಬೆನ್ನಲ್ಲೇ ಇನ್ನೊಂದು ಸಿಹಿ ಸುದ್ದಿ ನೀಡಲಾಗಿದೆ. ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ (Abhinaya Saraswathi B Saroja Devi Award) ಹೆಸರಿನಲ್ಲಿ ಹೊಸ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಸ್ಥಾಪಿಸಿದೆ. ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಕನ್ನಡ ಚಿತ್ರರಂಗದಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಿಗೆ ಈ ಪ್ರಶಸ್ತಿ ಸಿಗಲಿದೆ. ಬಿ. ಸರೋಜಾದೇವಿ ಅವರ ಹೆಸರಿನಲ್ಲಿ ಈ ಗೌರವವನ್ನು ನೀಡಲಿರುವುದು ಅವರ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಸಂತಸ ತಂದಿದೆ.

‘ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ವಿಜೇತೆ ಬಿ. ಸರೋಜಾದೇವಿ ಅವರು ಪಂಚಭಾಷಾ ತಾರೆಯಾಗಿದ್ದು, ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಸ್ತುತ ಜಾರಿಯಲ್ಲಿ ಇರುವ ಕನ್ನಡ ಚಲನಚಿತ್ರ ನೀತಿ 2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ 1ರ ಅಡಿ 2025ನೇ ಕ್ಯಾಲೆಂಡರ್ ವರ್ಷದಿಂದ ಜಾರಿಗೆ ಬರುವಂತೆ ಹೊಸದಾಗಿ ಅಭಿನಯ ಸರಸ್ವತಿ ಬಿ. ಸರೋಜಾದೇವಿ ಪ್ರಶಸ್ತಿಯನ್ನು ಸ್ಥಾಪಿಸಿ ಆದೇಶಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಕನ್ನಡ ಚಿತ್ರರಂಗದಲ್ಲಿ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ‘ಅಭಿನಯ ಸರಸ್ವತಿ ಬಿ. ಸರೋಜಾದೇವಿ’ ಪ್ರಶಸ್ತಿಯನ್ನು ನೀಡಲಾಗುವುದು. ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ಹೊಂದಿರುತ್ತದೆ’ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಚಿತ್ರರಂಗಕ್ಕೆ ಮಹಿಳೆಯರ ಕೊಡುಗೆ ಕೂಡ ಸಾಕಷ್ಟಿದೆ. ನಟನೆ, ನಿರ್ಮಾಣ, ನಿರ್ದೇಶಶ, ಗಾಯನ, ವಸ್ತ್ರ ವಿನ್ಯಾಸ ಮುಂತಾದ ವಿಭಾಗಳಲ್ಲಿ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದಾರೆ. ಮೊದಲ ಬಾರಿಗೆ ರಾಜ್ಯದಲ್ಲಿ ಮಹಿಳೆಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಕ್ಕಿದ್ದರಿಂದ ಚಿತ್ರರಂಗದ ಅನೇಕರು ಸಂತಸ ವ್ಯಕ್ತಪಡಿಸಿದ್ದರು. ಈಗ ಹೊಸ ಪ್ರಶಸ್ತಿ ಸ್ಥಾಪಿಸಿರುವುದು ಕೂಸ ಸಂತಸಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಪ್ರತಿ ದಿನ ಬೆಳ್ಳಿ ತಟ್ಟೆಯಲ್ಲೇ ಊಟ ಮಾಡುತ್ತಿದ್ದ ನಟಿ ಬಿ. ಸರೋಜಾದೇವಿ

ಕೆಲವೇ ದಿನಗಳ ಹಿಂದೆ ನಟಿಯರಾದ ಶ್ರುತಿ, ಮಾಳವಿಕಾ ಅವಿನಾಶ್, ಜಯಮಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಹಾಗೂ ಅವರ ನಿವಾಸದ ರಸ್ತೆಗೆ ಸರೋಜಾದೇವಿ ಹೆಸರು ಇಡಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು