50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು? ಇಲ್ಲಿದೆ ವಿವರ

ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಕನ್ನಡ ಚಿತ್ರವು 50 ಕೋಟಿ ರೂಪಾಯಿಗಿಂತಲೂ ಅಧಿಕ ಕಲೆಕ್ಷನ್ ಮಾಡಿದೆ. ಚಿತ್ರದ ಯಶಸ್ಸಿನಿಂದಾಗಿ ಅನೇಕ ಕಲಾವಿದರಿಗೆ ಮನ್ನಣೆ ದೊರೆತಿವೆ. ಈ ಚಿತ್ರದ ಗಳಿಕೆಯ ವಿವರಗಳು ಮತ್ತು ಯಶಸ್ಸಿನ ಹಿಂದಿನ ಕಾರಣಗಳನ್ನು ಇಲ್ಲಿ ವಿವರಿಸಲಾಗಿದೆ.

50 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಸು ಫ್ರಮ್ ಸೋ’; ಎಲ್ಲಿಂದ ಎಷ್ಟು ಬಂತು? ಇಲ್ಲಿದೆ ವಿವರ
ಸು ಫ್ರಮ್ ಸೋ

Updated on: Aug 07, 2025 | 7:37 AM

ರಾಜ್ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So Movie) 50 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಅವರು ಈ ಚಿತ್ರದಿಂದ ದೊಡ್ಡ ಗೆಲುವು ಕಂಡಿದ್ದಾರೆ. ನಿರ್ದೇಶಕ ಜೆಪಿ ತುಮಿನಾಡ ಮೊದಲ ಪ್ರಯತ್ನದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ನಗೆ ಗಡಲಿನಲ್ಲಿ ತೇಲಿಸುತ್ತಾ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಕೊಡುವ ಚಿತ್ರ ‘ಸು ಫ್ರಮ್ ಸೋ’. ಈ ಸಿನಿಮಾ ವಿವಿಧ ಹಂತಗಳಲ್ಲಿ ಗಳಿಕೆ ಮಾಡಿದೆ. ಆ ಬಗ್ಗೆ ಇಲ್ಲಿ ಸಂಪೂರ್ಣ ವಿವರ ಇದೆ.

‘ಸು ಫ್ರಮ್ ಸೋ’ ಸಿನಿಮಾ ಮೊದಲ ದಿನ (ಜುಲೈ 25) ಕಲೆಕ್ಷನ್ ಮಾಡಿದ್ದು ಕೇವಲ 78 ಲಕ್ಷ ರೂಪಾಯಿ. ಆ ಬಳಿಕ ಸಿನಿಮಾಗೆ ಶೋಗಳ ಸಂಖ್ಯೆ ಹೆಚ್ಚಿತು. ಜುಲೈ 27ರಿಂದ ಆಗಸ್ಟ್ 5ರವರೆಗೆ ಸಿನಿಮಾ ನಿರಂತರವಾಗಿ 3+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿರುವುದು ಚಿತ್ರದ ಹೆಚ್ಚುಗಾರಿಕೆ. ಆಗಸ್ಟ್ 6ರಂದು ಸುಮಾರು ಎರಡೂವರೆ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.  ಈ ಸಿನಿಮಾದ ಕಲೆಕ್ಷನ್ ಅನೇಕರಿಗೆ ಅಚ್ಚರಿ ತಂದಿದೆ. ಕನ್ನಡ ಸಿನಿಮಾ ನೋಡೋಕೆ ಪ್ರೇಕ್ಷಕರಿಲ್ಲ ಎಂದು ಬೇಸರ ಪಟ್ಟುಕೊಳ್ಳುತ್ತಿದ್ದವರು, ಈಗ ಟಿಕೆಟ್ ಸಿಗುತ್ತಿಲ್ಲ ಎಂದು ಒದ್ದಾಡುವ ಸ್ಥಿತಿ ನಿರ್ಮಾಣ ಆಗಿದೆ.

‘ಸು ಫ್ರಮ್ ಸೋ’ ಸಿನಿಮಾ ಈವರೆಗೆ 55 ಕೋಟಿ ರೂಪಾಯಿಗೂ ಅಧಿ ಕಲೆಕ್ಷನ್ ಮಾಡಿದೆ ಎಂದು sacnilk ವರದಿ ಹೇಳಿದೆ. ಕನ್ನಡ ಒಂದರಿಂದಲೇ ಚಿತ್ರಕ್ಕೆ ಸರಿ ಸುಮಾರು 50 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ವಿದೇಶದಿಂದ ಸಿನಿಮಾಗೆ 4 ಕೋಟಿ ರೂಪಾಯಿ ಹರಿದು ಬಂದಿದೆ. ಮಲಯಾಳಂ ಭಾಷೆಯಿಂದ 1.35 ಕೋಟಿ ರೂಪಾಯಿ ಗಳಿಕೆ ಆಗಿದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ
ಪತಿಗೆ ಎಂದೂ ಮರೆಯಲಾರದ ಉಡುಗೊರೆ ಕೊಟ್ಟ ಸೋನಲ್; ಭಾವುಕರಾಗಿ ಕೈ ಮುಗಿದ ತರುಣ್
ಜೂ. ಎನ್​ಟಿಆರ್​ಗೆ ಸಿದ್ಧತೆಯೇ ಬೇಡ; ಡ್ಯಾನ್ಸ್ ಸ್ಟೆಪ್ ನೋಡಿ ದಂಗಾದ ಹೃತಿಕ್
ರಾಜ್ ಬಿ. ಶೆಟ್ಟಿ ಬಳಿ ಇವೆ ಮೂರು ಅದ್ಭುತ ಪ್ರಾಜೆಕ್ಟ್​​ಗಳು; ಇಲ್ಲಿದೆ ವಿವರ
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

‘ಸು ಫ್ರಮ್ ಸೋ’ ಸಿನಿಮಾ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಹಲವರು ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಿಸಿ ಬಂದಿದ್ದಾರೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅನೇಕ ಕಲಾವಿದರ ವೃತ್ತಿ ಜೀವನಕ್ಕೆ ಹೆಚ್ಚು ಮೈಲೇಜ್ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: ಬಾವನ ಬದುಕು ಬದಲಿಸಿತು ರಿಷಬ್ ಮಾಡಿದ್ದ ಆ ಒಂದು ಆಡಿಷನ್; ಪುಷ್ಪರಾಜ್ ಜೀವನದ ಸ್ವಾರಸ್ಯಕರ ಕಥೆ

‘ಸು ಫ್ರಮ್ ಸೋ’ ಸಿನಿಮಾದ ಒಟಿಟಿ ಹಾಗೂ ಟಿವಿ ಹಕ್ಕಿನ ಮಾರಾಟದ ಬಗ್ಗೆ ಒಪ್ಪಂದ ಆಗಿದೆ ಎನ್ನಲಾಗುತ್ತಿದೆ. ಸಿನಿಮಾ ಥಿಯೇಟರ್​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವುದರಿಂದ ಸದ್ಯಕ್ಕಂತೂ ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್ ಮಾಡೋದು ಅನುಮಾನವೇ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.