AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ಮಧ್ಯವೂ ‘ಸು ಫ್ರಮ್ ಸೋ’ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

Su From So Collection: ‘ಸು ಫ್ರಮ್ ಸೋ’ ಚಿತ್ರವು ತನ್ನ ಬಿಡುಗಡೆಯ ಆರು ದಿನಗಳಲ್ಲಿಯೇ ವಿಶ್ವದಾದ್ಯಂತ 19 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದೆ. ಯಾವುದೇ ದೊಡ್ಡ ನಟರನ್ನು ಒಳಗೊಂಡಿಲ್ಲದ ಈ ಚಿತ್ರದ ಯಶಸ್ಸು ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬಿದೆ.ವಾರದ ದಿನಗಳಲ್ಲೂ ಚಿತ್ರವು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುತ್ತಿದೆ.

ವಾರದ ಮಧ್ಯವೂ ‘ಸು ಫ್ರಮ್ ಸೋ’ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್
ರಾಜ್ ಬಿ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 31, 2025 | 6:58 AM

Share

‘ಸು ಫ್ರಮ್ ಸೋ’ ಸಿನಿಮಾ (Su From So) ವಾರದ ಮಧ್ಯದಲ್ಲಿ ಅಂದರೆ ಬುಧವಾರ (ಜುಲೈ 30) ಬಂಗಾರದ ಬೆಳೆ ತೆಗೆದಿದೆ. ಈ ಸಿನಿಮಾ ಮಾಡುತ್ತಿರುವ ಕಲೆಕ್ಷನ್​ಗೆ ಹಲವು ದಾಖಲೆಗಳು ಉಡೀಸ್ ಆಗಿವೆ. ಈ ಚಿತ್ರ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ಕೊಟ್ಟಿದೆ. ಇನ್ನೂ ಕೆಲವು ದಿನ ಕಲೆಕ್ಷನ್ ಹೀಗೆಯೇ ಮುಂದುವರೆಯುವ ಸಾಧ್ಯತೆ ಇದೆ. ಈ ಚಿತ್ರದ ಗೆಲುವಿನಿಂದ ತಂಡದವರ ಮೊಗದಲ್ಲಿ ನಗು ಮೂಡಿದೆ.

‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ರಿಲೀಸ್ ಆಯಿತು. ಚಿತ್ರದ ಆರು ದಿನಗಳ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ 19 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಚಿತ್ರ ಸುಮಾರು 16.20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇನ್ನು ಬುಧವಾರ ಕೂಡ ಸಿನಿಮಾ 3.50 ಕೋಟಿ ಬಾಚಿಕೊಂಡಿದೆ ಎಂಬುದು ವಿಶೇಷ.

ಶನಿವಾರ ಹಾಗೂ ಭಾನುವಾರ ಭರ್ಜರಿ ಗಳಿಕೆ ಮಾಡುವ ಸಿನಿಮಾಗಳು ವಾರದ ದಿನಗಳಲ್ಲಿ ಮಂಕಾಗುತ್ತವೆ. ಇದು ದೊಡ್ಡ ಬಜೆಟ್ ಸಿನಿಮಾಗಳಿಗೂ ಅನ್ವಯ ಆಗುತ್ತದೆ. ಹಲವು ಚಿತ್ರಗಳಿಗೆ ಈ ರೀತಿ ಆಗಿದ್ದು ಇದೆ. ಆದರೆ, ‘ಸು ಫ್ರಮ್ ಸೋ’ ವಿಚಾರದಲ್ಲಿ ಮಾತ್ರ ಅದು ಉಲ್ಟಾ ಆಗಿದೆ. ಭಾನುವಾರದಿಂದ ಆರಂಭ ಆಗಿ ಬುಧವಾರದವರೆಗೆ ಸಿನಿಮಾದ ಸರಾಸರಿ ಮೂರರಿಂದ ಮೂರುವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

ಇದನ್ನೂ ಓದಿ
Image
ಬಂಡುಕೋರನ ಅವತಾರದಲ್ಲಿ ರಿಷಬ್; ರಾಜಮೌಳಿ ಗರಡಿಯ ನಿರ್ದೇಶಕನ ಜೊತೆ ಸಿನಿಮಾ
Image
ರಾಕಿಂಗ್ ಸ್ಟಾರ್ ಯಶ್ ಅಂದು ಹೇಳಿದ ಮಾತು ನಿಜಮಾಡಿದ ರಾಜ್ ಬಿ. ಶೆಟ್ಟಿ, ಜೆಪಿ
Image
ಸೋನು ಸೂದ್ ಜನ್ಮದಿನ; ನಟನೆ ಕಡಿಮೆ ಮಾಡಿದರೂ ತಗ್ಗಿಲ್ಲ ನಟನ ಆಸ್ತಿ
Image
ಹೀನಾಯ ಸ್ಥಿತಿ ತಲುಪಿದ ‘ಹರಿ ಹರ ವೀರ ಮಲ್ಲು’ ಕಲೆಕ್ಷನ್; ಪವನ್ ಕನಸು ಭಗ್ನ

ಇದನ್ನೂ ಓದಿ: ರಾಕಿಂಗ್ ಸ್ಟಾರ್ ಯಶ್ ಅಂದು ಹೇಳಿದ ಮಾತು ನಿಜಮಾಡಿದ ರಾಜ್ ಬಿ. ಶೆಟ್ಟಿ, ಜೆಪಿ

ಯಾವುದೇ ಸ್ಟಾರ್ಸ್ ಇಲ್ಲದೆ ಹೊಸ ತಂಡದ ಸಿನಿಮಾವೊಂದು ಈ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಿರುವುದು ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು. ಹೀಗಾಗಿ, ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಈ ಚಿತ್ರ ನಾಳೆಯಿಂದ (ಆಗಸ್ಟ್ 1) ಮಲಯಾಳಂನಲ್ಲಿ ರಿಲೀಸ್ ಆಗಲಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚಲಿದೆ. ಒಟ್ಟಾರೆಯಾಗಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:56 am, Thu, 31 July 25

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ